Sowmya Reddy: ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಇನೋವಾ ಕಾರು ಜಪ್ತಿ; ಏನೇನು ಸಿಕ್ತು ನೋಡಿ

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ (Sowmya Reddy) ಸೇರಿದ ಇನೋವಾ ಕಾರನ್ನು ಫ್ಲೈಯಿಂಗ್ ಸ್ಕ್ವಾಡ್ ಹಾಗೂ ತಿಲಕನಗರ ಪೊಲೀರು ಗುರುವಾರ ವಶಕ್ಕೆ ಪಡೆದಿದ್ದಾರೆ.

Sowmya Reddy: ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಇನೋವಾ ಕಾರು ಜಪ್ತಿ; ಏನೇನು ಸಿಕ್ತು ನೋಡಿ
ಸೌಮ್ಯಾ ರೆಡ್ಡಿ
Follow us
Ganapathi Sharma
|

Updated on: Apr 06, 2023 | 6:18 PM

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ (Sowmya Reddy) ಸೇರಿದ ಇನೋವಾ ಕಾರನ್ನು ಫ್ಲೈಯಿಂಗ್ ಸ್ಕ್ವಾಡ್ ಹಾಗೂ ತಿಲಕನಗರ ಪೊಲೀರು ಗುರುವಾರ ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿ ಮತದಾರರಿಗೆ ಹಂಚಲು ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವುದು ಚೆಕ್​ಪೋಸ್ಟ್​ನಲ್ಲಿ ತಪಾಸಣೆ ವೇಳೆ ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣವೇ ಕಾರನ್ನು ಜಪ್ತಿ ಮಾಡಿ, ಅದರಲ್ಲಿರುವ ವಸ್ತುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಕಾರನ್ನು ತಿಲಕ​ನಗರ ಠಾಣೆ ಆವರಣದಲ್ಲಿ ನಿಲುಗಡೆ ಮಾಡಲಾಗಿದೆ. ಚಾಲಕ ರಾಮಚಂದ್ರಪ್ಪ ಎಂಬುವರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಕಾರು ವಶಕ್ಕೆ ಪಡೆಯಲಾಗಿದೆ. ರಾಮಚಂದ್ರ ವಿರುದ್ಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿ ಏನೇನು ಸಿಕ್ತು?

ಮೊಬೈಲ್​ಗಳು, 23 ಸೀರೆಗಳು, 23 ಬ್ಲೌಸ್ ಪೀಸ್, 16 ಶಾಲು, 150 ಪ್ರೋಗ್ರೆಸ್ ರಿಪೋರ್ಟ್ ಇರುವ ಬುಕ್​ಲೆಟ್ಸ್, ಸ್ಯಾಮ್ಸಂಗ್, ನೋಕಿಯಾ ಆ್ಯಂಡ್ರಾಯ್ಡ್ ಮೊಬೈಲ್​ಗಳನ್ನು ಮತದಾರರಿಗೆ ಹಂಚಲು ಕಾರಿನಲ್ಲಿ ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡುವ, ಉಡುಗೊರೆ, ನಗದು ಹಂಚುವ ಕೃತ್ಯಗಳು ಎಗ್ಗಿಲ್ಲದೇ ನಡೆಯುತ್ತಿವೆ. ಚುನಾವಣಾ ನೀತಿನ ಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ನಂತರ ಒಂದು ವಾರದ ಅವಧಿಯಲ್ಲಿ ಚುನಾವಣಾ ಅಧಿಕಾರಿಗಳು, ಪೊಲೀಸರು 69.36 ಕೋಟಿ ರೂ. ಮೌಲ್ಯದ ನಗದು, ಉಡುಗೊರೆ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Karnataka Elections 2023: ಕಂತೆ ಕಂತೆ ಹಣ ಸೊಂಟಕ್ಕೆ ಕಟ್ಟಿಕೊಂಡು ಬೈಕ್​ನಲ್ಲಿ ಸಾಗಾಟ; 7 ಲಕ್ಷ ರೂ. ಪೊಲೀಸರ ವಶಕ್ಕೆ

ನೀತಿ ಸಂಹಿತೆ ಜಾರಿಯಾದ ನಂತರ ಈವರೆಗೆ ವಶಪಡಿಸಿಕೊಂಡಿರುವುದರಲ್ಲಿ 22.75 ಕೋಟಿ ರೂ. ನಗದು, 12 ಕೋಟಿ ರೂ. ಮೌಲ್ಯದ ಉಡುಗೊರೆ ವಸ್ತುಗಳು ಸೇರಿವೆ. ನಗದು, ಇತರೆ ವಸ್ತುಗಳು, ಮದ್ಯ, ಮಾದಕ ದ್ರವ್ಯ ಸೇರಿದಂತೆ ಒಟ್ಟು 69,36,17,467 ರೂ. ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ಬುಧವಾರ ತಿಳಿಸಿತ್ತು.

ಬೆಂಗಳೂರಿನ ಆರ್​ಟಿ ನಗರದಲ್ಲಿ ಚುನಾವಣಾಧಿಕಾರಿಗಳು ಬುಧವಾರ ದಾಳಿ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 231 ಕುಕ್ಕರ್​​ಗಳ ಜಪ್ತಿ ಮಾಡಿದ್ದರು. ಇವುಗಳನ್ನು ಮತದಾರರಿಗೆ ಹಂಚುವುದಕ್ಕಾಗಿ ಖಾಲಿ ಮನೆಯಲ್ಲಿ ಸಂಗ್ರಹಿಸಿಡಲಾಗಿತ್ತು. ಈ ಪೈಕಿ ಪುಲಿಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭಾವಚಿತ್ರವಿರುವ 60 ಕುಕ್ಕರ್​​ಗಳನ್ನೂ​ ಜಪ್ತಿ ಮಾಡಲಾಗಿತ್ತು.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ