Karnataka Assembly Elections 2023: ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ನಾಯಕರ ಅಬ್ಬರದ ಪ್ರಚಾರ: ಇಂದು ಯಾರು ಎಲ್ಲೆಲ್ಲಿ ಮತಬೇಟೆ? ಇಲ್ಲಿದೆ ಮಾಹಿತಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಯಾವ ಯಾವ ನಾಯಕರು ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೆಂಬ ಮಾಹಿತಿ ಇಲ್ಲಿದೆ.

Karnataka Assembly Elections 2023: ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ನಾಯಕರ ಅಬ್ಬರದ ಪ್ರಚಾರ: ಇಂದು ಯಾರು ಎಲ್ಲೆಲ್ಲಿ ಮತಬೇಟೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:May 04, 2023 | 9:38 AM

ರಾಜ್ಯದ ಭವಿಷ್ಯ ನಿರ್ಧಾರ ಆಗೋಕೆ ಇನ್ನೂ ಆರು ದಿನಗಳು ಮಾತ್ರ ಬಾಕಿ ಇದೆ(Karnataka Assembly Election 2023). ಹೀಗಾಗಿ ಪೈಪೋಟಿಗೆ ಬಿದ್ದವರಂತೆ ನಾಯಕರು ಅಖಾಡಕ್ಕೆ ಇಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಒಂದು ದಿನದ ಬ್ರೇಕ್ ನಲ್ಲಿದ್ದು ಅಮಿತ್ ಶಾ(Amit Shah) ಅಬ್ಬರಿಸಲಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(Priyanka Gandhi) ಇಂದು ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್‌ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಹಾಗೂ ರಾಯಚೂರು ಜಿಲ್ಲೆಯಲ್ಲಿ ನಟ ಸುದೀಪ್ ರೋಡ್​ ಶೋ ನಡೆಸಲಿದ್ದಾರೆ. ಯಾವ ಯಾವ ನಾಯಕರು ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೆಂಬ ಮಾಹಿತಿ ಇಲ್ಲಿದೆ.

ಕಲಬುರಗಿಗೆ ಶಾ ಎಂಟ್ರಿ

ಕಲಬುರಗಿಗೆ ಇಂದು ಚುನಾವಣೆ ಚಾಣಕ್ಯ ಅಮಿತ್ ಶಾ ಎಂಟ್ರಿ ನೀಡುತ್ತಿದ್ದು ಜೇವರ್ಗಿ ಮತ್ತು ಅಫಜಲಪುರದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ ನಾಲ್ಕ ಗಂಟೆಗೆ ಜೇವರ್ಗಿಯಲ್ಲಿ ಸಾರ್ವಜನಿಕ ಸಭೆ ನಡೆಸಿ ಸಂಜೆ 5.30 ಕ್ಕೆ ಅಫಜಲಪುರದಲ್ಲಿ ಸಭೆ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ‌ ಮಾಡಲಿದ್ದಾರೆ. ಬಳಿಕ ರಾತ್ರಿ ಕಲಬುರಗಿ ನಗರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಇಂದು ಕನಕಪುರ ಕ್ಷೇತ್ರದಲ್ಲಿ ನಿಗದಿಯಾಗಿದ್ದ ಕೇಂದ್ರ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರ ಮುಂದೂಡಿಕೆಯಾಗಿದೆ. ಮೇ 8ರಂದು ಕನಕಪುರದಲ್ಲಿ ಅಮಿತ್ ಶಾ ಪ್ರಚಾರ ಸಾಧ್ಯತೆ ಇದೆ.

ರಾಯಚೂರು ಜಿಲ್ಲೆಯಲ್ಲಿ ನಟ ಸುದೀಪ್ ರೋಡ್​ ಶೋ

ದೇವದುರ್ಗ, ಲಿಂಗಸುಗೂರು, ಮಾನ್ವಿ, ಮಸ್ಕಿ ಕ್ಷೇತ್ರ ಸೇರಿದಂತೆ 4 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಸುದೀಪ್ ಪ್ರಚಾರ ಮಾಡಲಿದ್ದಾರೆ. ಲಿಂಗಸುಗೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್, ದೇವದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ್​​, ಮಾನ್ವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವಿ.ನಾಯಕ್, ಮಸ್ಕಿ ಅಭ್ಯರ್ಥಿ ಪ್ರತಾಪ್​​ಗೌಡ ಪರ ಪ್ರಚಾರ ಮಾಡಲಿದ್ದಾರೆ.

ಹಲವು ಜಿಲ್ಲೆಗಳಲ್ಲಿ ಯಡಿಯೂರಪ್ಪ ಮತಬೇಟೆ

ಇಂದು ಹಲವು ಜಿಲ್ಲೆಗಳಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತಬೇಟೆ ಮಾಡಲಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು, ಮಂಡ್ಯ ಜಿಲ್ಲೆ ಕೆ.ಆರ್​.ಪೇಟೆ ಕ್ಷೇತ್ರ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಬಿಎಸ್​ ಯಡಿಯೂರಪ್ಪ ಮತಯಾಚಿಸಲಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ

ಶಿಗ್ಗಾಂವಿಯಲ್ಲಿ ಕಾರ್ಯಕರ್ತರ ಜೊತೆ ಸಭೆ ನಡೆಸಲಿರುವ ಬೊಮ್ಮಾಯಿ, ಸಭೆ ಬಳಿಕ ಶಿಗ್ಗಾಂವಿ ಕ್ಷೇತ್ರದ ಹಲವು ಹಳ್ಳಿಗಳಿಗೆ ತೆರಳಿ ಮತಯಾಚಿಸಲಿದ್ದಾರೆ. ತೆಗ್ಗಿಹಳ್ಳಿ, ಕುರುಬರ ಮಲ್ಲೂರ, ಹುರುಳಿಕುಪ್ಪಿ, ತೊಂಡೂರ, ಕುಣಿಮೆಳ್ಳಳ್ಳಿ, ತವರು ಮೆಳ್ಳಳ್ಳಿ, ಕುಂದೂರು, ಗುಡ್ಡದ ಚೆನ್ನಾಪುರ ಗ್ರಾಮದಲ್ಲಿ ಪ್ರಚಾರ ನಡೆಸಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಪರ ಪ್ರಹ್ಲಾದ್ ಜೋಶಿ ಮತ ಕೇಳಲಿದ್ದಾರೆ.

ಇದನ್ನೂ ಓದಿ: Karnataka Assembly Elections 2023: ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದಿಂದ ದೂರ ಉಳಿದ ಪರಭಾಷೆ ಸ್ಟಾರ್​ಗಳು; ಕಾರಣ ಏನು?

ಬೆಳಗಾವಿ ಜಿಲ್ಲೆಯಲ್ಲಿ ಇಂದು ಪ್ರಚಾರಕ್ಕೆ ಮಹಾರಾಷ್ಟ್ರ ನಾಯಕರ ದಂಡು

ಮರಾಠಿಗರ ಪ್ರದೇಶದಲ್ಲಿ ಮಹಾರಾಷ್ಟ್ರ ಬಿಜೆಪಿ, ‘ಕೈ’ ನಾಯಕರು ಪ್ರಚಾರ ನಡೆಸಲಿದ್ದಾರೆ. ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್‌ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗಾವಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ದೇವೇಂದ್ರ ಫಡ್ನವಿಸ್ ಪ್ರಚಾರ ನಡೆಸಲಿದ್ದಾರೆ. ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ್, ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ್ ಪಾಟೀಲ್, ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗೇಶ್ ಮನ್ನೋಳಕರ್, ಯಮಕನಮರಡಿ ಅಭ್ಯರ್ಥಿ ಬಸವರಾಜ ಹುಂದ್ರಿ ಪರ ಫಡ್ನವಿಸ್ ಪ್ರಚಾರ ನಡೆಸಲಿದ್ದಾರೆ. ಬಳಿಕ ಸಂಜೆ 6.45ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ. ಇನ್ನು ನಿಪ್ಪಾಣಿಯಲ್ಲಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಪರ ನಿತಿನ್ ಗಡ್ಕರಿ ಪ್ರಚಾರ ನಡೆಸಲಿದ್ದು ಸಂಜೆ 4ಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪರ ಅಶೋಕ್ ಚೌಹಾಣ್‌ ಪ್ರಚಾರ ಮಾಡಲಿದ್ದಾರೆ.

ಹಾವೇರಿ ಹಾಗೂ ಕೊಪ್ಪಳದಲ್ಲಿ ಧೂಳೆಬ್ಬಿಸಿರುವ ಪ್ರಿಯಾಂಕಾ ಗಾಂಧಿ

ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಪ್ರಿಯಾಂಕಾ ಪ್ರಚಾರ ನಡೆಸಲಿದ್ದಾರೆ. ಕನಕಗಿರಿಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿ ಬಳಿಕ ಮಧ್ಯಾಹ್ನ 1ಕ್ಕೆ ಕನಕಗಿರಿಯಿಂದ ಹಿರೇಕೆರೂರಿಗೆ ಪ್ರಯಾಣಿಸಿ ಹಿರೇಕೆರೂರಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ನಂತರ ಹುಬ್ಬಳ್ಳಿಗೆ ತೆರಳಲಿದ್ದಾರೆ.

ಯಾದಗಿರಿ ಜಿಲ್ಲೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ

ರಾಜಕೀಯ ಕರ್ಮಭೂಮಿ ಯಾದಗಿರಿಗೆ ಖರ್ಗೆ ಆಗಮಿಸಲಿದ್ದು ಯಾದಗಿರಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಳಿಗ್ಗೆ 10:30 ಕ್ಕೆ ಸುರಪುರ ನಗರದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಸುರಪುರ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಪರ ಮತಬೇಟೆಯಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶಹಾಪುರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಶಹಾಪುರ ಕಾಂಗ್ರೆಸ್ ಅಭ್ಯರ್ಥಿ ಶರಣಬಸಪ್ಪ ದರ್ಶನಾಪುರ ಪರ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಯಾದಗಿರಿ ನಗರದಲ್ಲಿ ಸಮಾವೇಶದಲ್ಲಿ ಭಾಗಿಯಾಗಿ ಯಾದಗಿರಿ ‘ಕೈ’ ಹುರಿಯಾಳು ಚೆನ್ನಾರೆಡ್ಡಿ ತುನ್ನೂರು ಪರ ಮತಶಿಕಾರಿ ಮಾಡಲಿದ್ದಾರೆ. ನಂತರ 5:30 ಗಂಟೆಗೆ ಗುರಮಠಕಲ್ ಮತಕ್ಷೇತ್ರದ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಗುರುಮಠಕಲ್ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಪರ ಮತಭೇಟೆ ಮಾಡಲಿದ್ದಾರೆ.

ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರ ಹಲವು ಚಿತ್ರನಟರಿಂದ ಪ್ರಚಾರ

ಇಂದಿನಿಂದ ಎರಡು ದಿನ ವರುಣದಲ್ಲಿ ಸಿದ್ದರಾಮಯ್ಯ ಮತಬೇಟೆ ನಡೆಸಲಿದ್ದಾರೆ. ಮೈಸೂರಿನಲ್ಲಿ ವಾಸ್ತವ್ಯ ಹೂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು, ನಾಳೆ ವರುಣ ಕ್ಷೇತ್ರದಲ್ಲಿ ಮತಯಾಚನೆ ಮಾಡಲಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಪರ ಹಲವು ಚಿತ್ರನಟರಿಂದಲೂ ಪ್ರಚಾರ ನಡೆಯಲಿದೆ. ಸಿದ್ದರಾಮಯ್ಯ ಪರ ಮಾಜಿ ಸಂಸದೆ, ನಟಿ ರಮ್ಯಾ, ನಟ ಶಿವರಾಜ್​ಕುಮಾರ್​​, ದುನಿಯಾ ವಿಜಯ್​, ಸಾಧುಕೋಕಿಲ, ಮಾಜಿ ಶಾಸಕಿ, ನಟಿ ಉಮಾಶ್ರೀ ಮತಯಾಚನೆ ಮಾಡಲಿದ್ದಾರೆ.

ಕೋಟೆನಾಡು ಚಿತ್ರದುರ್ಗದಲ್ಲಿಂದು ಹೆಚ್.ಡಿ.ಕುಮಾರಸ್ವಾಮಿ ಪ್ರಚಾರ

ಹೊಸದುರ್ಗ, ಹಿರಿಯೂರು ಅಭ್ಯರ್ಥಿಗಳ ಪರ ಹೆಚ್​ಡಿ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಹೊಸದುರ್ಗದಲ್ಲಿ ಜೆಡಿಎಸ್ ಪ್ರಚಾರ ಸಭೆ ನಡೆಯಲಿದ್ದು ಜೆಡಿಎಸ್ ಅಭ್ಯರ್ಥಿ ತಿಪ್ಪೇಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ. ಮಧ್ಯಾಹ್ನ 2ಕ್ಕೆ ಹಿರಿಯೂರಲ್ಲಿ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ಪರ ಪ್ರಚಾರ ಮಾಡಲಿದ್ದಾರೆ.  ಹಾಗೂ ಪಾವಗಡ, ಶಿರಾ, ಕೊರಟಗೆರೆ ಕ್ಷೇತ್ರದಲ್ಲೂ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಇನ್ನು ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮಿಂಚಿನ ಸಂಚಾರ ನಡೆಸಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:40 am, Thu, 4 May 23

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ