ಮೋದಿಗೆ ಧಮ್ಕಿ ಹಾಕಿದಷ್ಟು ಅವರ ಪರ ಅಲೆ ಏಳಲಿದೆ: ಕಾಂಗ್ರೆಸ್ ವಿರುದ್ಧ ಗುಡುಗಿದ ಅಮಿತ್ ಶಾ
ಗರೀಬಿ ಹಠಾವೋ ಎಂದು ಕಾಂಗ್ರೆಸ್ನವರು ಕೇವಲ ಭಾಷಣದಲ್ಲಿ ಹೇಳುತ್ತಿದ್ದರು. ಬಡತನ ನಿರ್ಮೂಲನೆಗೆ ಕಾಂಗ್ರೆಸ್ ಯಾವುದೇ ಕ್ರಮಕೈಗೊಳ್ಳಲಿಲ್ಲ ಎಂದು ಹುಬ್ಬಳ್ಳಿ ಧಾರವಾಡದಲ್ಲಿ ವಾಗ್ದಾಳಿ ನಡೆಸಿದ ಅಮಿತ್ ಶಾ, ಬಿಜೆಪಿ ಸರ್ಕಾರ 4,10,000 ಮನೆಗಳನ್ನು ನಿರ್ಮಾಣ ಮಾಡಿದೆ ಎಂದರು.
ಹುಬ್ಬಳ್ಳಿ/ಧಾರವಾಡ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ವಿಷ ಸರ್ಪಕ್ಕೆ ಹೋಲಿಸ್ತಾರೆ. ಇಂತಹ ಕಾಂಗ್ರೆಸ್ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲಿಸದಂತೆ ಬಿಜೆಪಿ ಚಾಣಕ್ಯ, ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಹೇಳಿದರು. ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಅವರನ್ನು ಸೋನಿಯಾ ಗಾಂಧಿ (Sonia Gandhi) ಮೌತ್ ಕಾ ಸೌದಾಗರ್ ಅಂತಾರೆ, ರಾಹುಲ್ ಗಾಂಧಿ (Rahul Gandhi) ನೀಚ ಜಾತಿ ಜನ ಅಂತಾರೆ. ಮೋದಿಗೆ ನೀವು ಹೀಗಳೆದಷ್ಟೂ ಕಮಲ ಮತ್ತಷ್ಟು ಅರಳುತ್ತದೆ. ಮೋದಿಗೆ ಧಮ್ಕಿ ಕೊಟ್ಟಷ್ಟು ಅವರ ಪರ ಅಲೆ ಏಳಲಿದೆ ಎಂದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರತ್ಯೇಕ ಕೃಷಿ ಬಜೆಟ್ ಮಾಡಿದ್ದರು. ಆ ಮೂಲಕ ಕೃಷಿಕರ ಕಲ್ಯಾಣಕ್ಕೆ ಶ್ರಮಿಸಿದರು ಎಂದು ಹೇಳಿದ ಅಮಿತ್ ಶಾ, ಉತ್ತರ ಕರ್ನಾಟಕದ ರೈತರ ಜೀವನಲ್ಲಿ ಅವರು ಖುಷಿ ತಂದರು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ಇದ್ದ ಕಬ್ಬಿನ ದರವನ್ನು ಬಿಜೆಪಿ ಹೆಚ್ಚಿಸಿತು. ಕೇಂದ್ರ, ಕರ್ನಾಟಕ ಮತ್ತು ಗೋವಾದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಮಹಾದಾಯಿ ವಿವಾದ ಬಗೆಹರಿಸಲಿಲ್ಲ. ಕಳಸಾ ಬಂಡೂರಿ ಯೋಜನೆ ಚಾಲನೆಗೆ ಮೋದಿ ಕಾರಣಕರ್ತರಾದರು. ಮೋದಿ ಒಂಬತ್ತು ವರ್ಷದಲ್ಲಿ ದೇಶದ ಮಾನ ಹೆಚ್ಚಿಸಿದ್ದಾರೆ, ಮೂಲಭೂತ ಸೌಕರ್ಯ ಹೆಚ್ಚಿಸಿದ್ದಾರೆ, ಗಡಿಯಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಇಡೀ ವಿಶ್ವದಲ್ಲಿ ಮೋದಿ ಬಗ್ಗೆ ಅಭಿಮಾನದ ಮಾತುಗಳು ವ್ಯಕ್ತವಾಗುತ್ತಿವೆ. ಇಂತಹ ಮಹಾನ್ ನಾಯಕನ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಗರೀಬಿ ಹಠಾವೋ ಎಂದು ಕಾಂಗ್ರೆಸ್ನವರು ಕೇವಲ ಭಾಷಣದಲ್ಲಿ ಹೇಳುತ್ತಿದ್ದರು. ಬಡತನ ನಿರ್ಮೂಲನೆಗೆ ಕಾಂಗ್ರೆಸ್ ಯಾವುದೇ ಕ್ರಮಕೈಗೊಳ್ಳಲಿಲ್ಲ ಎಂದು ವಾಗ್ದಾಳಿ ನಡೆಸಿದ ಅಮಿತ್ ಶಾ, ಬಿಜೆಪಿ ಸರ್ಕಾರ 4,10,000 ಮನೆಗಳನ್ನು ನಿರ್ಮಾಣ ಮಾಡಿದೆ ಎಂದರು.
ಇದನ್ನೂ ಓದಿ: ಲಿಂಗಾಯತ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಸಿದ್ದರಾಮಯ್ಯ, ಅಮಿತ್ ಶಾ ಹೇಳಿದ್ದೇನು ಗೊತ್ತಾ?
ಧಾರವಾಡದ ಅಣ್ಣಿಗೇರಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಶಾ, ಬಸವಣ್ಣನವರು ಸಮಾಜ ಸುಧಾರಣೆಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಸಮಗ್ರ ಕರ್ನಾಟಕದ ಅಭಿವೃದ್ಧಿಗಾಗಿ ನೀವು ನಿರ್ಣಯ ಮಾಡಿ. ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಮತ್ತಷ್ಟು ಕುಂಠಿತಗೊಳ್ಳಲಿದೆ. ಕಾಂಗ್ರೆಸ್ ಪಕ್ಷದಿಂದ ರೈತರಿಗೆ ಯಾವಾಗಲೂ ಅನ್ಯಾಯವಾಗಿದೆ. ರೈತರ ಮೇಲೆ ಗೋಲಿಬಾರ್ ಮಾಡಿಸಿದ್ದು ಇದೇ ಕಾಂಗ್ರೆಸ್ ಎಂಬುದನ್ನು ಮರೆಯಬೇಡಿ ಎಂದರು. ಚುನಾವಣೆಯಲ್ಲಿ ಶಂಕರಪಾಟೀಲ ಮತ್ತು ಅನಿಲ್ ಮೆಣಸಿನಕಾಯಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಕರ್ನಾಟಕದ ಭವಿಷ್ಯ ಈ ಚುನಾವಣೆ ಮೇಲೆ ನಿಂತಿದೆ. ರಾಹುಲ್ ಬಾಬಾ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವಿದೆ. ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರವಿದೆ. ಕಾಂಗ್ರೆಸ್ ರಿವರ್ಸ್ ಗೇರ್ ಸರ್ಕಾರ, ರಿವರ್ಸ್ ಗೇರ್ ಸರ್ಕಾರ ಬಯಸುತ್ತೀರಾ ಎಂದು ಪ್ರಶ್ನಿಸಿದ ಶಾ, ರಿವರ್ಸ್ ಗೇರ್ ಸರ್ಕಾರದಿಂದ ಯಾರ ಅಭಿವೃದ್ಧಿಯೂ ಸಾಧ್ಯವಿಲ್ಲ. ರೈತರ ಮೇಲೆ ಲಾಠಿ, ಗುಂಡೇಟು ಹೊಡೆದ ಕಾಂಗ್ರೆಸ್ಗೆ ಮತ ಕೇಳುವ ನೈತಿಕತೆಯಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಗ್ಯಾರಂಟಿಗಳನ್ನು ನಂಬಬೇಡಿ: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಗ್ಯಾರಂಟಿಗಳನ್ನು ನಂಬಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕೇವಲ ಚುನಾವಣಾ ಪ್ರಚಾರಕ್ಕೆ ಗ್ಯಾರಂಟಿ ಘೋಷಿಸಿದೆ. ಅಧಿಕಾರಕ್ಕೆ ಬರುವ ಗ್ಯಾರಂಟಿ ಕಾಂಗ್ರೆಸ್ ಪಕ್ಷದವರಿಗೇ ಇಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಗಳದಲ್ಲಿ ಸರ್ಕಾರ ಬರುವುದೇ ಗ್ಯಾರಂಟಿ ಇಲ್ಲ ಎಂದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:25 pm, Fri, 28 April 23