ನಾಮಪತ್ರ ಸಲ್ಲಿಕೆ ಅವಧಿ ಮುಗಿಯುತ್ತಿದ್ದಂತೆಯೇ ನಾಳೆ ಬೆಂಗಳೂರಿಗೆ ಅಮಿತ್ ಶಾ, ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ

ಕೇಂದ್ರ ಸಚಿವ ಅಮಿತ್ ಶಾ ನಾಳೆ(ಏಪ್ರಿಲ್ 21) ಬೆಂಗಳೂರಿಗೆ ಆಗಮಿಸಲಿದ್ದು, ಬಿಜೆಪಿ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ನಾಮಪತ್ರ ಸಲ್ಲಿಕೆ ಅವಧಿ ಮುಗಿಯುತ್ತಿದ್ದಂತೆಯೇ ನಾಳೆ ಬೆಂಗಳೂರಿಗೆ ಅಮಿತ್ ಶಾ, ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ
ಕೇಂದ್ರ ಸಚಿವ ಅಮಿತ್​ ಶಾ

Updated on: Apr 20, 2023 | 12:53 PM

ಮುಖ್ಯಾಂಶಗಳು

  • ನಾಳೆ ಬೆಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ
  • ನಾಳೆ ಮಧ್ಯಾಹ್ನ 3.15ಕ್ಕೆ ಕೆಐಎಬಿಗೆ ಆಗಮಿಸಲಿರುವ ಅಮಿತ್ ಶಾ
  • ಏಪ್ರಿಲ್ 22 ರಂದು ಮಧ್ಯಾಹ್ನ 12 ಗಂಟೆಗೆ ಹೆಚ್ ಎಎಲ್ ಏರ್ ಪೋರ್ಟ್ ನಿಂದ ದೆಹಲಿಗೆ ನಿರ್ಗಮನ.

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023)ಇಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಈ ಉಮೇದುವಾರಿಕೆ ಸಲ್ಲಿಕೆ ಅವಧಿ ಮುಕ್ತಾಯವಾಗುತ್ತಿದ್ದಂತೆಯೇ ಬಿಜೆಪಿ(BJP) ಕೇಂದ್ರ ನಾಯಕರ ಚಿತ್ತ ಕರ್ನಾಟಕದತ್ತ ನೆಟ್ಟಿದೆ. ಈಗಾಗಲೇ ಚುನಾವಣೆ ಅಖಾಡಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧುಮುಕಿದ್ದು ಇದರ ಬೆನ್ನಲ್ಲೇ ಇದೀಗ ಕೇಂದ್ರ ಗೃಹ ಅಮಿತ್ ಶಾ(Amit Shah) ಹಾಗೂ ಮೋದಿ ಜೋಡಿ ಕಮಾಲ್ ಮಾಡಲು ಸಿದ್ಧವಾಗಿದೆ. ಅದರಂತೆ ಅಮಿತ್ ಶಾ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಅಂದರೆ ಏಪ್ರಿಲ್ 21 ಮತ್ತು 22 ರಂದು ಎರಡು ದಿನಗಳ ಕಾಲ ಅಮಿತ್ ಶಾ ರಾಜ್ಯ ಪ್ರವಾಸ ನಿಗದಿಯಾಗಿದ್ದು, ರೋಡ್ ಶೋ ಹಾಗೂ ರಾಜ್ಯ ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಬೆಂಬಲಿಗ: ಸಚಿವ ಶೋಭಾ ಕರಂದ್ಲಾಜೆ ಕಿಡಿ

ನಾಳೆ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ, ದೇವನಹಳ್ಳಿಯಲ್ಲಿ ಬೃಹತ್ ರೋಡ್​ ಶೋ ನಡೆಸಲಿದ್ದಾರೆ. ಬಳಿಕ ಸಂಜೆ 6 ಗಂಟೆಗೆ ರೇಸ್​ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ 9ರವರೆಗೆ ರಾಜ್ಯ BJP ನಾಯಕರ ಜತೆ ಅಮಿತ್ ಶಾ ಸಭೆ ಮಾಡಲಿದ್ದು, ಅದೇ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಏಪ್ರಿಲ್ 22ರಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಅಂದು ಮಧ್ಯಾಹ್ನ 12 ಗಂಟೆಗೆ ಹೆಚ್​ಎಎಲ್ ಏರ್ ಪೋರ್ಟ್ ದೆಹಲಿಗೆ ವಾಪಸಾಗಲಿದ್ದಾರೆ.

ಕರ್ನಾಟಕದಲ್ಲಿ ಮೋದಿ ಪ್ರಚಾರ

ಇನ್ನು ಪ್ರಧಾನಿ ನರೇಂದ್ರ ಮೋದಿ ಸಹ ಇದೇ ಏಪ್ರಿಲ್ 29ರಿಂದ ಕರ್ನಾಟಕದಲ್ಲಿ ಪ್ರಚಾರ ಆರಂಭಿಸಲಿದ್ದು, ಒಟ್ಟು 180 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತಬೇಟೆ ನಡೆಸಲಿದ್ದಾರೆ. ಇದಕ್ಕೆ ಹೀಗಾಗಲೇ ನರೇಂದ್ರ ಮೋದಿ ಅವರ ರೂಪ್ ಮ್ಯಾಪ್​ ಸಹ ಸಿದ್ಧವಾಗಿದೆ.

ರೋಡ್ ಶೋ, ರ್ಯಾಲಿ, ಸಾರ್ವಜನಿಕ ಸಭೆಗಳನ್ನು ಮಾಡಲಿರುವ ಮೋದಿ, 10 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಕಾರ್ಯಕ್ರಮ ಮಾಡಲಿದ್ದು, ಆ ಒಂದು ಕ್ಷೇತ್ರದಿಂದ 10 ಸಾವಿರ ಜನರನ್ನು ಸೇರಿಸುವ ಪ್ಲಾನ್ ಸಿದ್ಧವಾಗಿದೆ. ಏಪ್ರಿಲ್ 29 ರಂದು ಬೀದರ್, ದಾವಣಗೆರೆ, ಚಿತ್ರದುರ್ಗ ಮತ್ತು ಬೆಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಬೀದರ್, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆ ಮಾಡಲಿದ್ದು, ಅಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೂ ಏಪ್ರಿಲ್ 27 ರಂದು ಮೋದಿ ಆನ್ ಲೈನ್ ಭಾಷಣ ಮಾಡಲಿದ್ದು, ರಾಜ್ಯದ ಎಲ್ಲಾ ಬಿಜೆಪಿ ಶಕ್ತಿ ಕೇಂದ್ರ ಮತ್ತು ಮಹಾ ಶಕ್ತಿ ಕೇಂದ್ರಗಳಲ್ಲಿ ಮೋದಿ ಭಾಷಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:49 pm, Thu, 20 April 23

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us