ರಾಜ್ಯದಲ್ಲಿ ಕಿಚ್ಚು ಹತ್ತಿದ ಬಜರಂಗದಳ ಬ್ಯಾನ್ ವಿಚಾರ; ಕಾಂಗ್ರೆಸ್ ಸಮೀಕ್ಷೆ ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ

ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಬಜರಂಗದಳ ಬ್ಯಾನ್ ಮಾಡುವುದಾಗಿ ಭರವಸೆ ನೀಡಿದೆ. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆ ಇಮೇಜ್ ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಕಾಂಗ್ರೆಸ್ ಸರ್ವೆ ನಡೆಸಿದೆ.

ರಾಜ್ಯದಲ್ಲಿ ಕಿಚ್ಚು ಹತ್ತಿದ ಬಜರಂಗದಳ ಬ್ಯಾನ್ ವಿಚಾರ; ಕಾಂಗ್ರೆಸ್ ಸಮೀಕ್ಷೆ ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ
ಬಜರಂಗದಳ ವಿಚಾರ ಮುಂದಿಟ್ಟುಕೊಂಡು ಸಮೀಕ್ಷೆ ನಡೆಸಿದ ಕಾಂಗ್ರೆಸ್
Follow us
Rakesh Nayak Manchi
|

Updated on: May 04, 2023 | 5:49 PM

ಬೆಂಗಳೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪಿಎಫ್​ಐ ಜೊತೆ ಬಜರಂಗದಳವನ್ನು (Bajrang Dal) ಹೋಲಿಕೆ ಮಾಡಿ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಭರವಸೆ ನೀಡಿದೆ. ಇದಕ್ಕೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕುತ್ತಿದ್ದು, ಪ್ರಣಾಳಿಕೆಯನ್ನು (Congress Manifesto) ಸುಟ್ಟು ಹಾಕಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಚುನಾವಣೆ (Karnataka Assembly Elections 2023) ಹೊತ್ತಲ್ಲಿ ಕಾಂಗ್ರೆಸ್​ಗೆ ಇದು ಭಾರೀ ಹಿನ್ನಡೆ ಉಂಟು ಮಾಡಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಹೀಗಾಗಿ ಇಮೇಜ್ ಡ್ಯಾಮೇಜ್ ಕಂಟ್ರೋಲ್​ಗೆ ಇಳಿದ ಕಾಂಗ್ರೆಸ್, ಸರ್ವೆ ನಡೆಸಿದೆ. ಇದರ ಮಾಹಿತಿ ಇಲ್ಲಿದೆ.

ಬಜರಂಗದಳ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರು ಇದರ ವರದಿಯನ್ನು ತರಿಸಿಕೊಂಡಿದ್ದಾರೆ. ಸಮೀಕ್ಷೆ ಪ್ರಕಾರ, ಶೇ.7ರಷ್ಟು ಮತದಾರರಿಗೆ ಮಾತ್ರ ಬಜರಂಗದಳ ವಿಚಾರ ತಲುಪಿದೆ. ಈ ಪೈಕಿ ಶೇ.10ಕ್ಕಿಂತ ಕಡಿಮೆ ಜನ ಚುನಾವಣಾ ವಿಷಯವೆಂದು ಭಾವಿಸಿದ್ದಾರೆ. ಬಿಜೆಪಿ ಮತದಾರರು ಹೆಚ್ಚಿರುವ ಕಡೆ ಮಾತ್ರ ಬಜರಂಗದಳ ಬ್ಯಾನ್‌ಗೆ ವಿರೋಧ ವ್ಯಕ್ತವಾಗಿದ್ದು, ಉಳಿದ ಕ್ಷೇತ್ರಗಳಲ್ಲಿ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದು ತಿಳಿದುಬಂದಿದೆ.

ಕರಾವಳಿ ಭಾಗದಲ್ಲಿ ಕಾಂಗ್ರೆಸ್​ಗೆ ಹೊಡೆತ

ಬಿಜೆಪಿ ಭದ್ರಕೋಟೆ ಎಂದೇ ಹೇಳಲಾಗುವ ಕರಾವಳಿ ಕರ್ನಾಟಕದಲ್ಲಿ ಬಜರಂಗದಳ ಬ್ಯಾನ್ ವಿಚಾರ ಕಾಂಗ್ರೆಸ್​ಗೆ ಕೊಂಚ ಹೊಡೆತ ನೀಡಲಿದೆ. ಕರಾವಳಿ ಕರ್ನಾಟಕದ ನಾಲ್ಕು ಸ್ಥಾನಗಳಲ್ಲಿ ಮಾತ್ರ ಈ ಸಮಸ್ಯೆ ಪಕ್ಷದ ಮೇಲೆ ಪ್ರಭಾವ ಬೀರಲಿದ್ದು, 1000-1500 ಮತಗಳು ನಷ್ಟವಾಗಬಹುದು ಎಂದು ಸಮೀಕ್ಷೆ ವರದಿಯಲ್ಲಿ ತಿಳಿದುಬಂದಿದೆ. ಹೀಗಾಗಿ ಕಳೆದುಕೊಳ್ಳುವ ಮತಗಳನ್ನು ಮರಳಿ ಪಡೆಯಲು ಹೆಚ್ಚು ಶ್ರಮಿಸುವಂತೆ ಅಲ್ಲಿನ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಬಜರಂಗದಳ ನಿಷೇಧ: ಕಾಂಗ್ರೆಸ್​​ಗೆ​ ಚುರುಕು ಮುಟ್ಟಿಸಲು ಹಿಂದೂ ಸಂಘಟನೆಗಳಿಂದ ಹನುಮಾನ್ ಚಾಲೀಸಾ ಪಠಿಸಲು ಕರೆ

ಚುನಾವಣೆ ಸಮಯದಲ್ಲಿ ಮುಸ್ಲಿಂ ಮತಗಳನ್ನು ಗುರಿಯಾಗಿಸಿಕೊಂಡು ಮುಸ್ಲಿಮರನ್ನು ಓಲೈಸಲು ಬಜರಂಗದಳ ಬ್ಯಾನ್ ವಿಚಾರವನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದಂತಿದೆ. ಆದರೆ ಇದು ಕಾಂಗ್ರೆಸ್ ಪಕ್ಷಕ್ಕೆ ಮುಳ್ಳಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಪಣತೊಟ್ಟಿವೆ.

ಹಿಂದೂಸಂಘಟನೆಗಳಲ್ಲಿ ಹತ್ತಿಕೊಂಡ ಬಜರಂಗದಳ ಬ್ಯಾನ್ ಕಿಚ್ಚು

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾಲುಸಾಲು ಹಿಂದೂಗಳ ಹತ್ಯೆಯಿಂದ ಆಕ್ರೋಶಗೊಂಡಿದ್ದ ಹಿಂದೂ ಸಂಘಟನೆಗಳು 2018ರ ಚುನಾವಣೆಯಲ್ಲಿ ಕಾಂಗ್ರೆಸ್​ ಹಿಂದೂ ವಿರೋಧಿ ಎಂಬ ಹಣೆಪಟ್ಟಿ ಕಟ್ಟಿ ವ್ಯಾಪಕ ಪ್ರಚಾರ ನಡೆಸಿ 80 ಸ್ಥಾನಗಳಿಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದವು. ಸದ್ಯ ಕಾಂಗ್ರೆಸ್​ ಬಜರಂಗದಳ ವಿಚಾರದಲ್ಲಿ ಕೈಹಾಕುವ ಮೂಲಕ ಹಿಂದೂ ಸಂಘಟನೆಗಳನ್ನು ಕೆಣಕಿದ್ದು, ಕಾರ್ಯಕರ್ತರಲ್ಲಿ ಆಕ್ರೋಶದ ಕಿಚ್ಚು ಹತ್ತಿಕೊಂಡಿದೆ.

ವಿಧಾನಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ