AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಡ್ಯಾಮ್​ ಒಡೆದು ಹೋಗಿದೆ, ಡ್ಯಾಮ್​ನಲ್ಲಿ ನೀರು ನಿಲ್ಲಲ್ಲ: ಡಿಕೆ ಶಿವಕುಮಾರ್​ ಕಿಡಿ

ಬಿಜೆಪಿ ಕೆರೆಯಲ್ಲ, ಡ್ಯಾಮ್ ಒಡೆದು ಹೋಗಿದೆ, ನೀರು ನಿಲ್ಲಿಸೋಕೆ ಆಗಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದರೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಡ್ಯಾಮ್​ ಒಡೆದು ಹೋಗಿದೆ, ಡ್ಯಾಮ್​ನಲ್ಲಿ ನೀರು ನಿಲ್ಲಲ್ಲ: ಡಿಕೆ ಶಿವಕುಮಾರ್​ ಕಿಡಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಗಂಗಾಧರ​ ಬ. ಸಾಬೋಜಿ
|

Updated on: Apr 22, 2023 | 2:55 PM

Share

ಮಂಗಳೂರು: ಬಿಜೆಪಿ ಡ್ಯಾಮ್​ ಒಡೆದು ಹೋಗಿದೆ, ಡ್ಯಾಮ್​ನಲ್ಲಿ ನೀರು ನಿಲ್ಲಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar)​ ಕಿಡಿಕಾರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಪಟ್ಟಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಕೆರೆಯಲ್ಲ, ಡ್ಯಾಮ್ ಒಡೆದು ಹೋಗಿದೆ, ನೀರು ನಿಲ್ಲಿಸೋಕೆ ಆಗಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದರೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ. ಪ್ರಬುದ್ಧ ಮತದಾರರ ತೀರ್ಪು ಕಾಂಗ್ರೆಸ್​ ಪಕ್ಷಕ್ಕೆ ಅಧಿಕಾರ ಕೊಡುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 140 ಸೀಟ್​ ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು. 30 ವರ್ಷಗಳಿಂದ ಪಕ್ಷ ಕಟ್ಟಿದ್ದ ಜಗದೀಶ್​ ಶೆಟ್ಟರ್ ಅವರು ಬಿಜೆಪಿ ಬಿಟ್ಟು ಬಂದಿದ್ದಾರೆ. ಲಕ್ಷ್ಮಣ ಸವದಿ, ಪುಟ್ಟಣ್ಣ ಸೇರಿ ಅನೇಕ ನಾಯಕರು ಕಾಂಗ್ರೆಸ್​ಗೆ ಬಂದಿದ್ದಾರೆ. ಡಜನ್​ಗಟ್ಟಲೇ ಹಾಲಿ ಶಾಸಕರು ಕಾಂಗ್ರೆಸ್ ಬರಲು ರೆಡಿಯಾಗಿದ್ದರು. ಆದರೆ ನಮ್ಮಲ್ಲಿ ಜಾಗ ಇರಲಿಲ್ಲ ಎಂದರು.

ಬಿಜೆಪಿ ಒಡೆದ ಮನೆ, ಒಡೆದ ಪಕ್ಷ

ನಾವು ಅಧಿಕಾರಕ್ಕೆ ಬರುತ್ತೇವೆ. ಭಿನ್ನಮತೀಯರನ್ನ ವಾಪಾಸ್ ಸೇರಿಸಿಕೊಳ್ಳುತ್ತೇವೆ. ಬಿಜೆಪಿ ಒಡೆದ ಮನೆ, ಒಡೆದ ಪಕ್ಷ. ನಾವು ಜನರ ಸೇವೆಗೆ ಸಿದ್ದ, ಅವರು ಏನೇ ಪ್ರಯತ್ನ ಪಟ್ಟರೂ ನಾವು ಅಧಿಕಾರಕ್ಕೆ ಬರುತ್ತೇವೆ. ಶೆಟ್ಟರ್ ಸೋಲಿಸಲು ಬಿಜೆಪಿ ಪ್ರಯತ್ನ ಪಡುತ್ತೆ. ಕಾಂಗ್ರೆಸ್ ಪಕ್ಷದ ಬದ್ದತೆ, ಜನರು ಬದಲಾವಣೆ ‌ಬಯಸಿದ್ದಾರೆ. ಅವರ ಬಿಜೆಪಿ ಪಕ್ಷದವರೇ ಪಕ್ಷ ಬಿಡಲು ಮುಂದಾಗಿದ್ದಾರೆ. ಲಿಂಗಾಯತ ಸಮಾಜ ಅವರ ಅರ್ಹತೆ, ಜನಸಂಖ್ಯೆಗೆ ತಕ್ಕಂತೆ ರಿಸರ್ವೇಷನ್ ಕೊಡಿ ಅಂತ ಕೇಳಿದೆ. ಸರ್ಕಾರಕ್ಕೆ ಧಿಕ್ಕಾರ ಹೇಳಿ ಪ್ರತಿಭಟನೆ ಕೂಡ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರ: ಹೈಕೋರ್ಟ್​ ಮೆಟ್ಟಿಲೇರಲು ಸಜ್ಜಾದ ಕಾಂಗ್ರೆಸ್​ ಅಭ್ಯರ್ಥಿ

ಬಿಜೆಪಿ‌ ಕೊಟ್ಟ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. ಜನ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಪ್ರತಿಯೊಂದು ಬೂತ್ ಮುಂದೆ ಗ್ಯಾಸ್ ಸಿಲಿಂಡರ್ ಇಡಬೇಕು. ಬಂದ ಮತದಾರರೆಲ್ಲರೂ ಅದಕ್ಕೆ ಹೂವಿನ ಹಾರ ಹಾಕಿ ನಮಸ್ಕಾರ ಮಾಡಿ ಎಂದು ಡಿ.ಕೆ.ಶಿವಕುಮಾರ್​ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಗರ್ಭಗುಡಿಯಲ್ಲಿ ಎಂಥ ಹುಳುಕು

ದಕ್ಷಿಣ ಕನ್ನಡ ಜಿಲ್ಲೆಯವರು ಸಂಭಾವಿತರು, ಸಚ್ಚಾರಿತ್ರ್ಯವಂತರು ಅಂತಾರೆ. ಆದರೆ ಇಲ್ಲಿನ ಕೆಲವು ಶಾಸಕರು ತಮ್ಮ ಚಿತ್ರ ತೋರಿಸಬೇಡಿ ಎಂದು ತಡೆಯಾಜ್ಞೆ ತಂದಿದ್ದಾರೆ. ಇದರಿಂದ ಬಿಜೆಪಿ ಗರ್ಭಗುಡಿಯಲ್ಲಿ ಎಂಥ ಹುಳುಕು ಇದೆಯೆಂದು ತಿಳಿಯುತ್ತಿದೆ. ಬಾಂಬೆ ಬಾಯ್ಸ್ ಸಿಡಿ ವಿಚಾರದಲ್ಲಿ ಸ್ಟೇ ತಂದಿರೋದು ಗೊತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಬಿಜೆಪಿಯವರು ಕೋರ್ಟ್ ಸ್ಟೇ ತಂದಿದ್ದು ಯಾಕೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯರನ್ನ ವರುಣಾದಲ್ಲಿ ಮುಗಿಸಲು ಕಾಂಗ್ರೆಸ್​ನವರು ಹುನ್ನಾರ ಮಾಡಿದ್ದಾರೆಂದು ಜಗತ್ತಿಗೆ ಗೊತ್ತಿದೆ: ಸಿಎಂ ಬೊಮ್ಮಾಯಿ

ನಳಿನ್​ ವಿರುದ್ಧ ಶಿವಕುಮಾರ್​ ಕಿಡಿ 

ಇವರ ಹುಳುಕು ಈಗ ಹೊರಗೆ ಬರುತ್ತಿದೆ. ಜನ ಗಮನಿಸುತ್ತಾರೆ. ನಳಿನ್ ಬಗ್ಗೆ ಬೇರೇನು ಹೇಳಲ್ಲ, ಹತ್ತು ಲಕ್ಷ ಕೋಟಿ ಹೂಡಿಕೆ ಮಾಡಿದ್ದೇವೆಂದು ಹೇಳುತ್ತಾರೆ. ಕರಾವಳಿಯಲ್ಲಿ ಕನಿಷ್ಠ 5 ಸಾವಿರ ಬಂಡವಾಳ ಹೂಡಿಕೆ ಮಾಡಿಲ್ಲ ಏಕೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಪ್ರತ್ಯೇಕ ಪಾಲಿಸಿ ಮಾಡುತ್ತೇವೆ. ಇಲ್ಲಿನ ಜನರು ದುಬೈ, ಮುಂಬೈಗೆ ಹೋಗುವ ಸ್ಥಿತಿ ಬರಬಾರದು. ಕೆಲವರು ಲಂಚಕ್ಕೆ ಹೋದಲ್ಲಿ, ಕೆಲವರು ಮಂಚಕ್ಕೆ ಹೋಗುವ ಸ್ಥಿತಿ ಬಿಜೆಪಿಗೆ ಬಂದಿದೆ ಎಂದು ವಾಗ್ದಾಳಿ ಮಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್