ಪಕ್ಷಾಂತರವಾಗಿ ಬಿಜೆಪಿಗೆ ಬಂದವರಲ್ಲಿ ಯಾರೆಲ್ಲ ಗೆದ್ದರು, ಯಾರೆಲ್ಲ ಸೋತರು?

2019ರಲ್ಲಿ ಪಕ್ಷಾಂತರವಾಗಿ ಬಂದು ಬಿಜೆಪಿ ಸರ್ಕಾರದಲ್ಲಿ ಸೇರಿಕೊಂಡು, ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದವರ ಫಲಿತಾಂಶ ಏನಾಯಿತು? ಇಲ್ಲಿದೆ ವಿವರ.

ಪಕ್ಷಾಂತರವಾಗಿ ಬಿಜೆಪಿಗೆ ಬಂದವರಲ್ಲಿ ಯಾರೆಲ್ಲ ಗೆದ್ದರು, ಯಾರೆಲ್ಲ ಸೋತರು?
ಸುಧಾಕರ್, ಶ್ರೀಮಂತ್ ಪಾಟೀಲ್, ನಾರಾಯಣ ಗೌಡ
Follow us
|

Updated on: May 13, 2023 | 3:38 PM

ಬೆಂಗಳೂರು: ಕಳೆದ ಬಾರಿಯ ವಿಧಾನಸಭೆ ಚುನಾವಣೆ  ಫಲಿತಾಂಶ(Karnataka Assembly Election Results)  ಬಳಿಕ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿದ್ದು, 2019ರಲ್ಲಿ ‘ಆಪರೇಷನ್ ಕಮಲ’ಕ್ಕೆ ಒಳಗಾಗಿ ಬಿಜೆಪಿ ಸೇರಿದವರು ಹಲವು ಉನ್ನತ ಹುದ್ದೆಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಡಾ. ಕೆ ಸುಧಾಕರ್, ರಮೇಶ್ ಜಾರಕಿಹೊಳಿ, ಬಿಸಿ ಪಾಟೀಲ್, ಮಹೇಶ್ ಕುಮಟಳ್ಳಿ ಹೀಗೆ ಹಲವು ಘಟಾನುಘಟಿ ನಾಯಕರು ಬಿಜೆಪಿ ಸೇರಿದ್ದರು. ಈ ಪೈಕಿ ಅನೇಕರಿಗೆ ಈ ಬಾರಿ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿತ್ತು. ಹೀಗೆ ಪಕ್ಷಾಂತರವಾಗಿ ಬಂದು ಬಿಜೆಪಿ ಟಿಕೆಟ್​ನಲ್ಲಿ ಸ್ಪರ್ಧಿಸಿದವರ ಫಲಿತಾಂಶ ಏನಾಯಿತು? ಇಲ್ಲಿದೆ ವಿವರ.

  1. ಮಸ್ಕಿ (ಮೀಸಲು ಎಸ್ ಟಿ) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್ ಪಕ್ಷದ ಬಸನಗೌಡ ತುರ್ವಿಹಾಳ್ ವಿರುದ್ಧ ಸೋಲನುಭವಿಸಿದ್ದಾರೆ.
  2. ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ 2018 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದು ನಂತರ ಬಿಜೆಪಿಗೆ ಪಕ್ಷಾಂತರವಾಗಿದ್ದ ಮಹೇಶ್ ಕುಮಟಳ್ಳಿ 2019 ರ ಉಪಚುನಾವಣೆಯಲ್ಲಿ ಗೆದ್ದು ಬೀಗಿದ್ದರು. ಇದೀಗ ಬಿಜೆಪಿಯಿಂದ ಪಕ್ಷಾಂತರಗೊಂಡು ಕಾಂಗ್ರೆಸ್​​ನಿಂದ ಸ್ಪರ್ಧಿಸಿದ್ದ ಲಕ್ಷ್ಮಣ್ ಸವದಿ ವಿರುದ್ಧ ಕುಮಟಳ್ಳಿ ಸೋಲನುಭವಿಸಿದ್ದಾರೆ.
  3. ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ ಶ್ರೀಮಂತ್ ಬಾಳಾಸಾಹೇಬ್ ಪಾಟೀಲ ಬಿಜೆಪಿಗೆ ಪಕ್ಷಾಂತರವಾಗಿ ಬಂದು 2019ರ ಉಪ ಚುನಾವಣೆಯಲ್ಲಿ ಜಯ ಗಳಿಸಿದ್ದರು. ಇದೀಗ ಕಾಂಗ್ರೆಸ್​​ನ ಭರಮಗೌಡ ಆಲಗೌಡ ಕಾಗೆ ವಿರುದ್ಧ ಸೋಲನುಭವಿಸಿದ್ದಾರೆ.
  4. ಹಿರೇಕೆರೂರು ವಿಧಾನಸಭಾ ಕ್ಷೇತ್ರದಿಂದ 2018 ರಲ್ಲಿ ಈ ಸ್ಥಾನದಿಂದ ಬಿಸಿ ಪಾಟೀಲ್ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಬಿಜೆಪಿಗೆ ಪಕ್ಷಾಂತರವಾಗಿ 2019ರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ನಿಂದ ಸ್ಪರ್ಧಿಸಿ ಕಾಂಗ್ರೆಸ್​​ನ ಉಜನೇಶ್ವರ ಬಸವಣ್ಣಪ್ಪ ಬಣಕಾರ ವಿರುದ್ಧ ಸೋಲನುಭವಿಸಿದ್ದಾರೆ.
  5. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅರಬೈಲ್ ಶಿವರಾಮ ಹೆಬ್ಬಾರ್ ಗೆಲುವು ಸಾಧಿಸಿದ್ದಾರೆ. ಇವರು ಕೂಡ 2019ರಲ್ಲಿ ಕಾಂಗ್ರೆಸ್​ ತ್ಯಜಿಸಿ ಬಿಜೆಪಿ ಸೇರಿದ್ದರು.
  6. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಎಸ್​ಟಿ ಸೋಮಶೇಖರ್ ಗೆಲುವು ಸಾಧಿಸಿದ್ದಾರೆ.
  7. ಕೆಆರ್​ ಪುರ ಕ್ಷೇತ್ರದಲ್ಲಿ ಬೈರತಿ ಬಸವರಾಜ್ ಗೆಲುವು ಸಾಧಿಸಿದ್ದಾರೆ.
  8. ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೆ ಗೋಪಾಲಯ್ಯ ಗೆಲುವಿನ ನಗೆ ಬೀರಿದ್ದಾರೆ.
  9. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮುನಿರತ್ನ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ .ಎಚ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  10. ಗೋಕಾಕ ವಿಧಾನಸಭಾ ಕ್ಷೇತ್ರದಿಂದ ರಮೇಶ್ ಜಾರಕಿಹೊಳಿ ಕಾಂಗ್ರೆಸ್​ನ ಕಡಾಡಿ ಮಹಾಂತೇಶ ಕಲ್ಲಪ್ಪ ವಿರುದ್ಧ ಗೆಲುವು ಸಾಧಿಸಿದ್ದಾರೆ.
  11. ಪಕ್ಷಾಂತರವಾಗಿ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಕೆ ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪ್ರದೀಪ್ ಈಶ್ವರ್ ವಿರುದ್ಧ ಸೋಲನುಭವಿಸಿದ್ದಾರೆ.
  12. ಕೆಆರ್ ಪೇಟೆ ಕ್ಷೇತ್ರದಿಂದ ಬಿಜೆಪಿಯ ಕೆಸಿ ನಾರಾಯಣಗೌಡ ಕಾಂಗ್ರೆಸ್​ನ ಎಚ್.ಟಿ.ಮಂಜು ವಿರುದ್ಧ ಸೋಲನುಭವಿಸಿದ್ದಾರೆ.
  13. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್ ವಿರುದ್ಧ ಕಾಂಗ್ರೆಸ್​ನ ಶರತ್ ಕುಮಾರ್ ಬಚ್ಚೇಗೌಡ ಗೆಲುವು ಸಾಧಿಸಿದ್ದಾರೆ.
  14. ವಿಜಯನಗರ ಕ್ಷೇತ್ರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್ ಸಿಂಗ್ ವಿರುದ್ಧ ಕಾಂಗ್ರೆಸ್​​ನ ಎಚ್.ಆರ್.ಗವಿಯಪ್ಪ ಗೆಲುವು ಸಾಧಿಸಿದ್ದಾರೆ. ಆನಂದ್​ ಸಿಂಗ್ 2019ರಲ್ಲಿ ಪಕ್ಷಾಂತರವಾಗಿ ಬಿಜೆಪಿಗೆ ಸೇರಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ