AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bantwala Election 2023 Winner: ಮಾಜಿ ಸಚಿವನಿಗೆ ಮತ್ತೆ ಸೋಲಿನ ರುಚಿ ತೋರಿಸಿದ ರಾಜೇಶ್​​ ನಾಯಕ್​​

ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಟ್​ ನಡೆದಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್​ ಎರಡನೇ ಬಾರಿಗೆ ವಿಜಯ ಸಾಧಿಸಿದ್ದಾರೆ. ಬಂಟ್ವಾಳ ಸೂಕ್ಷ್ಮ ಪ್ರದೇಶವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜೇಶ್ ನಾಯಕ್​​ ಭಾರೀ ಮತಗಳಿಂದ ವಿಜಯ ಸಾಧಿಸಿದರು.

Bantwala Election 2023 Winner: ಮಾಜಿ ಸಚಿವನಿಗೆ ಮತ್ತೆ ಸೋಲಿನ ರುಚಿ ತೋರಿಸಿದ ರಾಜೇಶ್​​ ನಾಯಕ್​​
ರಾಜೇಶ್ ನಾಯಕ್​​
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 4:12 PM

Share

ಬಂಟ್ವಾಳ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ (Bantwala Assembly Constituency) ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಟ್​ ನಡೆದಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್​ ಎರಡನೇ ಬಾರಿಗೆ ವಿಜಯ ಸಾಧಿಸಿದ್ದಾರೆ. ಬಂಟ್ವಾಳ ಸೂಕ್ಷ್ಮ ಪ್ರದೇಶವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜೇಶ್ ನಾಯಕ್​​ ಭಾರೀ ಮತಗಳಿಂದ ವಿಜಯ ಸಾಧಿಸಿದರು. ಇದೀಗ ಮತ್ತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ನಾಯಕ ಹಾಗೂ ಮಾಜಿ ಸಚಿವ ರಮಾನಾಥ್​​ ರೈ ಅವರನ್ನು ಸೋಲಿಸಿ ವಿಜಯ ಸಾಧಿಸಿದರು, ಇದೀಗ ರಮಾನಾಥ್​​ ರೈ ಅವರನ್ನು ಸೋಲಿ ವಿಜಯ ಸಾಧಿಸಿದ್ದಾರೆ. ಈ ಬಾರಿ ಮತ್ತೆ ಬಿಜೆಪಿ ವಿಜಯಲಕ್ಷ್ಮೀ ಒಳಿಯಲಿದ್ದಾಳೆ. ರಾಜೇಶ್ ನಾಯಕ್​​ 2013ರಲ್ಲಿ ರಮಾನಾಥ್ ರೈ ಮುಂದೆ ಸೋತಿದ್ದರು. ನಂತರ 2018ರಲ್ಲಿ ಬಿಜೆಪಿಯಿಂದ ಗೆದ್ದರು. ರಾಜೇಶ್ ನಾಯಕ್​​ ಒಬ್ಬ ಕೃಷಿಕರಾಗಿ ಕೆಲಸ ಮಾಡಿದರವರು ಹಾಗೂ ತಮ್ಮ ಕೃಷಿಯಿಂದಲ್ಲೇ ದೇಶದ್ಯಾಂತ ಅನೇಕರಿಗೆ ಚಿರಪರಿಚಿತರು. ಇದರ ಜತೆಗೆ ಧಾರ್ಮಿಕ ಕ್ಷೇತ್ರದಲ್ಲೂ ಹೆಚ್ಚು ಪ್ರಚಲಿತದಲ್ಲಿದ್ದವರು, ಇದೀಗ ಗೆದ್ದು ರಮಾನಾಥ ರೈ ಮುಂದೆ ತೊಡೆತಟ್ಟಿದ್ದಾರೆ. ಬಂಟ್ವಾಳದಲ್ಲಿ ರಾಜೇಶ್ ನಾಯಕ್ ಮತ್ತು ರಮಾನಾಥ್ ರೈ ನಡುವೆ ಬಹಳ ಜಿದ್ದಾಜಿದ್ದಿ ನಡೆದಿದ್ದು. 2018ರ ಚುನಾವಣೆಯಲ್ಲಿ ಹಿಂದುತ್ವ ಮತ್ತು ಅನೇಕ ಹತ್ಯೆ ಪ್ರಕರಣದಿಂದ ಯಾರು ಗೆಲ್ಲುತ್ತಾರೆ ಎಂಬ ಗೊಂದಲ ಇತ್ತು, ಆದರೆ ಈ ಬಾರಿಯು ಆ ರೀತಿಯ ಗೊಂದಲ ಇರಲಿಲ್ಲ. ಆದರೆ ರಾಜೇಶ್ ನಾಯಕ್​​ ಪರ-ವಿರೋಧ ಅಲೆ ಎರಡು ಇದ್ದರು. ಬಂಟ್ವಾಳದ ಜನ ಮತ್ತೆ ಗೆಲ್ಲಿಸಿದ್ದಾರೆ.

ಇನ್ನೂ ರಾಜೇಶ್ ನಾಯಕ್​​ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿರುವುದು ರಮಾನಾಥ್​ ರೈ, ಆದರೆ ಈ ಬಾರಿ ಅವರು ಸೋತಿದ್ದಾರೆ. 2013ರ ಚುನಾವಣೆಯಲ್ಲಿ ರಾಜೇಶ್ ನಾಯಕ್​​ ಮುಂದೆ ಭಾರೀ ಅಂತರದಿಂದ ಗೆಲ್ಲುವು ಸಾಧಿಸಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸಿದರು, ಇದರ ಜತೆಗೆ ಬಂಟ್ವಾಳದ ಅನೇಕ ಧಾರ್ಮಿಕ ಕ್ಷೇತ್ರದಲ್ಲಿ ಕೆಲಸ ಮಾಡಿದವರು. 2018ರಲ್ಲಿ ಶರತ್​​ ಮಡಿವಾಳ ಹತ್ಯೆ, ಆಶ್ರಫ್ ಹತ್ಯೆಗಳಿಂದ ಇವರ ವಿರುದ್ಧ ಅಕ್ರೋಶಗಳು ಕೇಳಿ ಬಂದಿತ್ತು. ಈ ಕಾರಣದಿಂದಲ್ಲೇ ಅಂದಿನ ಚುನಾವಣೆಯಲ್ಲಿ ರಮಾನಾಥ್ ಸೋಲಿಗೆ ಕಾರಣವಾಗಿತ್ತು ಎಂದು ಹೇಳಲಾಗಿತ್ತು. ಇದೀಗ ಮತ್ತೆ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದಾರೆ.

ಇದನ್ನೂ ಓದಿ: Kapu Election 2023 Winner: ಭರ್ಜರಿ ಗೆಲುವು ಸಾಧಿಸಿದ ಗುರ್ಮೆ ಸುರೇಶ್ ಶೆಟ್ಟಿ

ಇನ್ನೂ ಬಂಟ್ವಾಳದಲ್ಲಿ ರಾಜೇಶ್ ನಾಯಕ್​ ಮತ್ತು ರಮಾನಾಥ್ ರೈ ವಿರುದ್ಧ ಜೆಡಿಎಸ್​​ನಿಂದ ಪ್ರಕಾಶ್ ರಫಾಯಲ್​​ ಗೊಮ್ಸ್​​ ಸ್ಪರ್ಧಿಸಿ ಸೋತಿದ್ದಾರೆ. ಇದೀಗ ಈ ಸೂಕ್ಷ್ಮ ಪ್ರದೇಶ ಬಂಟ್ವಾಳದಲ್ಲಿ ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಪ್ರತಿಸ್ಪರ್ಧೆಯ ನಡುವೆ ಬಿಜೆಪಿ ಭಾರೀ ಗೆಲುವು ಸಾಧಿಸಿದೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ