Vote From Home: 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ, ಹೇಗಿದೆ ಬ್ಯಾಲೆಟ್​ ಪೇಪರ್​ ವೋಟಿಂಗ್?

2023ರ ಸಾರ್ವತ್ರಿಕ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ರಾಜ್ಯ ಸೇರಿದಂತೆ ರಾಜ್ಯ ರಾಜಧಾನಿಯಲ್ಲೂ ಚುನಾವಣಾ ರಣಕಹಳೆ ಶುರುವಾಗಿದೆ.

Vote From Home: 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ, ಹೇಗಿದೆ ಬ್ಯಾಲೆಟ್​ ಪೇಪರ್​ ವೋಟಿಂಗ್?
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Apr 30, 2023 | 9:18 AM

ಬೆಂಗಳೂರು: ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮತದಾನ ನಡೆಯಲಿದ್ದು ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. ಸದ್ಯ 2023ರ ಚುನಾವಣೆಗೆ ಕೌಂಟ್​ಡೌನ್​ ಶುರುವಾಗಿದ್ದು ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾವೆ. ಇದರ ನಡುವೆ ಏಪ್ರಿಲ್ 29ರಿಂದ ಬ್ಯಾಲೆಟ್​ ಪೇಪರ್​ ವೋಟಿಂಗ್​ ಶುರುವಾಗಿದೆ(Ballot Paper Voting). ರಾಜ್ಯದಲ್ಲಿ ಬ್ಯಾಲೆಟ್​ ಪೇಪರ್​ ಮೂಲಕ ಗೌಪ್ಯ ಮತದಾನವನ್ನ ಎಲೆಕ್ಷನ್​ ಕಮಿಷನ್​ ಶುರುಮಾಡಿದೆ.

2023ರ ಸಾರ್ವತ್ರಿಕ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ರಾಜ್ಯ ಸೇರಿದಂತೆ ರಾಜ್ಯ ರಾಜಧಾನಿಯಲ್ಲೂ ಚುನಾವಣಾ ರಣಕಹಳೆ ಶುರುವಾಗಿದೆ. ಏಪ್ರಿಲ್ 29ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಬ್ಯಾಲೆಟ್​ ಮತದಾನವನ್ನು ಚುನಾವಣೆ ಅಯೋಗ ಶುರುಮಾಡಿದೆ

ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ನಾಗರಿಕರು, ಅಂಗವಿಕಲರು ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಅದೂ ಅಧಿಕಾರಿಗಳು ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತಚಲಾಯಿಸುವಂತೆ ಮಾಡುತ್ತಿದ್ದಾರೆ. ಏಪ್ರಿಲ್ 29ರಿಂದ ಈ ಪ್ರಕ್ರಿಯೆ ಆರಂಭವಾಗಿದ್ದು, ಮೇ 6ರವರೆಗೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. 8 ದಿನಗಳಲ್ಲಿ ಅಧಿಕಾರಿಗಳು ಯಾವಾಗಲಾದರೊಮ್ಮೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿರುವ ಹಿರಿಯ ನಾಗರೀಕರು ಮತ್ತು ವಿಕಲ ಚೇತನ ಮತದಾರರ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತ ಚಲಾಯಿಸಿದ ನಂತರ ಅದನ್ನು ವಾಪಾಸು ಪಡೆದುಕೊಂಡು ತೆರಳಲಿದ್ದಾರೆ.

ಇದನ್ನೂ ಓದಿ: ಹನುಮ ಜನ್ಮ ಭೂಮಿಯಲ್ಲಿ ಯೋಗಿ ಆದಿತ್ಯನಾಥ್ ಮತಬೇಟೆ; ಕೋಟೆನಾಡಲ್ಲಿ ಪಂಜಾಬ್ ಸಿಎಂ ಪ್ರಚಾರ

ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್

ಇನ್ನು ಚುನಾವಣಾ ಅಯೋಗದ ಸಿಬ್ಬಂದಿಗಳಿಂದ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಳಿ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ನೀಡಲಾಗ್ತಿದ್ದು, ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಿರಲಿದ್ದಾರೆ. ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್ ಕೂಡ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದು, ಸದ್ಯ ಬೆಂಗಳೂರಿನ ವಿವಿಧ ವಲಯಗಳಲ್ಲಿ 80 ವರ್ಷ ಮೇಲ್ಪಟ್ಟ ಸುಮಾರು 9152 ಹಿರಿಯ ಮತದಾರರನ್ನ ಗುರ್ತಿಸಿರೋ ಪಾಲಿಕೆ, ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಿ ಎಣಿಕೆ ಮಾಡಲಾಗುತ್ತೆ.

2023ರ ಚುನಾವಣೆಗೆ ರಣಕಹಳೆ ಶುರುವಾಗಿದ್ದು ಈ ಬಾರಿ ಬೆಂಗಳೂರಿನಲ್ಲಿ ಶೇಕಡ 80 ರಷ್ಟು ಮತದಾನ ಸಾಧಿಸೋ ಗುರಿಯಿಂದ ಚುನಾವಣಾಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಸದ್ಯ ಏಪ್ರಿಲ್ 29ರಿಂದ ಆರಂಭವಾಗಿರುವ ಬ್ಯಾಲೆಟ್​ ಮತದಾನಕ್ಕ ಗುಡ್ ರೆಸ್ಪಾನ್ಸ್ ಕೂಡಾ ಸಿಕ್ಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:16 am, Sun, 30 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ