ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ ಬಹುತೇಕ ನಿಶ್ಚಿತ, ಹಾಲಿ ಶಾಸಕ ಕಾಂಗ್ರೆಸ್​ ಸೇರ್ಪಡೆ ಸುಳಿವು ಕೊಟ್ಟ ಧ್ರುವನಾರಾಯಣ

ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆ ಬಹುತೇಕ ನಿಶ್ಚಿತವಾಗಿದೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸುಳಿವು ಕೊಟ್ಟಿದ್ದಾರೆ.

ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ ಬಹುತೇಕ ನಿಶ್ಚಿತ, ಹಾಲಿ ಶಾಸಕ ಕಾಂಗ್ರೆಸ್​ ಸೇರ್ಪಡೆ ಸುಳಿವು ಕೊಟ್ಟ ಧ್ರುವನಾರಾಯಣ
JDS
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 12, 2023 | 4:20 PM

ಚಾಮರಾಜನಗರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹೊತ್ತಲ್ಲಿ ರಾಜ್ಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಈಗಾಗಲೇ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ(Shivalinge Gowda) ಕಾಂಗ್ರೆಸ್​ ಸೇರುವುದಾಗಿ ಬಹಿರಂಗವಾಗಿಯೇ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದೀಗ ನಿರೀಕ್ಷಿಸಿದಂತೆ ಹಾಸನ ಜಿಲ್ಲೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ (Congress)​ ಸೇರ್ಪಡೆ ಬಹುತೇಕ ನಿಶ್ಚಿತವಾಗಿದೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸುಳಿವು ಕೊಟ್ಟಿದ್ದಾರೆ.

ಇದನ್ನೂ ಓದಿ: ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಕಾರ್ಯಕರ್ತರ ಪಟ್ಟು: ಶಿವಲಿಂಗೇಗೌಡಗೆ ಜ.15 ಡೆಡ್​​ಲೈನ್

ಚಾಮರಾಜನಗರದಲ್ಲಿ ಇಂದು(ಜನವರಿ 12) ಮಾಧ್ಯಮಗಳ ಜೊತೆ ಮಾತನಾಡಿದ ಧ್ರುವನಾರಾಯಣ, ಕೆ.ಎಂ.ಶಿವಲಿಂಗೇಗೌಡ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಜೆಡಿಎಸ್ ಶಾಸಕ ಶಿವಲಿಂಗೇಗೌಡ ಜತೆ ಈಗಾಗಲೇ ಚರ್ಚೆ ನಡೆದಿದಿದ್ದು, ಅವರು ಕೂಡ ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ. ಇತ್ತೀಚಿನ ಯಾವುದೇ ಜೆಡಿಎಸ್ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಶಿವಲಿಂಗೇಗೌಡರು ಜೆಡಿಎಸ್​ ಕಾರ್ಯಚಟುವಟಿಕೆಗಳಿಂದ ದೂರು ಉಳಿದುಕೊಂಡಿದ್ದರು. ಅಲ್ಲದೇ ಇತ್ತೀಚೆಗೆ ಜನಾಭಿಪ್ರಾಯ ಸಂಗ್ರಹಿಸಲು ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದ ಚಿಹ್ನೆ, ಧ್ವಜ ಬಳಸದೇ ಅರಸೀಕೆರೆಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನ ಮಾಡಿ ಯಶಸ್ವಿಯಾಗಿದ್ದಾರೆ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಶಿವಲಿಂಗೇಗೌಡರು ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆ ಹಲವು ಬಾರಿ ಮಾತುಕತೆ ನಡೆಸಿದ್ದು, ಕೊನೆಗೂ ತೆನೆ ಇಳಿಸಿ ಕೈ ಹಿಡಿಯಲು ತೀರ್ಮಾನಿಸಿದ್ದಾರೆ. ಇದಕ್ಕೆ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಹೇಳಿಕೆಯೇ ಇದಕ್ಕೆ ಪುಷ್ಠಿ ನೀಡಿದೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯವಾಗಿ ಅಧಿಕಾರಕ್ಕೆ ಬರಲೇಬೇಕೆಂದು ಕಾಂಗ್ರೆಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗೆ ಏನೆಲ್ಲ ಮಾಡಬೇಕೋ ಅವೆಲ್ಲ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಜೆಡಿಎಸ್‌ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌ನ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಸನ ಜಿಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಶಾಸಕ ಕೆ. ಎಂ. ಶಿವಲಿಂಗೇಗೌಡ ಅವರಿಗೆ ಗಾಳ ಹಾಕಿದ್ದು, ಅದು ಇದೀಗ ಬಹುತೇಕ ಯಶಸ್ವಿಯಾಗಿದೆ.

ಇನ್ನು 2018ರ ಚುನಾವಣೆಯಲ್ಲಿ ಹಾಸನ ಕ್ಷೇತ್ರವನ್ನು ಕಳೆದುಕೊಂಡಿರುವ ಜೆಡಿಎಸ್‌, ಈ ಬಾರಿ ಮರಳಿ ಪಡೆಯುವ ಪ್ರಯತ್ನ ಮಾಡುತ್ತಿದ್ದರೆ, ಬಿಜೆಪಿ ಶಾಸಕ ಪ್ರೀತಂ ಜೆ. ಗೌಡ ಪಂಥಾಹ್ವಾನ ನೀಡಿದ್ದಾರೆ. ಒಟ್ಟಾರೆ 2023ರ ಚುನಾವಣೆಗೆ ಜೆಡಿಎಸ್‌ ಭದ್ರಕೋಟೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡು ಪಕ್ಷವನ್ನು ಎದುರಿಸುವ ಸವಾಲು ಎದುರಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ