Bangalore South Election Results: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೃಷ್ಣಪ್ಪಗೆ ನಾಲ್ಕನೇ ಬಾರಿ ಭಾರಿ ಗೆಲುವು
Bangalore South Assembly Election Result 2023 Live Counting Updates: ಬಿಜೆಪಿ ಪಕ್ಷದ ಎಂ. ಕೃಷ್ಣಪ್ಪ ಗೆಲುವು ಸಾಧಿಸಿದ್ದಾರೆ.

Bangalore South Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections 2023) ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ ಪಕ್ಷದ ಎಂ. ಕೃಷ್ಣಪ್ಪ ಗೆಲುವು ಸಾಧಿಸಿದ್ದಾರೆ. ಮೇ 10 ರಂದು ನಡೆದ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ (Bangalore South Assembly Elections 2023) ಶೇ. 46.86ರಷ್ಟು ಮತದಾನವಾಗಿತ್ತು.
ರಾಜ್ಯದಲ್ಲೇ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46.86 ಮತದಾನವಾಗಿತ್ತು. ಇಲ್ಲಿ ಬರೋಬ್ಬರಿ 6 ಲಕ್ಷಕ್ಕೂ ಅಧಿಕ ಮತದಾರರು ಇದ್ದಾರೆ. ಈ ಬೃಹತ್ ಕ್ಷೇತ್ರದಲ್ಲಿ ಹಿಂದಿನ ಮೂರು ಅವಧಿಯಿಂದ ಬಿಜೆಪಿ ಗೆಲುವು ಸಾಧಿಸುತ್ತಾ ಬಂದಿದೆ. ಇಲ್ಲಿ ಬಿಜೆಪಿ ಪಕ್ಷದ ಎಂ. ಕೃಷ್ಣಪ್ಪ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯೂ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.
ಕಳೆದ ಬಾರಿಯ ಚುನಾವಣೆಯಲ್ಲಿ ಎಂ. ಕೃಷ್ಣಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ. ರಮೇಶ್ ವಿರುದ್ಧ 30,417 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನ ಆರ್. ಪ್ರಭಾಕರ್ ರೆಡ್ಡಿ ಕೇವಲ 30,164 ಮತಗಳನ್ನಷ್ಟೇ ಪಡೆದುಕೊಂಡು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 6,50,532 ಇದೆ. ಈ ಪೈಕಿ ಪುರುಷ ಮತದಾರರ ಸಂಖ್ಯೆ 3,44,268 ಇದ್ದರೆ, ಮಹಿಳಾ ಮತದಾರರ ಸಂಖ್ಯೆ 3,06,165 ಇದೆ. ಕ್ಷೇತ್ರದಲ್ಲಿ ಶೇ. 88.23 ಹಿಂದೂಗಳು, ಶೇ. 7.03 ಮುಸಲ್ಮಾನ ಮತದಾರರು ಹಾಗೂ ಶೇ. 4.13 ಕ್ರಿಶ್ಚಿಯನ್ನರಿದ್ದಾರೆ
Published On - 3:20 am, Sat, 13 May 23




