ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ: ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ: ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ
ಬಸವರಾಜ ಬೊಮ್ಮಾಯಿ
Follow us
Rakesh Nayak Manchi
|

Updated on:May 13, 2023 | 10:21 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election Results 2023) ಪ್ರಕಟಗೊಂಡಿದ್ದು, ಕಾಂಗ್ರೆಸ್ (Congress) ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸರಾಜ ಬೊಮ್ಮಾಯಿ (Basavaraj Bommai) ರಾಜೀನಾಮೆ ನೀಡಿದ್ದಾರೆ. ಇಂದು ಸಂಜೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿಲಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಸತತ ನಾಲ್ಕನೇ ಬಾರಿಗೆ ಬಸವರಾಜ ಬೊಮ್ಮಾಯಿ ಗೆಲುವಿನ ನಗೆ ಬೀರಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ 63,384 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಯಾಸೀರ್ ಖಾನ್ ಪಠಾಣ್ 44,394 ಮತಗಳನ್ನು ಪಡೆದಿದ್ದಾರೆ. ಆದರೆ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಅವರ ಆಡಳಿತದ ವಿರುದ್ಧ ಸ್ವಪಕ್ಷದ ಕಾರ್ಯಕರ್ತರಲ್ಲಿ ಅಸಮಾಧನಗಳು ಎದ್ದಿದ್ದವು. ಕಠಿಣ ಕ್ರಮದ ಭರವಸೆ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿತ್ತು. ಕಾಂಗ್ರೆಸ್​ನ ಆರೋಪಗಳಿಗೆ ತಿರುಗೇಟು ನೀಡುವಲ್ಲಿ ವಿಫಲರಾಗಿದ್ದರು.

ಇದನ್ನೂ ಓದಿ: BSY Reaction: ಮನೆಮನೆಗೆ ಹೋಗಿ ಕೊಟ್ಟ ಗ್ಯಾರಂಟಿ ಈಡೇರಿಸಿ: ಕಾಂಗ್ರೆಸ್​ಗೆ ಯಡಿಯೂರಪ್ಪ ಒತ್ತಾಯ

ಇಂದು ಕರ್ನಾಟಕ ವಿಧಾನಸಭೆಯ 224 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ ಸ್ಪಷ್ಟ ಬಹುಮತ ಪಡೆದುಕೊಂಡಿದೆ. 133 ಮ್ಯಾಜಿಕ್ ನಂಬರ್ ಆಗಿದೆ. ಈ ಪೈಕಿ ಕಾಂಗ್ರೆಸ್ 130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿದ್ದು, ಆಡಳಿತ ಪಕ್ಷ ಬಿಜೆಪಿ 60 + ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯ ಸೋಲು ಅನುಭವಿಸಿದೆ. ಸದ್ಯ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಸಿದ್ಧತೆಗಳನ್ನು ನಡೆಸುತ್ತಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Sat, 13 May 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ