ಸೋತ ಪ್ರಮುಖ ಸಚಿವರ ಮನೆ-ಮನೆಗೆ ಭೇಟಿ ನೀಡಿ ಧೈರ್ಯ ತುಂಬುತ್ತಿರುವ ಬಸವರಾಜ ಬೊಮ್ಮಾಯಿ
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಪ್ರಮುಖ ಸಚಿವರ ನಿವಾಸಕ್ಕೆ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿದ್ದಾರೆ. ಡಾ.ಕೆ ಸುಧಾಕರ್,ಸೋಮಣ್ಣ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ. ಕಾಂಗ್ರೆಸ್(Congress) 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಇನ್ನು ಬಿಜೆಪಿ(BJP) ಕೇವಲ 66 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಇನ್ನು ಮುಖ್ಯವಾಗಿ ಈ ಭಾರಿ ಬಿಜೆಪಿಯ ಘಟಾನುಘಟಿ ನಾಯಕರುಗಳು ಸೋಲುಕಂಡಿದ್ದಾರೆ. ಶ್ರೀರಾಮು, ಮುರುಗೇಶ್ ನಿರಾಣಿ, ಗೋವಿಂದ್ ಕಾರಜೋಳ, ವಿ ಸೋಮಣ್ಣ ಹಾಗೂ ಡಾ ಕೆ ಸುಧಾಕರ್ ಸೇರಿದಂತೆ ಪ್ರಮುಖ ನಾಯಕರು ಪರಾಭವಗೊಂಡಿದ್ದಾರೆ. ಇದೀಗ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಸೋತ ಪ್ರಮುಖ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ಹೇಳುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿದ ಬಿಜೆಪಿ: ಅವು ಇಲ್ಲಿವೆ
ಹೌದು…ಮೊದಲಿಗೆ ಬಸವರಾಜ ಬೊಮ್ಮಾಯಿ ಅವರು ಇಂದು (ಮೇ 16) ಡಾ ಕೆ ಸುಧಾಕರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಸುಧಾಕರ್ ಮನೆ ಭೇಟಿ ನೀಡಿ ಸಮಾಧಾನದ ಜೊತೆಗೆ ಧೈರ್ಯ ಹೇಳಿದರು. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಇಂದು ಸುಧಾಕರ್ ಭೇಟಿ ಮಾಡಿದ್ದೇನೆ. ಸೋಮಣ್ಣನವರನ್ನೂ ಭೇಟಿ ಮಾಡುತ್ತೇನೆ, ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದು, ಅವರೆಲ್ಲರ ಮನೆಗೆ ಭೇಟಿ ನೀಡಿ ಧೈರ್ಯತುಂಬುವ ಕೆಲಸ ಮಾಡುತ್ತಿದ್ದೇನೆ.ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಏಕಾಯ್ತು , ಏನು ಅಂತ ಪರಾಮರ್ಶೆ ಮಾಡಿದ್ದೇವೆ ಎಂದರು.
ಸುಧಾಕರ್ ಭೇಟಿ ಬಳಿಕ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೂ ತೆರಳಿದ್ದಾರೆ. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸಕ್ಕೆ ಭೇಟಿ ನೀಡಿದರು. ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಮೊದಲ ಬಾರಿಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಚಾಮರಾಜನಗರ ಮತ್ತು ವರುಣ ಎರಡೂ ಕ್ಷೇತ್ರಗಳಲ್ಲಿ ಸ್ಫರ್ಧಿಸಿ ಸೋತಿರುವ ಮಾಜಿ ಸಚಿವ ವಿ. ಸೋಮಣ್ಣ ನಿವಾಸಕ್ಕೂ ಸಹ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು. ಬೆಂಗಳೂರಿನ ವಿಜಯನಗರದಲ್ಲಿರುವ ಸೋಮಣ್ಣನವರ ನಿವಾಸಕ್ಕೂ ಭೇಟಿ ನೀಡಿದರು. ಇದೇ ವೇಳೆ ಮಾಜಿ ಸಚಿವರಾದ ಆರ್. ಅಶೋಕ್, ಸಿ.ಸಿ. ಪಾಟೀಲ್, ಭೈರತಿ ಬಸವರಾಜ ಉಪಸ್ಥಿತರಿದ್ದರು.
Published On - 3:14 pm, Tue, 16 May 23