AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badami Election Result: ಬಾದಾಮಿ ವಿಧಾನಸಭಾ ಎಲೆಕ್ಷನ್​ 2023 ರಿಸಲ್ಟ್: ಈ ಬಾರಿ ಯಾರ ಬಾಯಿಗೆ ಬಾದಾಮಿ?

Badami Assembly Election Result 2023 Live Counting Updates: ಈ ಬಾರಿ ಬಾದಾಮಿ ವಿಧಾನಸಭೆ ಚುನಾವಣೆಯಲ್ಲಿ ಯಾರೇ ಗೆದ್ದರೂ ಮೊದಲ ಬಾರಿಗೆ ವಿಧಾನಸಭೆ ಮೆಟ್ಟಿಲು ಏರಲಿದ್ದಾರೆ.

Badami Election Result: ಬಾದಾಮಿ ವಿಧಾನಸಭಾ ಎಲೆಕ್ಷನ್​ 2023 ರಿಸಲ್ಟ್: ಈ ಬಾರಿ ಯಾರ ಬಾಯಿಗೆ ಬಾದಾಮಿ?
ಬಾದಾಮಿ ವಿಧಾನಸಭಾ ಕ್ಷೇತ್ರ
ರಮೇಶ್ ಬಿ. ಜವಳಗೇರಾ
| Updated By: ಗಂಗಾಧರ​ ಬ. ಸಾಬೋಜಿ|

Updated on: May 13, 2023 | 2:20 AM

Share

Badami Assembly Election Result 2023: ಬಾದಾಮಿ ಎಂದರೆ ಎಲ್ಲರಿಗೂ ನೆನಪಾಗುವುದು ಕರ್ನಾಟಕವನ್ನಾಳಿದ ಹೆಮ್ಮೆಯ ಚಾಲುಕ್ಯ ರಾಜ ಮನೆತನ. ಅವರ ರಾಜಧಾನಿ ಬಾದಾಮಿ. ಅಂದು ಚಾಲುಕ್ಯರ ರಾಜಧಾನಿಯಾಗಿದ್ದ ಬಾದಾಮಿ ಇಂದು ಬಾಗಲಕೋಟೆ ಜಿಲ್ಲೆಯ ಒಂದು ತಾಲೂಕು ಕೇಂದ್ರವಾಗಿದೆ. ಇದು ರಾಜ್ಯದ ಪ್ರಸಿದ್ಧ ಪ್ರವಾಸಿತಾಣಗಳಲ್ಲಿ ಒಂದಾಗಿದೆ. ಬಾದಾಮಿ ಗುಹಾಲಯ, ಅಗಸ್ತ್ಯ ಸರೋವರ, ಬಾದಾಮಿ ಕೋಟೆ, ಭೂತನಾಥ ದೇವಾಲಯ, ಬಾದಾಮಿ ಬನಶಂಕರಿ ದೇವಸ್ಥಾನ, ಬಾದಾಮಿ ವಸ್ತು ಸಂಗ್ರಹಾಲಯವನ್ನು ಹಾಗೂ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳನ್ನು ನೋಡಲು ರಾಜ್ಯ, ದೇಶ ಹಾಗೂ ವಿದೇಶಗಳಿಂದಲೂ ಪ್ರವಾಸಿಗರು ಬಾದಾಮಿಗೆ ಭೇಟಿ ನೀಡುತ್ತಾರೆ.

ವಾಸ್ತುಶಿಲ್ಪದ ವೈಭವ ಸಾರುತ್ತರಿರುವ ಬಾದಾಮಿ ವಿಧಾನಸಭಾ ಕ್ಷೇತ್ರದ ರಾಜಕೀಯ ನೋಡುವುದಾದರೆ ಈ ಬಾರಿ ಜಿದ್ದಾಜಿದ್ದಿಯಿಂದ ಕೂಡಿದೆ. ಕಳೆದ ಅಂದರೆ 2018ರ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ ಕ್ಷೇತ್ರಗಳ ಪೈಕಿ ಬಾದಾಮಿ ಕೂಡ ಒಂದು. ಆಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಮತ್ತು ಅವರ ಎದುರಾಳಿಯಾಗಿ ಬಿಜೆಪಿಯ ಬಿ ಶ್ರೀರಾಮುಲು ಕಣಕ್ಕಿಳಿದಿದ್ದರು. ಹೀಗಾಗಿ ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿತ್ತು. ಆದ್ರೆ, ಈ ಬಾರಿ ಸಿದ್ದರಾಮಯ್ಯ ವರುಣಾಕ್ಕೆ ಹೋಗಿದ್ದರೆ, ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ಹೋಗಿದ್ದಾರೆ.

ಇನ್ನು ಈ ಬಾರಿಯ ಸಾಂಪ್ರದಾಯಿಕ ಎದುರಾಳಿಗಳಾದ ಪಟ್ಟಣಶೆಟ್ಟಿ ಹಾಗೂ ಚಿಮ್ಮನಕಟ್ಟಿ ಕುಟುಂಬಗಳ ನಡುವೆ ನಡೆಯುತ್ತಿದ್ದ ಜಿದ್ದಾಜಿದ್ದಿನ ಹೋರಾಟ ಈ ಬಾರಿಯ ಚುನಾವಣೆಯಲ್ಲಿ ಇಲ್ಲ. ಯಾಕಂದ್ರೆ ಮಾಜಿ ಸಚಿವ ಬಿಬಿ ಚಿಮ್ಮನಕಟ್ಟಿ ಅವರ ಪುತ್ರ ಭೀಮಸೇನ ಚಿಮ್ಮನಕಟ್ಟಿ ಸ್ಪರ್ಧಿಸಿದ್ದಾರೆ. ಆದ್ರೆ, ಎದುರಾಳಿ ಪಟ್ಟಣಶೆಟ್ಟಿ ಕುಟುಂಬದವರಿಲ್ಲ. ಬಿಜೆಪಿಯ ಟಿಕೆಟ್​ ಆಕಾಂಕ್ಷಿಯಾಗಿದ್ದ ಮಾಜಿ ಶಾಸಜ ಎಂಕೆ ಪಟ್ಟಣಶೆಟ್ಟಿ ಅವರನ್ನು ಬಿಟ್ಟು ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಶಾಂತನಗೌಡ ಅವರನ್ನು ಕಣಕ್ಕಿಳಿಸಲಾಗಿದೆ. ಇನ್ನು ಜೆಡಿಎಸ್​ನಿಂದ ಹನುಮಂತ ಮಾವಿನಮರದ ಸ್ಪರ್ಧಿಸಿದ್ದು, ತೀವ್ರ ಹಣಾಹಣಿ ಇದೆ.

ಬಿಜೆಪಿ ಶಾಂತಗೌಡ ಪಾಟೀಲ್ ಮತ್ತು ಹನುಮಂತ ಮಾವಿನಮರದ ಈ ಇಬ್ಬರೂ ಲೀಮಗಾಯತ ಸಮುದಾಯಕ್ಕೆ ಸೇರಿದ್ದವರಾಗಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಭೀಮಸೇನ್ ಚಿಮ್ಮನಕಟ್ಟಿ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ಗೆಲುವಿನ ಹಿಂದೆ ಜಾತಿ ಲೆಕ್ಕಾಚಾರ ಇದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್​ ನಡುವೆ ತ್ರೀಕೋನ ಸ್ಥರ್ಧೆ ಏರ್ಪಟ್ಟಿದೆ. ಮೇ 10ರಂದು ಮತದಾನ ನಡೆದಿದ್ದು, ಯಾರೇ ಗೆದ್ದರೂ ಮೊದಲ ಬಾರಿಗೆ ವಿಧಾನಸಭೆ ಮೆಟ್ಟಿಲು ಏರಲಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ