ಚುನಾವಣೆ ಗೆಲುವು, ಸೋಲಿನ ಬೆಟ್ಟಿಂಗ್‌: ಏಳು ಮಂದಿ ವಿರುದ್ಧ ಎಫ್​ಐಆರ್

ಕರ್ನಾಟಕ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದ್ದು, ನಾಳೆ (ಮೇ 13) ಫಲಿತಾಂಶ ಹೊರಬೀಳಲಿದೆ. ಈ ನಡುವೆ ಅಭ್ಯರ್ಥಿಗಳ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್ ಕಟ್ಟುವ ಭರಾಟೆ ಜೋರಾಗಿದ್ದು, ಕೆಲವೆಡೆ ಬಹಿರಂಗವಾಗಿ ಬೆಟ್ಟಿಂಗ್ ಕಟ್ಟಲಾಗುತ್ತಿದೆ.

ಚುನಾವಣೆ ಗೆಲುವು, ಸೋಲಿನ ಬೆಟ್ಟಿಂಗ್‌: ಏಳು ಮಂದಿ ವಿರುದ್ಧ ಎಫ್​ಐಆರ್
ಮೈಸೂರಿನಲ್ಲಿ ಚುನಾವಣೆ ಗೆಲುವು, ಸೋಲಿನ ಮೇಲೆ ಬೆಟ್ಟಿಂಗ್‌ (ಸಾಂದರ್ಭಿಕ ಚಿತ್ರ)Image Credit source: Sanjay Rawat
Follow us
|

Updated on: May 12, 2023 | 9:02 PM

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಮುಕ್ತಾಯಗೊಂಡಿದ್ದು, ನಾಳೆ (ಮೇ 13) ಫಲಿತಾಂಶ ಹೊರಬೀಳಲಿದೆ. ಈ ನಡುವೆ ಅಭ್ಯರ್ಥಿಗಳ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್ (Betting) ಕಟ್ಟುವ ಭರಾಟೆ ಜೋರಾಗಿದ್ದು, ಕೆಲವೆಡೆ ಕುರಿ ಮೇಕೆಗಳನ್ನು ಬೆಟ್ಟಿಂಗ್ ಆಗಿ ಇಡಲಾಗುತ್ತಿದೆ. ಇನ್ನೂ ಕೆಲವೆಡೆ ಬಹಿರಂಗವಾಗಿ ಬೆಟ್ಟಿಂಗ್ ಕಟ್ಟಲಾಗುತ್ತಿದೆ. ಇದೀಗ ಮೈಸೂರಿನಲ್ಲಿ ಚುನಾವಣೆ ಗೆಲುವು, ಸೋಲಿನ ಬೆಟ್ಟಿಂಗ್‌ ಅಗ್ರಿಮೆಂಟ್ ವಿಚಾರವಾಗಿ ಒಟ್ಟು ಏಳು ಮಂದಿ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಠಾಣಾ ವ್ಯಾಪ್ತಿಯಲ್ಲಿ ದಂಧೆಕೋರರು ಛಾಪಾಕಾಗದದಲ್ಲಿ 5 ಲಕ್ಷದ ಬೆಟ್ಟಿಂಗ್ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಇದರ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನು ನೋಡಿದ ಪೊಲೀಸರು, 7 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಮತದಾನದ ಬೆನ್ನೆಲೆ ರಾಜ್ಯದಲ್ಲಿ ಹೆಚ್ಚಾದ ರಾಜಕೀಯ ಬೆಟ್ಟಿಂಗ್​: ಅಭ್ಯರ್ಥಿಗಳ ಪರ ಬಾಜಿಗಿಳಿದ ಅಭಿಮಾನಿಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಅಗ್ರಿಮೆಂಟ್ ಪೇಪರ್​ನಲ್ಲಿ ಇರುವಂತೆ, ಜಯರಾಮ, ಪ್ರಕಾಶ್, ಶಿವರಾಜ್ ಅಗ್ರಿಮೆಂಟ್ ಮಾಡಿಕೊಂಡಿದ್ದಾರೆ. ಜೆಡಿಎಸ್​ ಅಭ್ಯರ್ಥಿ ಜಯಪ್ರಕಾಶ್ ಚಿಕ್ಕಣ್ಣ ಪರ ಪ್ರಕಾಶ್, ಶಿವರಾಜ್‌ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ಪರ ಜಯರಾಮ್‌ ಬೆಟ್ಟಿಂಗ್‌ ಅಗ್ರಿಮೆಂಟ್ ಮಾಡಿದ್ದಾರೆ. ಅಲ್ಲದೆ, ತಲಾ 5 ಲಕ್ಷದಂತೆ ಒಟ್ಟು 10 ಲಕ್ಷ ನಗದು ನೇಮಿಚಂದ್ ಬಳಿ ನೀಡಲಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಪೂಜಾ ಎಲೆಕ್ಟ್ರಾನಿಕ್ಸ್‌ ಅಂಗಡಿಯ ಮಾಲೀಕ‌ ನೇಮಿಚಂದ್ ಬಳಿ ಬೆಟ್ಟಿಂಗ್ ಹಣವನ್ನು ನೀಡಲಾಗಿದ್ದು, ಒಂದು ವೇಳೆ ಬಿಜೆಪಿ ಗೆದ್ದರೆ ಹಣ ವಾಪಸ್ ಪಡೆಯುವ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಸದ್ಯ ಅಗ್ರಿಮೆಂಟ್‌ಗೆ ಸಹಾಯ ಮಾಡಿದ್ದ ಮೂವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೂಡ ಬೆಟ್ಟಿಂಗ್ ಭರಾಟೆ ಹೆಚ್ಚಾಗಿದೆ. ನಿವೇಶನ, ಹೊಲ, ಗದ್ದೆ, ನಗದು ವಿಡಿಯೋ ಮಾಡಿ ಬೆಟ್ಟಿಂಗ್ ಕಟ್ಟಲು ಸವಾಲು ಹಾಕಲಾಗಿದೆ. ಯುವಕರು, ವೃದ್ದರು ಯಾರೂ ಬೇಕಾದರೂ ತಾಕತ್ತಿದ್ದರೆ ಇದ್ದರೆ ಬೆಟ್ಟಿಂಗ್ ಕಟ್ಟಿ ಬನ್ನಿ ಅಂತಾ​ ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ ಪರ ಚಾಲೆಂಜ್​ ಮಾಡಲಾಗಿದೆ. ಇದೇ ರೀತಿ ಸಿದ್ದರಾಮಯ್ಯ ಮತ್ತು ಸೋಮಣ್ಣ ಅಖಾಡದಲ್ಲಿರುವ ವರುಣಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲೂ ಬೆಟ್ಟಿಂಗ್ ಕಟ್ಟಲಾಗುತ್ತಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ