ಎಲೆಕ್ಷನ್ ಪ್ರಚಾರಕ್ಕೆ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ ಬುಕ್, ಮೇ 5ರಿಂದ 13ರ ವರೆಗೂ ಪ್ರಯಾಣಿಕರಿಗೆ ತೊಂದರೆ ಸಾಧ್ಯತೆ

ಎಲೆಕ್ಷನ್ ಸಿದ್ದತೆಗೆ ಬೇಕಾದ ಸಾರಿಗೆ ವ್ಯವಸ್ಥೆಗೆ ರಾಜ್ಯಾದ್ಯಂತ ಅಂದಾಜು 10 ಸಾವಿರ ಬಿಎಂಟಿಸಿ(BMTC), ಕೆಎಸ್​ಆರ್​ಟಿಸಿ(KSRTC) ಹಾಗೂ ಆರ್​ಟಿಒ(RTO) ವಾಹನಗಳನ್ನ ಬಳಕೆ ಮಾಡಿಕೊಳ್ಳಲಾಗುತ್ತಂತೆ.

ಎಲೆಕ್ಷನ್ ಪ್ರಚಾರಕ್ಕೆ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ ಬುಕ್, ಮೇ 5ರಿಂದ 13ರ ವರೆಗೂ ಪ್ರಯಾಣಿಕರಿಗೆ ತೊಂದರೆ ಸಾಧ್ಯತೆ
ಬಿಎಂಟಿಸಿ
Follow us
ಆಯೇಷಾ ಬಾನು
|

Updated on: Apr 27, 2023 | 7:00 AM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯ ವಿಧಾನಸಭಾ ಚುನಾವಣಾ ಕಣ(Karnataka Assembly Elections 2023) ರಂಗೇರಿದೆ. ಹೀಗಾಗಿ ಚುನಾವಣೆ ಕಾರ್ಯಕ್ಕೆ ಬೇಕಾದ ಬಸ್​ಗಳ ವ್ಯವಸ್ಥೆಗೆ ಈಗಾಗಲೇ ಬುಕಿಂಗ್ ಮಾಡಿಕೊಳ್ಳುತ್ತಿದ್ದು, ಚುನಾವಣೆ ವೇಳೆ ಸಿಲಿಕಾನ್ ಸಿಟಿಗೆ ಬಸ್ ಕೊರತೆ ಉಂಟಾಗುವ ಸಾಧ್ಯಾತೆ ಇದೆ. ಬೆಂಗಳೂರಿನಲ್ಲಿ ಆಯಾ ಪಕ್ಷಗಳು ಮತದಾರರನ್ನ ಸೆಳೆಯಲು ರಣತಂತ್ರ ಹೂಡುತ್ತಿದ್ದಾರೆ. ಈ ಮಧ್ಯೆ ಚುನಾವಣಾ ಅಧಿಕಾರಿಗಳು ಎಲೆಕ್ಷನ್​ಗೆ ಬೇಕಾದ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳುತ್ತಿದ್ದು, ಎಲೆಕ್ಷನ್ ಸಿದ್ದತೆಗೆ ಬೇಕಾದ ಸಾರಿಗೆ ವ್ಯವಸ್ಥೆಗೆ ರಾಜ್ಯಾದ್ಯಂತ ಅಂದಾಜು 10 ಸಾವಿರ ಬಿಎಂಟಿಸಿ(BMTC), ಕೆಎಸ್​ಆರ್​ಟಿಸಿ(KSRTC) ಹಾಗೂ ಆರ್​ಟಿಒ(RTO) ವಾಹನಗಳನ್ನ ಬಳಕೆ ಮಾಡಿಕೊಳ್ಳಲಾಗುತ್ತಂತೆ.

ಈ ಬಾರಿ ಒಂದು ಹಂತದಲ್ಲಿ ಎಲೆಕ್ಷನ್ ನಡೆಯುತ್ತಿರುವ ಹಿನ್ನೆಲೆ ಮೇ 5 ರಿಂದ ಮೇ 13 ರ ವರೆಗೂ ಚುನಾವಣಾ ಕೆಲಸಕ್ಕೆ ಬಸ್ಸುಗಳ ಅವಶ್ಯಕತೆ ಇರುತ್ತದೆ.‌ ಹೀಗಾಗಿ ಚುನಾವಣಾ ಅಧಿಕಾರಿಗಳು ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್ಸುಗಳನ್ನ ಬುಕಿಂಗ್ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು ಒಂದರಿಂದ ಎರಡು ಸಾವಿರ ಬಸ್ಸುಗಳನ್ನ ಬುಕ್ ಮಾಡಿಕೊಳ್ಳಲಾಗಿದೆ. ಜೊತೆಗೆ 800 ಆರ್​ಟಿಒ ವಾಹನಗಳನ್ನ ಸ್ಕ್ರೀನಿಂಗ್ ಹಾಗೂ ಸ್ಕಾಡ್ ಗಳಿಗೆ ನೀಡಲು ಬಳಕೆ ಮಾಡಿಕೊಳ್ಳಲಾಗುತ್ತಿದೆಯಂತೆ.‌ ಇನ್ನು ಸರ್ಕಾರಿ ಬಸ್ಸುಗಳನ್ನ ಪೊಲೀಸ್ ಇಲಾಖೆ, ಬಿಬಿಎಂಪಿ, ಆರ್​ಟಿಒ, ಸಾರಿಗೆ ಇಲಾಖೆಗಳ ಸಿಬ್ಬಂದಿಗೆ ಪಿಕಪ್-ಡ್ರಾಪ್ ಹಾಗೂ ಹಲವು ಚುನಾವಣಾ ಕೆಲಸಗಳ ನಿಮಿತ್ತ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಧ್ಯ ಈ ಬಸ್ಸುಗಳನ್ನ ಮೇ 5 ರಿಂದ ಮೇ 13 ರವರೆಗೂ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದ್ದು, ಸಾರ್ವಜನಿಕರಿಗೆ ಬಸ್ಸುಗಳ ಕೊರತೆಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಜಗದೀಶ್​ ಶೆಟ್ಟರ್​ ಸೋಲಿಸಲು ಯಡಿಯೂರಪ್ಪನವರನ್ನೇ ಕಣಕ್ಕಿಳಿಸಿದ ಹೈಕಮಾಂಡ್​, ಲಿಂಗಾಯತ ಮುಖಂಡರ ಸಭೆಯಲ್ಲಿ ಬಿಎಸ್​ವೈ ಹೇಳಿದ್ದೇನು?

ಇನ್ನು ಬೆಂಗಳೂರಿನಲ್ಲಿ 8063 ಪೋಲಿಂಗ್ ಬೂತ್ ಗಳಿದ್ದು, ಅವುಗಳನ್ನ ಮತ ಕೇಂದ್ರಗಳಿಗೆ ಕೊಂಡೋಯ್ಯಲು ಹಾಗೂ ಮತದಾನ ಮುಗಿದ ಮೇಲೆ ಸ್ಟ್ರಾಂಗ್ ರೂಂ ಗೆ ತರಲು ವಾಹನಗಳ ಅವಶ್ಯತೆಗೆ ಇದ್ದು, ಇದಕ್ಕಾಗಿ ಅನುಕೂಲಕರವಾಗುವ ನಿಟ್ಟಿನಿಂದ ನಗರದಲ್ಲಿರುವ ಒಂದೊಂದು ಆರ್ ಟಿ ಒ ಕಚೇರಿಗಳಿಗೂ ನೂರರಿಂದ ಇನ್ನೂರು ಗಾಡಿಗಳನ್ನ ಕೊಡುವುದಕ್ಕೆ ಸೂಚಿಸಲಾಗಿದೆ. ಆರ್​ಟಿಒ ಅಧಿಕಾರಿಗಳು ಸಹ ಚುನಾವಣಾ ಸಿದ್ದತೆಗೆ ಬೇಕಾದ ವಾಹನಗಳನ್ನ ನೀಡಲು ತಯಾರಿ ನಡೆಸುತ್ತಿದ್ದಾರೆ.

ಒಟ್ನಲ್ಲಿ, ಚುನಾವಣಾ ಸಿದ್ದತೆಗೆ ಹಾಗೂ ಚುನಾವಣಾ ಅಧಿಕಾರಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಸಾರಿಗೆ ಇಲಾಖೆ ಬಸ್ಸುಗಳನ್ನೇನು ನೀಡುತ್ತಿದೆ. ಆದ್ರೆ ಇದೇ ವೇಳೆ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ಬಸ್ಸುಗಳನ್ನ ಒದಗಿಸುವ ಅನಿವಾರ್ಯತೆ ಇದ್ದು, ಸಾರಿಗೆ ಇಲಾಖೆ ಯಾವ ರೀತಿಯ ಕ್ರಮಗಳನ್ನ ತೆಗೆದುಕೊಳ್ಳುತ್ತೆ ಅಂತ ಕಾದುನೋಡ್ಬೇಕಿದೆ.

ವರದಿ: ಪೂರ್ಣಿಮಾ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?