ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡುವಂತೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ಕೋಲಾರದಲ್ಲಿ ಸಚಿವ ಸ್ಥಾನಕ್ಕೆ ಲಾಭಿ ಜೋರಾಗಿದೆ. ಇದೀಗ ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅಭಿಮಾನಿಯೊಬ್ಬ ರಕ್ತದಲ್ಲಿ ಪತ್ರ ಬರೆದಿದ್ದಾನೆ.

ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡುವಂತೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡುವಂತೆ ರಕ್ತದಲ್ಲಿ ಪತ್ರ ಬರೆದ ಬಂಗಾರಪೇಟೆ ಅಭಿಮಾನಿ
Follow us
Rakesh Nayak Manchi
|

Updated on:May 15, 2023 | 9:54 PM

ಕೋಲಾರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಬಹುಮತ ಪಡೆದ ಕಾಂಗ್ರೆಸ್​ನಲ್ಲಿ (Congress) ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಸಚಿವ ಸ್ಥಾನದ ಲಾಭಿಯೂ ಜೋರಾಗಿ ನಡೆಯುತ್ತಿದೆ. ರಕ್ತದಲ್ಲಿ ಪತ್ರ ಬರೆಯುವಷ್ಟರ ಮಟ್ಟಿಗೆ ಅಭಿಮಾನಿಗಳು ಮುಂದಾಗಿದ್ದಾರೆ. ಹೌದು, ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ (SN Narayanaswamy) ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅಭಿಮಾನಿಯೊಬ್ಬ ಕೆಪಿಸಿಸಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ.

ಕರ್ನಾಟಕ ವಿಧಾನಸಭೆ ಚನಾವಣೆ 2023ರಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್​ಎನ್​ ನಾರಾಯಣಸ್ವಾಮಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಸತತ ಮೂರನೇ ಬಾರಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಇವರ ಅಪ್ಪಟ ಅಭಿಮಾನಿಯಾಗಿರುವ ಕ್ಷೇತ್ರದ ಹರೀಶ್ ಕುಮಾರ್ ಎಂಬಾತ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ರಕ್ತದಲ್ಲಿ ಪತ್ರ ಬರೆದಿದ್ದಾನೆ.

ಇದನ್ನೂ ಓದಿ: ಸಿಎಂ ಡಿಸಿಎಂ ಆಯ್ಕೆ ಕಸರತ್ತು; ಕಾಂಗ್ರೆಸ್​ ಮೇಲೆ ಹೆಚ್ಚುತ್ತಿದೆ ಜಾತಿ ಮುಖಂಡರ ಒತ್ತಡ, ಯಾರು ಏನಂದ್ರು?

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಕ್ತದ ರಾಜಕಾರಣ ಜೋರಾಗಿದೆ. ರಾಜ್ಯದಲ್ಲಿ ರಕ್ತದಲ್ಲಿ ಪತ್ರ ಬರೆಯೋ ರಾಜಕಾರಣ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಯುವಕ ಮುಖಂಡರೊಬ್ಬರು ‘ಜಗದೀಶ್ ಶೆಟ್ಟರ್ ಗೆಲ್ಲುವುದಿಲ್ಲ’ ಎಂದು ರಕ್ತ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಲಿಂಗಾಯತ ಯುವ ಮುಖಂಡರೂ ಆಗಿರುವ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಯಂಟ್ರುವಿ ಎನ್ನುವರು ರಕ್ತದಲ್ಲೇ ಪತ್ರ ಬರೆದು ‘ಮಾನ್ಯ ಜಗದೀಶ ಶೆಟ್ಟರ್ 100ಕ್ಕೆ 100ರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ, ಈ ಸಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ’ ಎಂದು ತಿರುಗೇಟು ನೀಡಿದ್ದರು. ಇದರ ಫೋಟೋ ವೈರಲ್ ಆಗಿತ್ತು.

ಈ ವಿಚಾರ ತಿಳಿಯುತ್ತಿದ್ದಂತೆ ಶೆಟ್ಟರ್ ಅವರು ಮಂಜುನಾಥ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ ಮೇ 13ರಂದು ಹೊರಬಿದ್ದ ಚುನಾವಣಾ ಫಲಿತಾಂಶದಲ್ಲಿ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಸೋಲು ಅನುಭವಿಸಿದ್ದರು. ಯಡಿಯೂರಪ್ಪಗೆ ರಕ್ತದಲ್ಲಿ ಬರೆದಿದ್ದ ಯುವ ಮುಖಂಡನ ಮಾತು ಸತ್ಯವಾಗಿತ್ತು. ಇದರಿಂದ ನೊಂದ ಮಂಜುನಾಥ್, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮನಸ್ಸಿಗೆ ಬಹಳ ಖುಷಿಯಾಗಿದೆ. ಜನರ ತೀರ್ಪನ್ನು ಸ್ವಾಗತಿಸುತ್ತೇನೆ. ಆದರೆ ಕಾಂಗ್ರೆಸ್​ ನಾಯಕ ಜಗದೀಶ್ ಶೆಟ್ಟರ್ ಮತ್ತು ಕುಂದುಗೊಳ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರು ಸೋತಿದ್ದಾರೆ. ಈ ಸೋಲಿನ ನೈತಿಕ ಹೊಣೆ ಹೊತ್ತು ನಾನು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಮಂಜುನಾಥ್ ಹೇಳಿಕೆ ನೀಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:50 pm, Mon, 15 May 23