Bellary City Election Winner 2023: ಬಳ್ಳಾರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಾರಾ ಭರತ್ ರೆಡ್ಡಿ ಗೆಲುವು

Nara Bharath Shetty: ಈಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಾರಾ ಭರತ್ ರೆಡ್ಡಿಯವರು ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಗೆಲುವು ಸಾಧಿಸಿದ್ದಾರೆ

Bellary City Election Winner 2023: ಬಳ್ಳಾರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಾರಾ ಭರತ್ ರೆಡ್ಡಿ ಗೆಲುವು
Follow us
ನಯನಾ ಎಸ್​ಪಿ
| Updated By: Digi Tech Desk

Updated on:May 13, 2023 | 1:41 PM

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಗಣಿಜಿಲ್ಲೆ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ (Bellary City Assembly Constituency) ಗಣಿದಣಿಗಳ ಕುಟುಂಬದೊಳಗಿನ ರಾಜಕಾರಣ ಜನರ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ನಾರಾ ಭರತ್ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಪ್ರವೇಶ ನಿರ್ಬಂಧ ಹಿನ್ನೆಲೆ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರ ಮೂಲಕ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಮುಂದಾಗಿದ್ದರು. ನೂತನ ಪಕ್ಷದ ಪರ ಈಗಾಗಲೇ ತುರುಸಿನ ಪ್ರಚಾರ ಕೈಗೊಳ್ಳಲಾಗಿದೆ. ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನೂ ಆಯ್ಕೆಮಾಡಿದ್ದಾರೆ. ಸಾಮಾನ್ಯ ಮೀಸಲು ಕ್ಷೇತ್ರವಾಗಿರುವ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಾರಾ ಭರತ್ ರೆಡ್ಡಿ 42997 ಮತಗಳನ್ನು ಗಲಸಿ ಗೆದ್ದಿದ್ದರೆ, 30023 ಮತಗಳನ್ನು ಪಡೆದು KRPP ಸಂಸ್ಥಾಪಕ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಎರಡನೇ ಸ್ಥಾನದಲ್ಲಿದ್ದಾರೆ. ಹಾಗು BJP ಪಕ್ಷದ ಸೋಮಶೇಖರ್ ರೆಡ್ಡಿ ಮೂರನೇ ಸ್ಥಾನದಲ್ಲಿದ್ದಾರೆ.

ಬಿಜೆಪಿಯಿಂದ ದೂರವಾದ ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಅವರ ತವರೂರು ಬಳ್ಳಾರಿ ನಗರ ಕ್ಷೇತ್ರದಲ್ಲಿ ಸಹೋದರ ಹಾಗೂ ಬಿಜೆಪಿಯ ಹಾಲಿ ಶಾಸಕ ಜಿ ಸೋಮಶೇಖರ್‌ ರೆಡ್ಡಿ ಅವರ ವಿರುದ್ಧ ತಮ್ಮ ಪತ್ನಿ ಅರುಣಾ ಲಕ್ಷ್ಮೀ ಅವರನ್ನು ಕೆಆರ್‌ಪಿಪಿಯಿಂದ ಕಣಕ್ಕಿಳಿಸಲಿರುವುದು ಹೈ ವೋಲ್ಟೇಜ್ ಕ್ಷೇತ್ರದಲ್ಲಿ ಭಾರಿ ಕಾಳಗಕ್ಕೆ ಮುನ್ನಿಡಿ ಬರೆದಿದೆ. ಇದುವರೆಗೆ ಬಿಜೆಪಿ – ಕಾಂಗ್ರೆಸ್‌ ನಡುವೆ ನೇರ ಪೈಪೋಟಿಯ ಕಣವೀಗ ಕೆಆರ್‌ಪಿಪಿ ಮೂಲಕ ತ್ರೀಕೋನ ಸ್ಪರ್ಧೆಗೆ ಸಾಕ್ಷಿಯಾಗಿದೆ. ಇನ್ನು ಕಾಂಗ್ರೆಸ್ ಪಕ್ಷದಿಂದ ನಾರಾ ಭರತ್ ರೆಡ್ಡಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ, ಜೊತೆಗೆ ಕ್ಷೇತ್ರದೆಲ್ಲೆಡೆ ಬಾರಿ ಪ್ರಚಾರವನ್ನು ಮಾಡಿದ್ದರು.

ಚುನಾವಣೆ ಫಲಿತಾಂಶ ಲೈವ್​ ಅಪ್ಡೇಟ್​ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Sat, 13 May 23