ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ನಿಲ್ಲದ ಅಸಮಾಧಾನ: ಟಿಕೆಟ್​ ನೀಡದಂತೆ ಹೈಕಮಾಂಡ್​​​​ಗೆ ಕಾರ್ಯಕರ್ತರ ಪತ್ರ

ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್​ ನೀಡದಂತೆ ಕಾರ್ಯಕರ್ತರು ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದಾರೆ. ಮೂಡಿಗೆರೆ ತಾಲೂಕಿನ ಪ್ರತಿ ಹೋಬಳಿಯ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​​ ಸಂತೋಷ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ 10 ಅಂಶಗನ್ನೊಳಗೊಂಡ ಪತ್ರವನ್ನು ಬರೆದು ಇ-ಮೇಲ್ ಮಾಡಿದ್ದಾರೆ.

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ನಿಲ್ಲದ ಅಸಮಾಧಾನ: ಟಿಕೆಟ್​ ನೀಡದಂತೆ ಹೈಕಮಾಂಡ್​​​​ಗೆ ಕಾರ್ಯಕರ್ತರ ಪತ್ರ
ಶಾಸಕ ಎಂ ಪಿ ಕುಮಾರಸ್ವಾಮಿ (ಎಡಚಿತ್ರ) ಕಾರ್ಯಕರ್ತರ ಪತ್ರ (ಬಲಚಿತ್ರ)
Follow us
ವಿವೇಕ ಬಿರಾದಾರ
|

Updated on:Apr 04, 2023 | 3:58 PM

ಚಿಕ್ಕಮಗಳೂರು: ಮೂಡಿಗೆರೆ ಬಿಜೆಪಿ (BJP) ಶಾಸಕ ಎಂ.ಪಿ.ಕುಮಾರಸ್ವಾಮಿ (MP Kumaraswamy) ವಿರುದ್ಧ ಅಸಮಾಧಾನ ಇನ್ನೂ ನಿಂತಿಲ್ಲ. ಪಕ್ಷದ ಕಾರ್ಯಕರ್ತರು, ಶಾಸಕರ ವಿರುದ್ಧ ಬಂಡಾಯ ಎದ್ದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ, ಮೂಡಿಗೆರೆಯಲ್ಲಿ ಡಬಲ್​ ಇಂಜಿನ್​ ಸರ್ಕಾರದ ಸಾಧನೆಗಳನ್ನು ಹೇಳುತ್ತಾ ವಿಜಯ ಸಂಕಲ್ಪ ಯಾತ್ರೆ ಮಾಡಿತ್ತು. ಈ ಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS yediyurappa) ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಅಸಮಾಧಾನಗೊಂಡು ಎಂ.ಪಿ ಕುಮಾರಸ್ವಾಮಿಯವರಿಗೆ ಯಾವುದೇ ಕಾರಣಕ್ಕೂ ಟಿಕೆಟ್​ ನೀಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆಗ ವಿಜಯ ಸಂಕಲ್ಪಯಾತ್ರೆಯನ್ನು ಬಿಎಸ್​ ಯಡಿಯೂರಪ್ಪ ಅರ್ಧಕ್ಕೆ ಮೊಟಕುಗೊಳಿಸಿದ್ದರು. ಈ ಅಸಮಾಧಾನ ಮುಂದುವರೆದಿದ್ದು, ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್​ ನೀಡದಂತೆ ಕಾರ್ಯಕರ್ತರು ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದಾರೆ.

ಮೂಡಿಗೆರೆ ತಾಲೂಕಿನ ಪ್ರತಿ ಹೋಬಳಿಯ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​​ ಸಂತೋಷ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ 10 ಅಂಶಗನ್ನೊಳಗೊಂಡ ಪತ್ರವನ್ನು ಬರೆದು ಇ-ಮೇಲ್ ಮಾಡಿದ್ದಾರೆ.

ಇದನ್ನೂ ಓದಿ: ಕಿಂಗ್ ಪಿನ್ ರುದ್ರಗೌಡ್ ಪಾಟೀಲ್​​​ಗೆ ಮಣೆ ಹಾಕಿದ್ರಾ ಜನಾರ್ಧನ ರೆಡ್ಡಿ? ಕೆಆರ್​ಪಿಪಿಯಿಂದ ಟಿಕೆಟ್​ ಸಾಧ್ಯತೆ

ಪಕ್ಷ ವಿರೋಧಿ, ಕಾರ್ಯಕರ್ತರ ಕಡೆಗಣನೆ, ವಿಧಾನಸೌಧದ ಮುಂದೆ ಪಕ್ಷ ಮರ್ಯಾದೆ ಕಳೆದದ್ದು, ನೋವು ಹೇಳಿಕೊಂಡವರ ವಿರುದ್ಧ ತಾನೇ ಬಟ್ಟೆ ಹರಿದುಕೊಂಡಿರುವ ಬಗ್ಗೆ, ಆಪ್ತರಿಗೆ ಮಾತ್ರ ಹೆಚ್ಚೆಚ್ಚು ಅನುದಾನ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಎಲ್ಲ ಅಂಶಗಳನ್ನು ಕಾರ್ಯಕರ್ತರು ಪತ್ರದಲ್ಲಿ ಬರೆದು ಕೇಂದ್ರ ನಾಯಕರಿಗೆ ಕಳುಹಿಸಿದ್ದಾರೆ.

ಸಿಟಿ ರವಿ ಮನೆ ಮುಂದೆ ಬಲ ಪ್ರದರ್ಶನ

ಕಳೆದ ಕೆಲ ದಿನಗಳ ಹಿಂದೆ ಶಾಸಕ ಎಂಪಿ ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮನೆ ಮುಂದೆ ಬಲ ಪ್ರದರ್ಶನ ಮಾಡಿದ್ದರು. ಈ ವೇಳೆ ಕಾರ್ಯಕರ್ತರು ಎಂಪಿ ಕುಮಾರಸ್ವಾಮಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದರು. 3 ಬಾರಿ ಶಾಸಕರಾಗಿರುವ ಎಂ.ಪಿ. ಕುಮಾರಸ್ವಾಮಿಯವರು ಗೆದ್ದ ಮೇಲೆ ಕ್ಷೇತ್ರದಲ್ಲಿ ಕಾರ್ಯಕರ್ತರಿಗೆ ಸಿಗುತ್ತಿಲ್ಲ. ಯಾವ ಮನವಿಗೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆ ಈ ಬಾರಿ ಇವರಿಗೆ ಟಿಕೆಟ್​ ನೀಡಬಾರದು ಎಂದು ಒತ್ತಾಯಿಸಿದ್ದರು.

ಎಂಪಿ ಕುಮಾರಸ್ವಾಮಿ ಮೇಲೆ ಹಲ್ಲೆ, ಅಂಗಿ ಹರಿದಿದ್ದ ಆರೋಪ

ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಎಂ.ಪಿ ಕುಮಾರಸ್ವಾಮಿ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿ, ಅಂಗಿ ಹರಿದಿದರುವ ಆರೋಪ ಕೇಳಿಬಂದಿತ್ತು.

ಕರ್ನಾಟಕ ವಿಧಾನಸಭಾ ಚುನಾವಣೆಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

Published On - 3:57 pm, Tue, 4 April 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್