ಎಸ್​ಡಿಪಿಐ ಜೊತೆ ಕಾಂಗ್ರೆಸ್ ಒಳ ಒಪ್ಪಂದ: ವಿಡಿಯೋ ಸಮೇತ ಆರೋಪ ಮಾಡಿದ ಬಿಜೆಪಿ

ನಿಷೇಧಿತ ಪಿಎಫ್​ಐ ಸಂಘಟನೆ ಜೊತೆ ಗುರುತಿಸಿಕೊಂಡಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್​ಡಿಪಿಐ) ಸಂಘಟನೆಯೊಂದಿಗೆ ಕಾಂಗ್ರೆಸ್​ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿದೆ.

ಎಸ್​ಡಿಪಿಐ ಜೊತೆ ಕಾಂಗ್ರೆಸ್ ಒಳ ಒಪ್ಪಂದ: ವಿಡಿಯೋ ಸಮೇತ ಆರೋಪ ಮಾಡಿದ ಬಿಜೆಪಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:May 05, 2023 | 7:52 PM

ಬೆಂಗಳೂರು: ನಿಷೇಧಿತ ಪಿಎಫ್​ಐ (PFI) ಸಂಘಟನೆ ಜೊತೆ ಗುರುತಿಸಿಕೊಂಡಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆಯೊಂದಿಗೆ ಕಾಂಗ್ರೆಸ್​ ಒಳ ಒಪ್ಪಂದ​ ಮಾಡಿಕೊಂಡಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಇಂಥದೊಂದು ಆರೋಪ ಮಾಡುವ ಮೂಲಕ ವಿಡಿಯೋ ಒಂದನ್ನು ಬಿಜೆಪಿ ಟ್ವೀಟ್​ ಮಾಡಿಕೊಂಡಿದೆ. ಕೇರಳ ಕಾಂಗ್ರೆಸ್ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರ ವಿಡಿಯೋವನ್ನು ಬಿಜೆಪಿ ರಾಜ್ಯ ಘಟಕ ಹಂಚಿಕೊಂಡಿದ್ದು, ಕಾಂಗ್ರೆಸ್ ಮತ್ತು ಎಸ್​ಡಿಪಿಐ ಎರಡೂ ಕೈ ಜೋಡಿಸಿವೆ ಎಂದು ಹೇಳಿದೆ.

ಮತಗಳನ್ನು ವಿಭಜಿಸದಂತೆ ಎಸ್​ಡಿಪಿಐಗೆ ಒತ್ತಾಯಿಸಿದ ಸಂಸದ ಉಣ್ಣಿತ್ತಾನ್

ಕೇರಳ ಕಾಂಗ್ರೆಸ್ ಸಂಸದ ಉಣ್ಣಿತ್ತಾನ್ (Rajmohan Unnithan) ಅವರು ಕರ್ನಾಟಕದಲ್ಲಿ ಮತಗಳ ವಿಭಜನೆಗೆ ತಂತ್ರ ರೂಪಿಸಿದ್ದು, ಒಂದು ಸಮುದಾಯದ ಮತಗಳಿಗಾಗಿ ಅವರು ಹತಾಶೆಗೊಂಡಿರುವುದು ಬಹಿರಂಗವಾಗಿದೆ. ಮತಗಳನ್ನು ವಿಭಜಿಸದಂತೆ ಎಸ್​ಡಿಪಿಐಗೆ ಒತ್ತಾಯಿಸಿದ್ದು, ಆ ಮೂಲಕ ಬಜರಂಗದಳವನ್ನು ಗುರಿಯಾಗಿಸುವ ಅವರ ಬಲವಾದ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ. ಇದು ಅಪಾಯಕಾರಿಯಾಗಿದ್ದು, ಮತಗಳ ವಿಭಜನೆಯ ಈ  ಕಾರ್ಯಕ್ಕೆ ಕೋಮುವಾದಿ ಕಾಂಗ್ರೆಸ್​ ಎಂದು ಹೇಳುವುದಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಬಿಜೆಪಿ ಟ್ವೀಟ್​ ಮೂಲಕ ಕಿಡಿಕಾರಿದೆ.

ಇದನ್ನೂ ಓದಿ: ಪಿಎಫ್‌ಐ, ಎಸ್‌ಡಿಪಿಐ ಮೆಚ್ಚಿಸಲು ಬಜರಂಗದಳ ನಿಷೇಧಿಸಲು ಹೊರಟ ಕಾಂಗ್ರೆಸ್; ಉಡುಪಿಯಲ್ಲಿ ಅನಿಲ್ ಆ್ಯಂಟನಿ

ನಾವೆಲ್ಲರೂ ಆರ್​ಎಸ್​ಎಸ್​​ ಮತ್ತು ಬಿಜೆಪಿ ವಿರುದ್ಧ ಹೋರಾಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ  ಮುಸ್ಲಿಮರು ತಮ್ಮೊಳಗೆ ತಾವೆ ಜಗಳವಾಡದೆ ಮತ್ತು ಬಿಜೆಪಿಯನ್ನು ಗೆಲ್ಲಿಸಬಾರದು. ಸರಿಯೇ? ಎಂದು ಉನ್ನಿಥಾನ್​ ವಿಡಿಯೋದಲ್ಲಿ ಹೇಳಿದ್ದಾರೆ.

ಇಸ್ಲಾಮಿಸ್ಟ್​ಗಳನ್ನು ಸೆಳೆಯಲು ಏನು ಬೇಕಾದರೂ ಮಾಡುತ್ತಾರೆ: ಕೆ. ಸುರೇಂದ್ರನ್

ಈ ಕುರಿತಾಗಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್​ ಸಹ ಟ್ವೀಟ್ ಮಾಡಿದ್ದು, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರ ಮಾತುಗಳು ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯತಂತ್ರವನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಇಸ್ಲಾಮಿಸ್ಟ್​ಗಳನ್ನು ಸೆಳೆಯಲು ಅವರು ಏನು ಬೇಕಾದರೂ ಮಾಡುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಕರ್ನಾಟಕದ ಜನರನ್ನು ಲೂಟಿ ಮಾಡಿವೆ: ತುಮಕೂರಿನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕಾಂಗ್ರೆಸ್​ನ ಮುಸ್ಲಿಂ ಅಭ್ಯರ್ಥಿಗಳ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಎಸ್​ಡಿಪಿಐಗೆ ಉಣ್ಣಿತ್ತಾನ್​ ಯಾವುದೇ ಮುಜುಗರವಿಲ್ಲದೆ ಹೇಳುತ್ತಿದ್ದಾರೆ. ಹಾಗಾದರೆ ಈ ಸಂದರ್ಭದಲ್ಲಿ ಬಿಜೆಪಿ ಗೆಲ್ಲಬಹುದಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಕಾಂಗ್ರೆಸ್​, ಎಸ್​ಡಿಪಿಐ ಸಂಯೋಜಿತ ಅವಳಿ ಮಕ್ಕಳಿದ್ದಂತೆ: ತೇಜಸ್ವಿ ಸೂರ್ಯ 

ಇದೇ ವಿಡಿಯೋವನ್ನು ಇತರೆ ಬಿಜೆಪಿ ನಾಯಕರು ಸಹ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಮತ್ತು ಎಸ್​ಡಿಪಿಐ ಸಂಯೋಜಿತ ಅವಳಿ (Siamese twins) ಮಕ್ಕಳಿದ್ದಂತೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:52 pm, Fri, 5 May 23

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು