ನಾಮಪತ್ರ ತಿರಸ್ಕರಿಸುವಂತೆ ಚುನಾವಣಾಧಿಕಾರಿಗೆ ದೂರು: ಜಮೀರ್ ಆಹಮದ್ಗೂ ಶುರುವಾಯ್ತು ಢವಢವ
ಕೆಪಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆನ್ನಲ್ಲೇ ಇದೀಗ ಚಾಮರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಜಮೀದ್ ಅಹಮದ್ ಖಾನ್ಗೂ ನಾಮಪತ್ರ ತಿರಸ್ಕೃತ ಆತಂಕ ಶುರುವಾಗಿದೆ.
ಬೆಂಗಳೂರು: ನಾಮಪತ್ರ ತಿರಸ್ಕೃತವಾಗು ಆತಂದಲ್ಲಿದ್ದ ಕನಕಪುರ ಕ್ಷೇತ್ರದ ಅಭ್ಯರ್ಥಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಗ್ ರಿಲೀಫ್ ಸಿಕ್ಕಿದೆ. ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಚಾಮರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ (Zameer Ahmed Khan nomination) ಅವರ ನಾಮಪತ್ರ ತಿರಸ್ಕೃತ ಮಾಡುವಂತೆ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. ನಾಮಪತ್ರದಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ನವ ಭಾರತ ಸೇನಾ ಪಾರ್ಟಿಯ ವಿಧಾನಸಭಾ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿಗಳಿಬ್ಬರು ಸೇರಿಕೊಂಡು ದೂರು ನೀಡಿದ್ದಾರೆ. ಇದರಿಂದ ಜಮೀರ್ ಅಹಮದ್ ಖಾನ್ಗೆ ಢವಢವ ಶುರುವಾಗಿದೆ.
ಇನ್ನು ಲೋಕಾಯುಕ್ತಕ್ಕೆ ಮಾಹಿತಿ ಸಲ್ಲಿಸುವ ವೇಳೆ ತನ್ನ ಅವಲಂಬಿತರ ಹೆಸರಿನಲ್ಲಿ ತಾಯಿ ಹೆಸರು ಸೇರಿಸಿದ್ದಾರೆ. ಆದ್ರೆ ನಾಮಪತ್ರದಲ್ಲಿ ಮಾತ್ರ ತಾಯಿ ಹೆಸರನ್ನು ಪ್ರಸ್ತಾಪಿಸಿಲ್ಲ. ಇದರೊಂದಿಗೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕೃತ ಮಾಡುವಂತೆ ಚಾಮರಾಜಪೇಟೆಯ ನವ ಭಾರತ ಸೇನಾ ಪಾರ್ಟಿಯ ವಿಧಾನಸಭಾ ಅಭ್ಯರ್ಥಿ ರುಕ್ಮಂಗ ಅವರು ದೂರು ನೀಡಿದ್ದಾರೆ. ಲೋಕಾಯುಕ್ತಕ್ಕೆ ಸಲ್ಲಿಸಿದ ಅಫೀಡವಿಟ್ಲ್ಲಿ ತನ್ನ ಅವಲಂಭಿತರು ಹೆಂಡತಿ ತಾಯಿ , ಇಬ್ಬರು ಮಕ್ಕಳು ಎಂದು ಮಾಹಿತಿ ನೀಡಿದ್ದಾರೆ. ಆದರೆ ನಾಮಪತ್ರದಲ್ಲಿ ತಾಯಿ ಹೆಸರು ಉಲ್ಲೇಖ ಮಾಡಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಪ್ರತಿಕ್ರಿಯಿಸಿದ್ದು, ಚಾಮರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ನಾಮಪತ್ರದಲ್ಲಿ ಲೋಪವಿದೆ. ಹಾಗಾಗಿ ಜಮೀರ್ ನಾಮಪತ್ರ ತಿರಸ್ಕರಿಸಬೇಕೆಂದು ಮನವಿ ಮಾಡಿದ್ದೇನೆ. ಇದಕ್ಕೆ ಜಮೀರ್ ಅಹಮದ್ ಖಾನ್ ಅವರಿಗೆ ನೋಟಿಸ್ ಕೊಡುತ್ತೇವೆ ಎಂದು ಅಧಿಕಾರಿಗಳಯ ಹೇಳಿದ್ದಾರೆ ಎಂದು ತಿಳಿಸಿದರು.
ಏಪ್ರಿಲ್ 18ರಂದು ಜಮೀರ್ ಅಹಮದ್ ಖಾನ್ ಅವರು ಬೆಂಗಳೂರಿನ ಗೂಡ್‌ಶೆಡ್ ರಸ್ತೆಯಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದರು. ತಮ್ಮ ತಾಯಿ ಹಾಗೂ ಹೈಕೋರ್ಟ್ ನ ಹಿರಿಯ ವಕೀಲರಾದ ಇಸ್ಮಾಯಿಲ್ ಜಬಿವುಲ್ಲಾ ಸೇರಿದಂತೆ ಹಲವರೊಂದಿಗೆ ತೆರಳಿ 16 ನಾಮಪತ್ರದ ಪ್ರತಿ ಸಲ್ಲಿಕೆ ಮಾಡಿದ್ದರು.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:53 pm, Fri, 21 April 23