Hirekeruru Election 2023 Winner:  ಕಾಂಗ್ರೆಸ್​ನ ಯುಬಿ ಬಣಕರ್​ಗೆ​ ಭರ್ಜರಿ ಗೆಲುವು, ಸೋಲು ಕಂಡ ಬಿಸಿ ಪಾಟೀಲ್​

U.B.Banakar: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಹೀರೆಕೆರೂರು ವಿಧಾನಸಭಾ ಕ್ಷೇತ್ರದ ( Hirekerur Assembly Constituency) ಕಾಂಗ್ರೆಸ್​​ ಅಭ್ಯರ್ಥಿ ಯುಬಿ ಬಣಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 

Hirekeruru Election 2023 Winner:  ಕಾಂಗ್ರೆಸ್​ನ ಯುಬಿ ಬಣಕರ್​ಗೆ​ ಭರ್ಜರಿ ಗೆಲುವು, ಸೋಲು ಕಂಡ ಬಿಸಿ ಪಾಟೀಲ್​
ಯು ಬಿ ಬಣಕರ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 13, 2023 | 2:10 PM

Hirekeruru Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಹೀರೆಕೆರೂರು ವಿಧಾನಸಭಾ ಕ್ಷೇತ್ರದ ( Hirekerur Assembly Constituency) ಕಾಂಗ್ರೆಸ್​​ ಅಭ್ಯರ್ಥಿ ಯುಬಿ ಬಣಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಈ ಹಿಂದೆ ನಡೆದ 2018ರ ಚುನಾವಣೆಯಲ್ಲಿ​ ಕೇವಲ 555 ಮತಗಳಿಂದ ಸೋತಿದ್ದರು. ಜೊತೆಗೆ ಕಳೆದ ಬಾರಿ ಬಿಜೆಪಿಯಲ್ಲಿದ್ದ ಇವರು  ಈ ಬಾರಿ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿದ್ದರು. ಹೇಗಾದರೂ ಮಾಡಿ ಈ ಬಾರಿ ಗೆಲ್ಲಲೇಬೇಕೆಂದು ಹರಸಾಹಸ ಮಾಡಿದ್ದ ಇವರು ಇದೀಗ ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್​ ವಿರುದ್ದ ಗೆಲುವಿನ ನಗೆ ಬಿರಿದ್ದಾರೆ.

ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಸಿ ಪಾಟೀಲ್, ಹೀನಾಯ ಸೋಲು ಕಂಡಿದ್ದಾರೆ.  ಈ ಹಿಂದೆ ಕಾಂಗ್ರೆಸ್​ನಲ್ಲಿದ್ದ ಇವರು ಬಿಜೆಪಿಗೆ ಸೇರ್ಪಡೆಯಾಗಿ, ಇಡೀ ಸರ್ಕಾರವನ್ನ ಉರುಳಿಸಿದ್ದವರಲ್ಲಿ ಇವರು ಕೂಡ ಒಬ್ಬರು. ಬಳಿಕ  ಉಪ ಚುನಾವಣೆಯಲ್ಲಿ ಸ್ಫರ್ಧಿಸಿ 85,562 ಮತಗಳನ್ನ ಪಡೆದು, 29,067 ಮತಗಳ ಅಂತರದಲ್ಲಿ ಗೆದ್ದು, ಹಾಲಿ ಕೃಷಿ ಸಚಿವರಾಗಿದ್ದರು. ಈ ಬಾರಿ ಕೂಡ ಗೆಲ್ಲಲೇಬೇಕೆಂದು ನಟಿಯಾದ ಶೃತಿಯವರನ್ನ ಕರೆಯಿಸಿ ಭರ್ಜರಿ ಪ್ರಚಾರ ನಡೆಸಿದ್ದರು.  ಆದರೆ ಸೋಲುಂಡಿದ್ದಾರೆ. ಇನ್ನು ಜೆಡಿಎಸ್​ನಿಂದ ಜಯಾನಂದ ಜವಣ್ಣನವರ್ ಸ್ಪರ್ಧೆ ಮಾಡಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿತ್ತು. ಇಡೀ ಜಿಲ್ಲೆಯಲ್ಲಿ ಹಿರೇಕೆರೂರು ಕ್ಷೇತ್ರ ಬಾರಿ ಹೈವೋಲ್ಟೇಜ್​ ಕ್ಷೇತ್ರವಾಗಿ ಪರಿಣಮಿಸಿತ್ತು  ಹೀಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್​ ನೇರಾನೇರ ಹಣಾಹಣಿ ಎದುರಾಗಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ