ಸಾಮೂಹಿಕವಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಚಾಮರಾಜಪೇಟೆ ಮುಖಂಡರು, JDS ಗೆಲ್ಲುವ ಮೊದಲ ಕ್ಷೇತ್ರ ಎಂದ ಎಚ್ಡಿಕೆ
ಜಮೀರ್ ಅಹಮ್ಮದ್ ಖಾನ್ ಬಳಗ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದೆ. ಈ ಹಿನ್ನೆಲೆ್ಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಜಮೀರ್ ಅಹಮ್ಮದ್ ಖಾನ್ಗೆ ಟಕ್ಕರ್ ಕೊಡಲು ದಳಪತಿ ಬಿಗ್ ಪ್ಲ್ಯಾನ್ ಮಾಡಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಅದರಲ್ಲೂ ಈ ಬಾರಿ ಚುನಾವಣೆಯಲ್ಲಿ ಜಮೀರ್ ಅಹಮ್ಮದ್ ಖಾನ್ (BZ Zameer Ahmed Khan )ಅವರನ್ನು ಹಣಿಯಲು ದಳಪತಿಗಳು ಭರ್ಜರಿ ಪ್ಲ್ಯಾನ್ ಮಾಡಿದ್ದು, ಇದಕ್ಕಾಗಿ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ನ ಪ್ರಮುಖ ನಾಯಕರುಗಳಿಗೆ ಗಾಳ ಹಾಕಿದ್ದಾರೆ.
ಇದನ್ನೂ ಒದಿ: ಜಮೀರ್ ಹಣಿಯಲು ‘ಸೈಲೆಂಟ್’ ಅಸ್ತ್ರ: ಸೈಲೆಂಟ್ ಸುನೀಲ್ ಮೂಲಕ ಸೋಲಿಸಲು ರಣತಂತ್ರ…!
ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಹಲವು ಮುಖಂಡರು ಇಂದು(ಡಿಸೆಂಬರ್ 11) ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದರು. ಚಾಮರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದರಾಜು, ಮಾಜಿ ಉಪಮೇಯರ್ ಶ್ರೀರಾಮೇಗೌಡ, BBMP ಮಾಜಿ ಸದಸ್ಯೆ ಗೌರಮ್ಮ ಹಾಗೂ ‘ಕೈ’ ಮುಖಂಡರಾದ ಶೇಖರ್, ದೊರೆ ಸೇರಿದಂತೆ ಹಲವರು JDS ಸೇರ್ಪಡೆಯಾದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ( JDS Party ) ಸೇರಿದರು.
ಜೆಡಿಎಸ್ ಗೆಲ್ಲುವ ಮೊದಲ ಕ್ಷೇತ್ರ
ಹಲವರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಚಾಮರಾಜಪೇಟೆ ಹಿಂದೆ ಯಾವ ತರ ಇತ್ತು. ಬಳಿಕ ದೇವೇಗೌಡರು ಯಾವ ತರ ಅಡಿಪಾಯ ಹಾಕಿದರು. ಅದಕ್ಕೆಲ್ಲ ಒಂದು ಇತಿಹಾಸ ಇದೆ. ಈಗ ಮತ್ತೊಮ್ಮೆ ಜೆಡಿಎಸ್ ಗೆಲ್ಲಬೇಕು. ಹಣ ಹಂಚುವುದು ದೊಡ್ಡದಲ್ಲ. ಆದರೆ ಆ ಹಣ ಹೇಗೆ ಸಂಗ್ರಹ ಆಗಿದೆ ಎಂದು ಗಮನಿಸಬೇಕು. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆಲ್ಲುವ ಮೊದಲ ಕ್ಷೇತ್ರ ಆಗಲಿದೆ ಎಂದರು.
ಗುಜರಾತ್ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ಯಾವ ತಂತ್ರ ಮಾಡುತ್ತಿದ್ದಾರೆ ಎಂದು ಕಳೆದ ಎರಡು ಮೂರು ದಿನಳಿಂದ ತೋರಿಸುತ್ತಿದ್ದಾರೆ. ಜೆಡಿಎಸ್ ಪಕ್ಷ ಇದೆ ಎನ್ನುವುದನ್ನೇ ಮರೆತಿದ್ದಾರೆ. ಆದರೂ ನನಗೆ ಬೇಸರ ಇಲ್ಲ. ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕಿಂತ ಜೆಡಿಎಸ್ ಗ್ರಾಫ್ ಮೇಲೆ ಏಳುತ್ತಿದೆ. ಪಂಚರತ್ನ ಕಾರ್ಯಕ್ರಮದ ಮೂಲಕ ಅದು ಗೊತ್ತಾಗಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಜನರಿಗೆ ರಕ್ಷಣೆ ಇಲ್ಲ ಎಂಬುದು ಜನರಿಗೆ ಗೊತ್ತಾಗಿದೆ. ಇಂದು ಬಿಜೆಪಿ, ಕಾಂಗ್ರೆಸ್ ಆಂತರಿಕ ಸಮೀಕ್ಷೆ ನಡೆಸುತ್ತಿವೆ. ಪ್ರತಿ ಎರಡು ತಿಂಗಳಿಗೆ ಒಂದು ಕಾರ್ಯತಂತ್ರ ಮಾಡುತ್ತವೆ. ಚಾಮರಾಜಪೇಟೆ ಚುನಾವಣೆಯಲ್ಲಿ ನಾವು ಗೆಲ್ಲುವುದರಲ್ಲಿ ಅನುಮಾನವಿಲ್ಲ. 2023ರಲ್ಲಿ ನಮ್ಮ ಸರ್ಕಾರ ಬರುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿ.ಎಂ.ಇಬ್ರಾಹಿಂ ಪ್ರತಿಕ್ರಿಯೆ
JDS ಸೇರಿದ ಪ್ರತಿಯೊಬ್ಬರಿಗೂ ಸೂಕ್ತ ಸ್ಥಾನಮಾನ ನೀಡುತ್ತೇವೆ. ನಾವು ಗುರಿ ಮುಟ್ಟಬೇಕಾದ್ರೆ ಹೋರಾಟ ಮಾಡಬೇಕು. ಶಿಕಾರಿಪುರ, ಅಥಣಿ ಮಾಜಿ ಶಾಸಕರು ಜೆಡಿಎಸ್ ಸೇರುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವು 123 ಸ್ಥಾನವನ್ನು ಗೆಲ್ಲಬೇಕು. ಪ್ರಮಾಣವಚನ ಕಾರ್ಯಕ್ರಮವನ್ನು ದೇವೇಗೌಡರು ನೋಡಬೇಕು. ನಾವು ಅಧಿಕಾರಕ್ಕೆ ಬಂದ್ರೆ . ವಿಧಾನಸೌಧದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಮಾಡ್ತೇವೆ ಎಂದು ತಿಳಿಸಿದರು.
ಇವತ್ತು ಪಕ್ಷಕ್ಕೆ ಸೇರುತ್ತಿರುವರು ಅನುಭವ ಇರುವವರು. ಪ್ರತಿಯೊಂದು ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ. ನಾವು ಬೆಳೆಯಬೇಕಾದರೆ ಗೊಬ್ಬರ ಹಾಕಬೇಕು. ಹೆಚ್ಚುವರಿ ಗೊಬ್ಬರ ಬೇಕಾದರೆ ತರಬೇಕಾಗುತ್ತದೆ. ಸೊಸೆ ಬರಬೇಕಾದರೆ ಹೊಸ ಸೊಸೆಯೇ ಬರೋದು. ನಮ್ಮ ಗುರಿ 123 ಮುಟ್ಟಬೇಕು. ವಿಧಾನಸೌಧಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಬೇಕು ಎಂದರು.
ಜೆಡಿಎಸ್ ಸೇರಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಚಾಮರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದರಾಜು ಜೆಡಿಎಸ್ ಸೇರ್ಪಡೆಯಾಗಿ ಬಳಿಕ ಮಾತನಾಡಿದ ಅವರು, 20 ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಅಭಿವೃದ್ಧಿ ಆಗಿಲ್ಲ. ಅದಕ್ಕೆ ಸಾಮೂಹಿಕವಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದೇವೆ. 2013, 2018ರಲ್ಲಿ ಜಮೀರ್ ಅಹಮ್ಮದ್ ಖಾನ್ ಜೊತೆ ನಿಂತಿದ್ದೆ. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಹಾಗಾಗಿ ಇಂದು ಜೆಡಿಎಸ್ ಸೇರ್ಪಡೆ ಆಗಿದ್ದೇನೆ. ಕಾರ್ಯಕರ್ತನಾಗಿ ನಾನು ನನ್ನ ಕೆಲಸ ಮಾಡುತ್ತೇನೆ. ನಾನು ಟಿಕೆಟ್ ಆಕಾಂಕ್ಷಿ ಖಂಡಿತ ಅಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಇದೇ ವೇಳೆ ತಮ್ಮ ಮೇಲಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಆರೋಪ ಮುಕ್ತನಾಗಿದ್ದೇನೆ. ಈಗ ನನ್ನ ಮೇಲೆ 324 ಕೇಸ್ ಕೂಡಾ ಇಲ್ಲ. ಯಾರೋ ಈ ರೀತಿ ಮಾಡಿ ತಲೆಗೆ ಕಟ್ಟಿದ್ದರು. ನ್ಯಾಯದೇವತೆಯಿಂದಾಗಿ ನಾನು ಮುಕ್ತನಾಗಿದ್ದೇನೆ. ಪಕ್ಷ ಅವಕಾಶ ಕೊಟ್ಟರೆ ಖಂಡಿತ ಸ್ಫರ್ಧೆ ಮಾಡುತ್ತೇನೆ ಎಂದು ಪರೋಕ್ಷವಾಗಿ ಚುನಾವಣೆಗೆ ನಿಲ್ಲುವ ಇಂಗಿತ ವ್ಯಕ್ತಪಡಿಸಿದರು.
ಇಂದು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀ ಗೋವಿಂದರಾಜು, ಶ್ರೀಮತಿ ಗೌರಮ್ಮ, ಸೇರಿದಂತೆ ಕಾಂಗ್ರೆಸ್ & ಬಿಜೆಪಿ ಪಕ್ಷಗಳ ಹಲವು ನಾಯಕರು ಮಾಜಿ ಪ್ರಧಾನಿ ಶ್ರೀ @H_D_Devegowda ಅವರು ಮತ್ತು ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ರವರ ಸಮ್ಮುಖದಲ್ಲಿ ಜಾತ್ಯತೀತ ಜನತಾ ದಳ ಪಕ್ಷ ಸೇರ್ಪಡೆಯಾದರು. 1/2 pic.twitter.com/0mbAggiIpG
— Janata Dal Secular (@JanataDal_S) December 11, 2022
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 8:21 pm, Sun, 11 December 22