AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ; ನಳಿನ್ ಕುಮಾರ್ ಕಟೀಲ್ ತವರು ಪುತ್ತೂರಲ್ಲಿ ಮೂರನೇ ಸ್ಥಾನಕ್ಕೆ ಕುಸಿತ

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಕರಾವಳಿ ಕರ್ನಾಟಕದಲ್ಲಿ ನಿರೀಕ್ಷೆಯಂತೆಯೇ ಬಿಜೆಪಿ ಮುನ್ನಡೆ ಸಾಧಿಸಿದೆ. ಆದರೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತವರು ನೆಲ ಪುತ್ತೂರಿನಲ್ಲಿ ಕಮಲ ಪಾಳಯ ಮೂರನೇ ಸ್ಥಾನಕ್ಕೆ ಕುಸಿಯುವಂತಾಗಿದೆ.

ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ; ನಳಿನ್ ಕುಮಾರ್ ಕಟೀಲ್ ತವರು ಪುತ್ತೂರಲ್ಲಿ ಮೂರನೇ ಸ್ಥಾನಕ್ಕೆ ಕುಸಿತ
ಸಾಂದರ್ಭಿಕ ಚಿತ್ರ
Ganapathi Sharma
|

Updated on:May 13, 2023 | 4:03 PM

Share

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election Results) ಪ್ರಕಟಗೊಳ್ಳುತ್ತಿದ್ದು, ಕರಾವಳಿ ಕರ್ನಾಟಕದಲ್ಲಿ ನಿರೀಕ್ಷೆಯಂತೆಯೇ ಬಿಜೆಪಿ ಮುನ್ನಡೆ ಸಾಧಿಸಿದೆ. ಆದರೆ, ಹಿಂದುತ್ವದ ಪ್ರಬಲ ಕೋಟೆ ಎಂದು ಹೇಳಲಾಗಿದ್ದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತವರು ನೆಲ ಪುತ್ತೂರಿನಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರನಾಗಿ ಕಣಕ್ಕಿಳಿದ ಪರಿಣಾಮ ಕಮಲ ಪಾಳಯ ಮೂರನೇ ಸ್ಥಾನಕ್ಕೆ ಕುಸಿಯುವಂತಾಗಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹಾಗೂ ಪುತ್ತಿಲ ಮಧ್ಯೆ ಜಿದ್ದಾಜಿದ್ದಿಯ ಪೈಪೋಟಿ ಏರ್ಪಟ್ಟಿದ್ದು, ಕೊನೆಯ ಸುತ್ತಿನ ವೇಳೆಗೆ ಕಾಂಗ್ರೆಸ್​​ನ ಅಶೋಕ್ ರೈ ಗೆಲುವಿನ ನಗೆ ಬೀರಿದ್ದಾರೆ.

ಉಳಿದಂತೆ ಮಂಗಳೂರು ದಕ್ಷಿಣ, ಉತ್ತರ, ಮೂಡಬಿದಿರೆ, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಉಡುಪಿ, ಕಾಪು, ಕುಂದಾಪುರ, ಕಾರ್ಕಳ, ಬೈಂದೂರಿನಲ್ಲಿ ಮತದಾರ ಬಿಜೆಪಿಯ ಕೈಹಿಡಿದಿದ್ದಾನೆ.

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥ ವೇದವ್ಯಾಸ ಕಾಮತ್ ಜಯಭೇರಿ ಬಾರಿಸಿದ್ದಾರೆ. ಮಂಗಳೂರಿ ಉತ್ತರದಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ, ಮೂಡಬಿದಿರೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ್, ಬಂಟ್ವಾಳದಲ್ಲಿ ರಾಜೇಶ್ ನಾಯಕ್, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ, ಸುಳ್ಯದಲ್ಲಿ ಭಾಗೀರಥಿ ಮುರುಳ್ಯ ಗೆಲುವಿನ ಹಾದಿಯಲ್ಲಿದ್ದರೆ ಉಳ್ಳಾಲದಲ್ಲಿ ಕಾಂಗ್ರೆಸ್​​ನ ಯುಟಿ ಖಾದರ್ ಗೆಲುವಿನ ನಗೆ ಬೀರಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಭರ್ಜರಿ ಗೆಲವು; ಪತ್ರಿಕಾಗೋಷ್ಠಿಯಲ್ಲೇ ಭಾವುಕರಾಗಿ ಕಣ್ಣೀರು ಹಾಕಿದ ಡಿಕೆ ಶಿವಕುಮಾರ್

ಇನ್ನು ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಬಿಜೆಪಿಯ ಗೆಲುವು ಖಚಿತಗೊಂಡಿದೆ. ಉಡುಪಿ, ಕಾಪು, ಕುಂದಾಪುರ, ಕಾರ್ಕಳ ಹಾಗೂ ಬೈಂದೂರಿನಲ್ಲಿ ಕ್ರಮವಾಗಿ ಯಶ್​ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್​ಕುಮಾರ್ ಕೊಡ್ಗಿ, ವಿ. ಸುನಿಲ್ ಕುಮಾರ್ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ ಗೆಲುವಿನ ಸನಿಹದಲ್ಲಿದ್ದಾರೆ.

ಮಧ್ಯಾಹ್ನ 1 ಗಂಟೆ ವೇಳೆಗೆ, ಕಾಂಗ್ರೆಸ್ 120ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಇದರೊಂದಿಗೆ ಕಾಂಗ್ರೆಸ್ ಬಹುಮತ ಪಡೆಯುವುದು ಬಹುತೇಕ ಖಚಿತವಾಗಿದೆ.

ಕರಾವಳಿ ಕರ್ನಾಟಕ
Party Name 2023 2018
BJP 11 12
Congress 2 1
JDS 0 0
Others 0 0

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 1:23 pm, Sat, 13 May 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ