ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬೊಮ್ಮಾಯಿ, ನಿರ್ವಹಣಾ ಸಮಿತಿಗೆ ಶೋಭಾ ಕರಂದ್ಲಾಜೆ ಸಂಚಾಲಕಿ

ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ನಿರ್ವಹಣಾ ಸಮಿತಿಯನ್ನು ರಚನೆ ಮಾಡಲಾಗಿದ್ದು, ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ 25 ನಾಯಕರಿಗೆ ಸ್ಥಾನ ನೀಡಲಾಗಿದೆ.

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬೊಮ್ಮಾಯಿ, ನಿರ್ವಹಣಾ ಸಮಿತಿಗೆ ಶೋಭಾ ಕರಂದ್ಲಾಜೆ ಸಂಚಾಲಕಿ
ಬೊಮ್ಮಾಯಿ‌, ಶೋಭಾ ಕರಂದ್ಲಾಜೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 10, 2023 | 2:23 PM

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆಗೆ (Karnataka Assembly Elections 203) ಬಿಜೆಪಿ ಚುನಾವಣಾ ಪ್ರಚಾರ ಸಮಿತಿ(chairman of election campaign committee )ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ ಬೊಮ್ಮಾಯಿ‌ (Basavaraj Bommai) ನೇಮಕವಾಗಿದ್ದರೆ,  ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. 25 ಜನರ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಸ್ಥಾನ ನೀಡಲಾಗಿದೆ.

ಇನ್ನು ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ನಾಯಕರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್​​ಗೆ ಸ್ಥಾನ ನೀಡಲಾಗಿದೆ. ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನವನ್ನು ಬಿಎಸ್​ ಯಡಿಯೂರಪ್ಪ ಅವರಿಗೆ ನೀಡುವ ಮಾತುಗಳು ಕೇಳಿಬಂದಿದ್ದವು. ಲಿಂಗಾಯತ ಮತಗಳನ್ನು ಕೈತಪ್ಪದಂತೆ ನೋಡಿಕೊಳ್ಳಲು ಬಿಎಸ್​ವೈಗೆ ಮಣೆ ಹಾಕುವ ನಿರೀಕ್ಷೆಗಳಿದ್ದವು. ಆದ್ರೆ, ಹೈಕಮಾಂಡ್​ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಿದೆ.

ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರನ್ನಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಮಹಿಳಾ ಮತಗಳನ್ನು ಸೆಳೆಯಲು ಹೈಕಮಾಂಡ್​ ಈ ಪ್ಲಾನ್​ ಮಾಡಿದೆ ಎಂದು ತಿಳಿದುಬಂದಿದೆ.

ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:28 am, Fri, 10 March 23

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್