ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲ ಗ್ಯಾರಂಟಿಗಳನ್ನು ನಾವು ಈಡೇರಿಸುತ್ತೇವೆ, ರೈತರಿಗೆ ಹೆಚ್ಚಿನ ಅನುದಾನ ಮೀಸಲು: ರಾಹುಲ್ ಗಾಂಧಿ

ಕಳೆದ ಮೂರು ವರ್ಷಗಳಿಂದ ಬಿಜೆಪಿ ಸರ್ಕಾರ ಲೂಟಿ ಮಾಡಿದೆ. ವಾಮಮಾರ್ಗ ಮೂಲಕ ಅಧಿಕಾರಕ್ಕೆ ಬಂದು ಕಳ್ಳತನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲ ಗ್ಯಾರಂಟಿಗಳನ್ನು ನಾವು ಈಡೇರಿಸುತ್ತೇವೆ, ರೈತರಿಗೆ ಹೆಚ್ಚಿನ ಅನುದಾನ ಮೀಸಲು: ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Follow us
ಗಂಗಾಧರ​ ಬ. ಸಾಬೋಜಿ
|

Updated on:May 07, 2023 | 5:34 PM

ಆನೇಕಲ್: ಕಳೆದ ಮೂರು ವರ್ಷಗಳಿಂದ ಬಿಜೆಪಿ ಸರ್ಕಾರ ಲೂಟಿ ಮಾಡಿದೆ. ವಾಮಮಾರ್ಗ ಮೂಲಕ ಅಧಿಕಾರಕ್ಕೆ ಬಂದು ಕಳ್ಳತನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹರಿಹಾಯ್ದಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿಯಲ್ಲೂ ಹಗರಣ ನಡೆದಿದೆ. ಲಂಚ ಪಡೆಯುತ್ತಿದ್ದಾಗ ರೆಡ್​ಹ್ಯಾಂಡ್​ ಆಗಿ ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಯಾವುದೇ ಕ್ರಮ ಕೈಗೊಂಡಿಲ್ಲ. ಡಬಲ್​ ಇಂಜಿನ್​ ಸರ್ಕಾರ ಕೇವಲ ಭ್ರಷ್ಟಾಚಾರದಲ್ಲಿ ತೊಡಗಿದೆ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ದಂಧೆ ನಡೆದಿದೆ ಎಂದು ವಾಗ್ದಾಳಿ ಮಾಡಿದರು.

ಭ್ರಷ್ಟಾಚಾರದ ಬಗ್ಗೆ ಬಿಜೆಪಿಯವರು ತುಟಿ ಬಿಚ್ಚುತ್ತಿಲ್ಲ 

ಮೋದಿ ಬಿಜೆಪಿ ನಾಯಕರ ಹೆಸರು ಹೇಳಿ ಭಾಷಣ ಮಾಡುವುದಿಲ್ಲ. ನಾನು ನಮ್ಮ ನಾಯಕರ ಹೆಸರು ಹೇಳಿ ಭಾಷಣ ಆರಂಭಿಸುತ್ತೇನೆ. ಮೋದಿ ಜೊತೆ ರೋಡ್​ಶೋದಲ್ಲಿ ಸಿಎಂ ಬೊಮ್ಮಾಯಿ ಹಿರಿಯ ನಾಯಕ ಬಿ.ಎಸ್​ ಯಡಿಯೂರಪ್ಪ ಭಾಗಿಯಾಗುತ್ತಿಲ್ಲ. ಬೇರೆ ನಾಯಕರನ್ನು ತಮಗಿಂತಲೂ ಕೀಳು ಎಂದು ಭಾವಿಸುತ್ತಾರೆ.

ಇದನ್ನೂ ಓದಿ: ಯಾರಾದ್ರೂ ಹೆದರಿಸಿದ್ರೆ, ಬೆದರಿಸಿದ್ರೆ ಬಗ್ಗುವ ಮಗ ನಾನಲ್ಲ: ಮಣಿಕಂಠ ರಾಠೋಡ್​ಗೆ ತಿರುಗೇಟು ನೀಡಿದ ಮಲ್ಲಿಕಾರ್ಜುನ ಖರ್ಗೆ

ನಿರುದ್ಯೋಗ, ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿ ತುಟಿ ಬಿಚ್ಚುತ್ತಿಲ್ಲ. ದ್ವೇಷದ ರಾಜಕಾರಣದಿಂದ ಮಣಿಪುರದಲ್ಲಿ ಹಿಂಸಾಚಾರ ನಡೀತಿದೆ. ಕರ್ನಾಟಕದ ಮಹಿಳೆಯರು, ಕಾರ್ಮಿಕರು, ಯುವಕರ ಬಗ್ಗೆ ಮಾತನಾಡಿ. ಭವಿಷ್ಯದಲ್ಲಿ ಏನೂ ಮಾತನಾಡ್ತೀರಿ ಎಂದು ಕೂಡ ಮೋದಿ ಹೇಳುತ್ತಿಲ್ಲ ಎಂದರು.

ಕಾಂಗ್ರೆಸ್ ಗೆಲ್ಲಿಸುವಂತೆ ರಾಹುಲ್ ಗಾಂಧಿ ಮನವಿ 

ಮಹಿಳೆಯರಿಗೆ ನಾವು ಎರಡು ಗ್ಯಾರಂಟಿ ನೀಡುತ್ತೇವೆ. ಗೃಹಲಕ್ಷ್ಮೀ ಯೋಜನೆ ಮೂಲಕ ಗೃಹಿಣಿಗೆ ಮಾಸಿಕ 2 ಸಾವಿರ ನೀಡುತ್ತೇವೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುತ್ತೇವೆ. ಪದವೀಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3 ಸಾವಿರ ಹಣ ಜಮೆ ಮಾಡುತ್ತೇವೆ.

ಇದನ್ನೂ ಓದಿ: ಬಸನಗೌಡ ಪಾಟೀಲ್ ಯತ್ನಾಳ್​ಗೆ ಮತ್ತೊಂದು ನೋಟಿಸ್​: ಸೂಕ್ತ ಕ್ರಮದ ಎಚ್ಚರಿಕೆ

ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ಉಚಿತ ವಿದ್ಯುತ್​ ನೀಡುತ್ತೇವೆ.ರೈತರಿಗೆ ಹೆಚ್ಚಿನ ಅನುದಾನ ಮೀಸಲಿಡುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಎಲ್ಲ ಗ್ಯಾರಂಟಿಗಳನ್ನು ನಾವು ಈಡೇರಿಸುತ್ತೇವೆ. ಮೇ 10ರಂದು ಕಾಂಗ್ರೆಸ್​ಗೆ ವೋಟ್ ಹಾಕಿ ಗೆಲ್ಲಿಸುವಂತೆ ರಾಹುಲ್ ಗಾಂಧಿ ಮನವಿ ಮಾಡಿದರು.

ಭ್ರಷ್ಟ ಸರಕಾರ ಕಿತ್ತೊಗೆಯಬೇಕು: ಡಿ‌.ಕೆ ಶಿವಕುಮಾರ್​  

ಕೆಪಿಸಿಸಿ ಅಧ್ಯಕ್ಷ ಡಿ‌.ಕೆ ಶಿವಕುಮಾರ್​ ಮಾತನಾಡಿ, ಇಂದು ರೋಡ್ ಶೊ ಅಲ್ಲ, ಪಬ್ಲಿಕ್ ಮೀಟಿಂಗ್. ಆದರೂ ನೀವೇಲ್ಲಾ ಕಾದಿರಿ,‌ ಎಲ್ರಿಗೂ ಧನ್ಯವಾದ. ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಮೂರು ಬಾರಿ ಕಾಂಗ್ರೆಸ್​ಗೆ ಶಿವಣ್ಣ ಆರಿಸಿ ಕಳಿಸಿದ್ದೀರಿ. ಭ್ರಷ್ಟ ಸರಕಾರ ಕಿತ್ತೊಗೆಯಬೇಕು ಎಂದು ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Sun, 7 May 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್