ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿಎಂ ಬೊಮ್ಮಾಯಿ
ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ನವದೆಹಲಿ: ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸುಮಾರು 2 ಗಂಟೆ ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಪಟ್ಟಿ ಬಿಡುಗಡೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನಿರ್ಧರಿಸುತ್ತಾರೆ ಎಂದು ಹೇಳಿದರು.
170ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಸಭೆಯಲ್ಲಿ ಅಭ್ಯರ್ಥಿಗಳ ಕುರಿತು ವಿವರವಾದ ಚರ್ಚೆ ನಡೆಸಿದ್ದೇವೆ. ರಾಷ್ಡ್ರೀಯ ಅಧ್ಯಕ್ಷರ ಒಪ್ಪಿಗೆ ಪಡೆದು ನಾಳೆ ಮೊದಲ ಪಟ್ಟಿ ಪ್ರಕಟಿಸುತ್ತೇವೆ. ದೊಡ್ಡ ಸಂಖ್ಯೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಸುಮಾರು 170ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿಗಳಾದ ಶ್ರೀ @narendramodi ಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರ ನೇತೃತ್ವದಲ್ಲಿ ಇಂದು ನವದೆಹಲಿಯ @BJP4India ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರೀಯ ಚುನಾವಣಾ ಸಮಿತಿ ಸಭೆ.#BJPYeBharavase pic.twitter.com/Cqgiye7h45
— Basavaraj S Bommai (@BSBommai) April 9, 2023
ಸುಮಾರು 2 ಗಂಟೆ ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಬಿಜೆಪಿ ಕಚೇರಿಯಿಂದ ತೆರಳಿದ ರಾಜನಾಥ್ ಸಿಂಗ್, ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ್ ಜೋಶಿ, ಸಿಎಂ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು, ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಧಾನ್ ಭಾಗಿಯಾಗಿದ್ದರು.
ಇದನ್ನೂ ಓದಿ: ಅಭ್ಯರ್ಥಿಗಳಿಲ್ಲದ ಕಾಂಗ್ರೆಸ್, 2ನೇ ಪಟ್ಟಿ ಸಿದ್ಧತೆ ವೇಳೆ ಬಿಜೆಪಿಯವರನ್ನು ಸಂಪರ್ಕಿಸಿದ್ದ ಡಿಕೆಶಿ; ಸಿಎಂ ಬೊಮ್ಮಾಯಿ
ಟಿಕೆಟ್ಗಾಗಿ ಪೈಪೋಟಿ ಸಾಮಾನ್ಯ
ಏಪ್ರಿಲ್ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಇತ್ತೀಚೆಗೆ ಸಿಎಂ ಬೊಮ್ಮಾಯಿ ಹೇಳಿದ್ದರು. ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. ಅಂತಿಮ ಪಟ್ಟಿ ಸಿದ್ದಪಡಿಸಲಾಗುತ್ತಿದೆ. ಬಿಜೆಪಿ ಗೆಲ್ಲುವ ಪಕ್ಷ, ಹೀಗಾಗಿ ಟಿಕೆಟ್ಗಾಗಿ ಪೈಪೋಟಿ ಸಾಮಾನ್ಯ ಎಂದಿದ್ದರು.
ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 11:16 pm, Sun, 9 April 23