Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹಮದ್​ಗೆ ಸಚಿವ ಸ್ಥಾನ ಕೊಟ್ಟರೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಬಾರದು ಎಂದು ಪತ್ರ

ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬಾರದು. ಒಂದು ವೇಳೆ ಕೊಟ್ಟರೆ ಅವರಿಗೆ ಪ್ರಮಾಣವಚನ ಬೋಧಿಸಬಾರದು ಎಂದು ರಾಜ್ಯಪಾಲರಿಗೆ ನವಭಾರತ ಸೇನಾ ಪಕ್ಷದ ಸಂಚಾಲಕ ಮನವಿ ಮಾಡಿದ್ದಾರೆ.

ಶಾಸಕ ಜಮೀರ್ ಅಹಮದ್​ಗೆ ಸಚಿವ ಸ್ಥಾನ ಕೊಟ್ಟರೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಬಾರದು ಎಂದು ಪತ್ರ
ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​ ಖಾನ್
Follow us
ರಮೇಶ್ ಬಿ. ಜವಳಗೇರಾ
|

Updated on:May 19, 2023 | 2:44 PM

ಬೆಂಗಳೂರು: ಸಿದ್ದರಾಮಯ್ಯ(Siddaramaiah) ಮುಖ್ಯಮಂತ್ರಿಯಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ನಾಳೆ (ಮೇ.19) ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ಕೆಲ ಶಾಸಕರು ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan)​ ಕೂಡ ಸಚಿವ ಸ್ಥಾನ ಸಿಗುವ ಎಲ್ಲಾ ಸಾಧ್ಯತೆಗಳಿವೆ. ಆದ್ರೆ, ಇದೀಗ ಜಮೀರ್ ಅಹಮದ್​ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ನವಭಾರತ ಸೇನಾ ಪಕ್ಷದ ಸಂಚಾಲಕ ರುಕ್ಮಾಂಗದ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ನಾಮಪತ್ರ ತಿರಸ್ಕರಿಸುವಂತೆ ಚುನಾವಣಾಧಿಕಾರಿಗೆ ದೂರು: ಜಮೀರ್ ಆಹಮದ್​ಗೂ ಶುರುವಾಯ್ತು ಢವಢವ

ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆದಿರುವ ನವಭಾರತ ಸೇನಾ ಪಕ್ಷದ ಸಂಚಾಲಕ ರುಕ್ಮಾಂಗದ, ಚುನಾವಣಾ ಸಮಯದಲ್ಲಿ ಜಮೀರ್ ಅಹಮದ್ ನಾಮಪತ್ರದಲ್ಲಿ ದೋಷಗಳು ಕಂಡು ಬಂದಿವೆ. ಈಗಾಗಲೇ ನಾವು ಚುನಾವಣಾ ಆಯೋಗಕ್ಕೆ ಚಾಮರಾಜಪೇಟೆಯ ಆರ್​ಓ ಹಸನ್ ಸಾಬ್​ಗೆ ದೂರು ನೀಡಿದ್ದೇವು. ಆದರೂ ಚುನಾವಣಾ ಅಧಿಕಾರಿಗಳು ಚುನಾವಣೆಗೆ ನಿಲ್ಲಲು ಜಮೀರ್​ಗೆ ಅವಕಾಶ ಕೊಟ್ಟಿದ್ದರು. ಈಗ ನಾವು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಧಾವೆ ಹೂಡಲಿದ್ದೇವೆ. ಹೀಗಾಗಿ ಜಮೀರ್ ಅಹಮದ್​ ಖಾನ್ ಅವರಿಗೆ ಸಚಿವ ಸ್ಥಾನ ನೀಡಬಾರದರು. ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನ ನೀಡಿದರೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಬಾರದು ಎಂದು ಒತ್ತಾಯಿಸಿದರು.

ಈಗ ನಾವು ಸಚಿವ ಸ್ಥಾನ ಕೊಡಬಾದರು ಎಂದು ರಾಜ್ಯಪಾಲರಿಗೆ ಮನವಿ ನೀಡಿದ್ದೇವೆ. ಒಂದು ವೇಳೆ ಅವರಿಗೆ ಸಚಿವ ಸ್ಥಾನ ಕೊಟ್ಟರೆ ತಮ್ಮ ಅಧಿಕಾರದ ಪ್ರಭಾವದಿಂದ ಕೇಸ್ ಮುಚ್ಚಿ ಹಾಕುತ್ತಾರೆ. ಹೀಗಾಗಿ ಜಮೀರ್ ಅಹಮದ್ ಅವರಿಗೆ ಸಚಿವ ಸ್ಥಾನದ ಪ್ರಮಾಣವಚನ ಬೋಧಿಸಬಾರದು. ಚಾಮರಾಜಪೇಟೆಯ ಅರ್​ಓ ಹಸನ್ ಸಾಬ್, ಇವರು ಜಮೀರ್ ಸಾಬ್ ಹಾಗಾಗಿ ಅಂದು ನಾವು ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಎಂದು ರುಕ್ಮಾಂಗದ ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: ನಾಳೆಯೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಜಮೀರ್ ವಿರುದ್ಧ ಆರೋಪ ಏನು?

ಲೋಕಾಯುಕ್ತಕ್ಕೆ ಮಾಹಿತಿ ಸಲ್ಲಿಸುವ ವೇಳೆ ತನ್ನ ಅವಲಂಬಿತರ ಹೆಸರಿನಲ್ಲಿ ತಾಯಿ ಹೆಸರು ಸೇರಿಸಿದ್ದಾರೆ. ಆದ್ರೆ ನಾಮಪತ್ರದಲ್ಲಿ ಮಾತ್ರ ತಾಯಿ ಹೆಸರನ್ನು ಪ್ರಸ್ತಾಪಿಸಿಲ್ಲ. ಇದರೊಂದಿಗೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕೃತ ಮಾಡುವಂತೆ ಚಾಮರಾಜಪೇಟೆಯ ನವ ಭಾರತ ಸೇನಾ ಪಾರ್ಟಿಯ ವಿಧಾನಸಭಾ ಅಭ್ಯರ್ಥಿ ರುಕ್ಮಂಗ ಅವರು ದೂರು ನೀಡಿದ್ದರು.

ಲೋಕಾಯುಕ್ತಕ್ಕೆ ಸಲ್ಲಿಸಿದ ಅಫೀಡವಿಟ್​ಲ್ಲಿ ತನ್ನ ಅವಲಂಭಿತರು ಹೆಂಡತಿ ತಾಯಿ , ಇಬ್ಬರು ಮಕ್ಕಳು ಎಂದು ಮಾಹಿತಿ ನೀಡಿದ್ದಾರೆ. ಆದರೆ ನಾಮಪತ್ರದಲ್ಲಿ ತಾಯಿ ಹೆಸರು ಉಲ್ಲೇಖ‌ ಮಾಡಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದರು. ಇನ್ನು ಬಿಜೆಪಿಯಿಂದ ಸ್ಪರ್ಧಿಸಿದ್ದ ಭಾಸ್ಕರ್​ ರಾವ್ ಸಹ ಜಮೀರ್ ಅಹಮದ್ ಖಾನ್​ ನಾಮಪತ್ರದಲ್ಲಿ ಲೋಪವಿದೆ. ಹಾಗಾಗಿ ಜಮೀರ್​ ನಾಮಪತ್ರ ತಿರಸ್ಕರಿಸಬೇಕೆಂದು ಮನವಿ ಮಾಡಿದ್ದರು.

ಆದ್ರೆ, ಚುನಾವಣಾಧಿಕಾರಿಗಳು ನಾಮಪತ್ರ ಪರಿಶೀಲಿಸಿ ಎಲ್ಲವೂ ಕ್ರಮಬದ್ಧವಾಗಿದೆ ಎಂದು ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದರು.

Published On - 2:16 pm, Fri, 19 May 23

ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!