AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಕಾರಿನ ಮೇಲೆ ಕಾಗೆ ಕೂತಿದಕ್ಕೂ ಡಿಕೆ ಶಿವಕುಮಾರ್ ಹೆಲಿಕಾಪ್ಟರ್​ಗೆ ರಣಹದ್ದು ಗುದ್ದಿದಕ್ಕೂ ಇದೆಯಾ ಸಾಮ್ಯತೆ

ಬಜರಂಗದಳ ಮತ್ತು ಪಿಎಫ್​ಐ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಇದಾದ ಕೆಲವೇ ಗಂಟೆಗಳಲ್ಲಿ ಡಿಕೆ ಶಿವಕುಮಾರ್ ದೊಡ್ಡ ಅನಾಹುತವನ್ನೇ ಎದುರಿಸುವಂತಾಗಿದೆ. ಹೀಗಾಗಿ ಅನೇಕರು ಈ ಘಟನೆಯನ್ನು ನಾನಾ ರೀತಿಯಲ್ಲಿ ವಿಮರ್ಶಿಸುತ್ತಿದ್ದಾರೆ.

ಸಿದ್ದರಾಮಯ್ಯ ಕಾರಿನ ಮೇಲೆ ಕಾಗೆ ಕೂತಿದಕ್ಕೂ ಡಿಕೆ ಶಿವಕುಮಾರ್ ಹೆಲಿಕಾಪ್ಟರ್​ಗೆ ರಣಹದ್ದು ಗುದ್ದಿದಕ್ಕೂ ಇದೆಯಾ ಸಾಮ್ಯತೆ
ಸಿದ್ದರಾಮಯ್ಯ ಕಾರು, ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್
ಆಯೇಷಾ ಬಾನು
|

Updated on: May 02, 2023 | 10:36 PM

Share

ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ(Karnataka Assembly Elections 2023) ಅಖಾಡ ಸಿದ್ಧವಾಗಿದೆ. ಇನ್ನು ಕೇವಲ 8 ದಿನಗಳಲ್ಲಿ ರಾಜಕೀಯ ಚಿತ್ರಣವೇ ಬದಲಾಗಲಿದೆ. ಇದರ ನಡುವೆ ಇಂದು ನಡೆದ ಘಟನೆಯೊಂದು ಭಾರೀ ಚರ್ಚೆಯಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ರಣಹದ್ದು ಬಡಿದಿದ್ದು ಗಾಜು ಪುಡಿ ಪುಡಿಯಾಗಿದೆ. ಕೂದಲೆಳೆ ಅಂತರದಲ್ಲಿ ಡಿಕೆ ಶಿವಕುಮಾರ್ ಬಚಾವ್ ಆಗಿದ್ದು ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯಲ್ಲಿ ವಿಮರ್ಶೆ ಮಾಡಲಾಗುತ್ತಿದೆ. ಅನೇಕರು ಟೀಕೆ ಮಾಡುತ್ತಿದ್ದಾರೆ. ಬಜರಂಗದಳ ನಿಷೇಧಿಸುವುದಾಗಿ ಹೇಳಿದ ಒಂದೇ ಗಂಟೆಯಲ್ಲಿ ಜಟಾಯು ತಕ್ಕ ಪಾಠ ಕಲಿಸಿದ್ದಾನೆ. ಇದು ರಾಮ-ಹನುಮನ ಕೋಪ ಎಂದಿದ್ದಾರೆ. ಇನ್ನು ಮತ್ತೊಂದೆಡೆ ಮುಂದಿನ ಚುನಾವಣೆಯಲ್ಲಿ ಸರ್ಕಾರ ಸೋಲುವುದಕ್ಕೆ ಇದು ಸಂಕೇತ ಎನ್ನುವ ಮಾತುಗಳು ಹರಿದಾಡುತ್ತಿವೆ.

ರಾಜ್ಯ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಇಂದು ‘ಸರ್ವಜನಾಂಗದ ಶಾಂತಿಯ ತೋಟ’ ಎಂಬ ಕವಿ ವಾಣಿಯನ್ನು ಸಾಕಾರಗೊಳಿಸುವ ಪ್ರತಿಜ್ಞೆಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ಮುಖ್ಯವಾಗಿ ಬಜರಂಗದಳ ಮತ್ತು ಪಿಎಫ್​ಐ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಇದಾದ ಕೆಲವೇ ಗಂಟೆಗಳಲ್ಲಿ ಡಿಕೆ ಶಿವಕುಮಾರ್ ದೊಡ್ಡ ಅನಾಹುತವನ್ನೇ ಎದುರಿಸುವಂತಾಗಿದೆ. ಹೀಗಾಗಿ ಅನೇಕರು ಈ ಘಟನೆಯನ್ನು ನಾನಾ ರೀತಿಯಲ್ಲಿ ವಿಮರ್ಶಿಸುತ್ತಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು; ವಿಂಡೋ ಗ್ಲಾಸ್​ ಪುಡಿಪುಡಿ, ತಪ್ಪಿದ ಅನಾಹುತ

ಬಜರಂಗದಳ ನಿಷೇಧಿಸುವುದಾಗಿ ಹೇಳಿದಕ್ಕೆ ಜಟಾಯು ಪಾಠ

ಪ್ರಚಾರ ಹಿನ್ನಲೆ ಕೋಲಾರದ ಮುಳುಬಾಗಿಲಿಗೆ ಹೆಲಿಕಾಪ್ಟರ್​ನಲ್ಲಿ ಡಿಕೆ ಶಿವಕುಮಾರ್ ಪ್ರಯಾಣಿಸುವಾಗ ಟಿವಿ9 ವರದಿಗಾರ ಡಿಕೆಶಿ ಅವರನ್ನು ಸಂದರ್ಶನ ಮಾಡುವಾಗ ಈ ಘಟನೆ ನಡೆದಿದ್ದು ಘಟನೆಯ ಎಕ್ಸ್ ಕ್ಲೂಸಿವ್ ವಿಡಿಯೋ ಟಿವಿ9ಗೆ ಲಭ್ಯವಾಗಿತ್ತು. ಈ ಸುದ್ದಿ ಹೊರ ಬೀಳುತ್ತಿದ್ದಂತೆ ಅನೇಕರು ನಾನಾ ರೀತಿಯಲ್ಲಿ ಸುದ್ದಿಯನ್ನು ವಿಶ್ಲೇಷಿಸಿದ್ದಾರೆ. ಅನೇಕರು ಇದು ರಾಮ-ಹನುಮನ ಕೋಪ. ಹನುಮನ ನಾಡಿನಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳಿದಕ್ಕೆ ಸ್ವತಃ ಜಟಾಯು ಡಿಕೆ ಶಿವಕುಮಾರ್ ಮೇಲೆ ಅಟ್ಯಾಕ್ ಮಾಡಿದೆ ಎಂದು ಕಮೆಂಟ್ ಮಾಡುತ್ತಿದ್ದಾರೆ. ಜಟಾಯು ವಿಷ್ಟುವಿನ ವಾಹನ ಕಾಂಗ್ರೆಸ್​ನ ಭರವಸೆಗಳು ಭಗವಂತನಿಗೂ ಸಿಟ್ಟು ತರಿಸುತ್ತಿದೆ. ಇದು ಅಪಶಕುನ. ಜಟಾಯು ಅಧರ್ಮದ ಕೆಲಸದ ಬಗ್ಗೆ ಎಚ್ಚರಿಕೆ ನೀಡಲು ಬಂದತ್ತು ಎಂದು ಕಮೆಂಟ್ ಮಾಡುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಭಾರೀ ಸದ್ದು ಮಾಡುತ್ತಿದೆ.

ಸಿದ್ದರಾಮಯ್ಯನ ಕಾರಿನ ಮೇಲೆ ಕಾಗೆ ಕೂತು ಕಾಂಗ್ರೆಸ್ ನೆಲಕಚ್ಚಿತ್ತು, ಈಗ ಡಿಕೆಶಿ ಸರದಿ

2016ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ಕಾರಿನ ಮೇಲೆ ಕಾಗೆ ಕೂತಿತ್ತು. ಇದನ್ನು ಕೂಡ ಅಪಶಕುನ ಎಂದು ಹೇಳಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಮೂಢ ನಂಬಿಕೆಗಳನ್ನು ನಂಬುವುದಿಲ್ಲ ಎಂದಿದ್ದ ಸಿದ್ದರಾಮಯ್ಯ ತಾಂತ್ರಿಕ ದೋಷದ ನೆಪ ಹೇಳಿ ಕಾರು ಬದಲಾಯಿಸಿದ್ದರು. ಇದಾದ ಬಳಿಕ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಹೀಗಾಗಿ ಈಗ ಡಿಕೆ ಶಿವಕುಮಾರ್​ಗೆ ಸಂಕಷ್ಟ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಕಾಗೆ ಸೂಚನೆ ನೀಡಿದಂತೆ ರಣಹದ್ದು ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಈ ಬಾರಿ ಕಾಂಗ್ರೆಸ್ ಸರ್ಕಾರ ಮತ್ತೆ ನೆಲಕಚ್ಚಲಿದೆ ಎಂಬ ಚರ್ಚೆಗಳು ಜೋರಾಗಿವೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್