ಏ.​ 9ರಂದು ಮೋದಿ ರಾಜ್ಯಕ್ಕೆ ಆಗಮಿಸುವ ದಿನದಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕಾಂಗ್ರೆಸ್​ನವರು​ ಕಳೆದ ಬಾರಿಗಿಂತ ಹೀನಾಯವಾಗಿ ಸೋಲುತ್ತಾರೆ. ಕಾಂಗ್ರೆಸ್​​ಗೆ ಇನ್ನೂ 60 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ನವರು ನಮ್ಮವರನ್ನು ಸಂಪರ್ಕ ಮಾಡಿದ್ದಾರೆ. 2ನೇ ಪಟ್ಟಿ ಸಿದ್ಧತೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಪರ್ಕಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಏ.​ 9ರಂದು ಮೋದಿ ರಾಜ್ಯಕ್ಕೆ ಆಗಮಿಸುವ ದಿನದಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
ವಿವೇಕ ಬಿರಾದಾರ
|

Updated on:Apr 08, 2023 | 10:15 AM

ಶಿವಮೊಗ್ಗ: ಏಪ್ರಿಲ್​ 9ರಂದು ಬಿಜೆಪಿ (BJP) ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್​​​​ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ (Delhi) ಪಟ್ಟಿ ಕಳುಹಿಸಲಾಗಿದೆ. 7-8 ರಂದು ಸಭೆ ಸೇರಿ ಅಂತಿಮ ಪಟ್ಟಿ ಸಿದ್ದಪಡಿಸುತ್ತೇವೆ. ಬಿಜೆಪಿ ಗೆಲ್ಲುವ ಪಕ್ಷ, ಹೀಗಾಗಿ ಟಿಕೆಟ್​​ಗಾಗಿ ಪೈಪೋಟಿ ಸಾಮಾನ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Basavaraj Bommai) ಹೇಳಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಏಪ್ರಿಲ್​ 9 ರಂದೇ ರಾಜ್ಯಕ್ಕೆ ಆಗಮಿಸಲಿದ್ದು, ಹಾಗೇ ಅಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಕಷ್ಟು ಕುತೂಹಲ ಮೂಡಿಸಿದೆ.”

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಅಥಣಿ ವಿಧಾನಸಭಾ ಕ್ಷೇತ್ರ ಟಿಕೆಟ್​ಗಾಗಿ ಹಾಲಿ ಶಾಸಕ ಮಹೇಶ್​ ಕುಮಟಳ್ಳಿ ಮತ್ತು ವಿಧಾನ್​ ಪರಿಷತ್​ ಸದಸ್ಯ ಲಕ್ಷ್ಮಣ ಸವದಿ ನಡುವೆ ಟಿಕೆಟ್​ ವಿಚಾರವಾಗಿ ನಡೆಯುತ್ತಿರುವ ಪೈಪೋಟಿ ಬಗ್ಗೆ ಮಾತನಾಡಿ ನಾನು ಈಗಾಗಲೇ ಮಹೇಶ್ ಕುಮಟಳ್ಳಿ ಅವರ ಜೊತೆ ಮಾತನಾಡಿದ್ದೇನೆ ಎಂದರು.

ಇದನ್ನೂ ಓದಿ: ಇಂದು ದಿಲ್ಲಿಗೆ ಬೊಮ್ಮಾಯಿ, ಯಡಿಯೂರಪ್ಪ: ABC ಫಾರ್ಮೂಲದೊಂದಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು

2ನೇ ಪಟ್ಟಿ ಸಿದ್ಧತೆ ವೇಳೆ ನಮ್ಮವರನ್ನು ಡಿ.ಕೆ.ಶಿವಕುಮಾರ್ ಸಂಪರ್ಕಿಸಿದ್ದರು

ಕಾಂಗ್ರೆಸ್​ನವರು​ ಕಳೆದ ಬಾರಿಗಿಂತ ಹೀನಾಯವಾಗಿ ಸೋಲುತ್ತಾರೆ. ಕಾಂಗ್ರೆಸ್​​ಗೆ ಇನ್ನೂ 60 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ನವರು ನಮ್ಮವರನ್ನು ಸಂಪರ್ಕ ಮಾಡಿದ್ದಾರೆ. 2ನೇ ಪಟ್ಟಿ ಸಿದ್ಧತೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಪರ್ಕಿಸಿದ್ದರು ಎಂದು ಹೇಳಿದರು.

ನಟ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ಸೂಚಿಸಿರುವ ವಿಚಾರವಾಗಿ ಮಾತನಾಡಿದ ಅವರು ನಾನು ಏನು ಮಾಡಲಿ, ಅದು ಅವರಿಗೆ ಬಿಟ್ಟ ವಿಚಾರ. ಸುದೀಪ್ ಈಗಾಗಲೇ ಈ ಕುರಿತು ಸ್ಪಷ್ಟಪಡಿಸಿದ್ದಾರೆ. ಯಾರು ಕಷ್ಟದಲ್ಲಿ ಸಹಾಯ ಮಾಡಿದ್ದಾರೆ. ಅವರಿಗೆ ಸಹಾಯ ಮಾಡುವುದಾಗಿ ಅವರು ಘೋಷಿಸಿದ್ದಾರೆ ಎಂದು ಸ್ಪಷ್ಟ ಪಡಿಸಿದರು.

ಕೆ.ಎನ್ ರಾಜಣ್ಣ ಕೆಚ್ಚಿ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆಯುತ್ತೇನೆ ಎಂದಿರುವ ವಿಚಾರವಾಗಿ ಮಾತನಾಡಿದ ಅವರು ಎಲ್ಲರೂ ಕರೆಯುತ್ತಾರೆ, ಹೋಗೋದು ಬಿಡೋದು ಅವರಿಗೆ ಬಿಟ್ಟ ವಿಚಾರ. ಅವರೇ ಹೇಳಿದ್ದಾರೆ ನನ್ನ ಕಷ್ಟ ಕಾಲದಲ್ಲಿ ಯಾರೂ ಕೈಹಿಡಿಯಲಿಲ್ಲ, ಬೊಮ್ಮಾಯಿ ಕೈಹಿಡಿದಿದ್ದರು ಸಹಾಯ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.

ಅಥಣಿ ಕ್ಷೇತ್ರಕ್ಕೆ ಮಹೇಶ್ ಕುಮಟಳ್ಳಿ, ನನ್ನ ಹೆಸರು ಶಿಫಾರಸು ಆಗಿದೆ. ವರಿಷ್ಠರು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಒಂದು ಕ್ಷೇತ್ರಕ್ಕೆ 2-3 ಹೆಸರುಗಳನ್ನು ಶಿಫಾರಸು ಮಾಡಿ ಕಳುಹಿಸಿದ್ದಾರೆ. ಅಭ್ಯರ್ಥಿ ಘೋಷಣೆ ಬಳಿಕ‌ ಒಳ್ಳೆ ದಿನ ನೋಡಿ ನಾಮಪತ್ರ ಸಲ್ಲಿಸುತ್ತೇವೆ. ಒಳ್ಳೆಯ ಕಾರ್ಯಕರ್ತನನ್ನು ಕಳೆದುಕೊಳ್ಳುವಂತಹದ್ದು ಆಗಬಾರದು. ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದೇನೆ. ನನಗೆ ಕೊಟ್ಟಿರುವ ಪರಿಷತ್ ಸ್ಥಾನವನ್ನು ಕುಮಟಳ್ಳಿಗೆ ಕೊಡಬಹುದು ಎಂದು ಅಥಣಿಯಲ್ಲಿ MLC ಲಕ್ಷ್ಮಣ ಸವದಿ ಹೇಳಿದ್ದಾರೆ.

ಮತ್ತಷ್ಟು ವಿಧಾನಸಭಾ ಚುನಾವಣೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:52 am, Fri, 7 April 23

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ