AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ರೀತಿಯ ಉಸ್ತುವಾರಿಗಳನ್ನು ನೇಮಕ ಮಾಡಿರುವ ಬಿಜೆಪಿ

ವಿಧಾನಸಭೆ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳ ನಾಯಕರು ಹೇಗಾದರೂ ಮಾಡಿ ಗೆಲುವು ಸಾಧಿಸುವ ದೃಷ್ಟಿಯಿಂದ ಹರಸಾಹಸ ಪಡುತ್ತಿದ್ದಾರೆ. ಅದರಂತೆ ಬಿಜೆಪಿ ಇದೀಗ ಸ್ಥಳೀಯ ಉಸ್ತುವಾರಿ, ಹೊರರಾಜ್ಯದಿಂದ ಬಂದಿರುವ ಉಸ್ತುವಾರಿ ಮತ್ತು ವಿಸ್ತಾರಕ ಎಂದು ಪ್ರತಿ ಕ್ಷೇತ್ರಕ್ಕೆ ಮೂರು ರೀತಿಯ ಉಸ್ತುವಾರಿಗಳ ನೇಮಕ ಮಾಡಿದೆ.

Karnataka Assembly Election: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ರೀತಿಯ ಉಸ್ತುವಾರಿಗಳನ್ನು ನೇಮಕ ಮಾಡಿರುವ ಬಿಜೆಪಿ
ಬಿಜೆಪಿ, ಅಮಿತ್​ ಶಾ
ಕಿರಣ್ ಹನುಮಂತ್​ ಮಾದಾರ್
|

Updated on:Apr 22, 2023 | 10:20 AM

Share

ಬೆಂಗಳೂರು: ವಿಧಾನಸಭೆ ಚುನಾವಣೆ(Karnataka assembly Election)ಗೆ ಇನ್ನು ಕೆಲವು ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳ ನಾಯಕರು ಹೇಗಾದರೂ ಮಾಡಿ ಗೆಲುವು ಸಾಧಿಸುವ ದೃಷ್ಟಿಯಿಂದ ಹರಸಾಹಸ ಪಡುತ್ತಿದ್ದಾರೆ. ಮತದಾರರನ್ನ ಒಲಿಸಿಕೊಳ್ಳಲು ಸ್ಟ್ರಾಟಜಿ ಮಾಡುತ್ತಿದ್ದಾರೆ. ಅದರಂತೆ ಬಿಜೆಪಿ ಇದೀಗ ಸ್ಥಳೀಯ ಉಸ್ತುವಾರಿ, ಹೊರರಾಜ್ಯದಿಂದ ಬಂದಿರುವ ಉಸ್ತುವಾರಿ ಮತ್ತು ವಿಸ್ತಾರಕ ಎಂದು ಪ್ರತಿ ಕ್ಷೇತ್ರಕ್ಕೆ ಮೂರು ರೀತಿಯ ಉಸ್ತುವಾರಿಗಳ ನೇಮಕ ಮಾಡಿದೆ. ಪ್ರತಿ ಕ್ಷೇತ್ರಕ್ಕೆ ಕೂಡ ಹೊರ ರಾಜ್ಯದ ತಲಾ ಒಬ್ಬೊಬ್ಬ ಶಾಸಕ, ಎಂಎಲ್​ಸಿ ಮತ್ತು ರಾಜ್ಯಸಭಾ ಸದಸ್ಯರಿಗೆ ರಾಜ್ಯದ ಚುನಾವಣಾ ಜವಾಬ್ದಾರಿಯನ್ನ ಕೊಡಲಾಗಿದೆ.

ರಾಜ್ಯದ ಉಸ್ತುವಾರಿಗಳ ಜೊತೆ ಸುದೀರ್ಘ ಸಭೆ ನಡೆಸಿರುವ ಅಮಿತ್ ಷಾ

ನಿನ್ನೆ(ಏ.21) ರಾತ್ರಿ ಹೊರ ರಾಜ್ಯದ ಉಸ್ತುವಾರಿಗಳ ಜೊತೆ ಸುದೀರ್ಘ ಸಭೆ ನಡೆಸಿರುವ ಅಮಿತ್ ಷಾ. ಹೊರ ರಾಜ್ಯದ ಉಸ್ತುವಾರಿಗಳಿಗೆ ಬೂತ್ ಮಟ್ಟದ ಜವಾಬ್ದಾರಿ ನೀಡಿದ್ದು, ಬೂತ್ ಲೆವೆಲ್ ಸ್ಟ್ರಾಟಜಿಸ್ಟ್​ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಬೂತ್​ನಲ್ಲಿ‌ ಆಗಬೇಕಿರುವ ಕಾರ್ಯತಂತ್ರ, ಜನರನ್ನು ತಲುಪುವ ರೀತಿ, ಸಣ್ಣ ಸಮುದಾಯದ ಮುಖಂಡರನ್ನ ಸಂಪರ್ಕಿಸುವ ರೀತಿ, ಹೊರ ರಾಜ್ಯದ ಮತದಾರರ ಸಂಪರ್ಕ, ಪೇಜ್ ಪ್ರಮುಖರ ಜೊತೆಗಿನ ಸಮನ್ವಯದ ಬಗ್ಗೆ ನಿನ್ನೆ ಸಭೆಯಲ್ಲಿ ಅಮಿತ್ ಷಾ ನಿರ್ದೇಶನ ನೀಡಿದ್ದಾರೆ. ಅದರಂತೆ ಹೊರ ರಾಜ್ಯದ ಪಕ್ಷದ ಕಾರ್ಯಕರ್ತರು ಕೂಡ ಚುನಾವಣೆ ಮುಗಿಯುವವರೆಗೂ ಮನೆ ಮನೆ ಸಂಪರ್ಕ ಮಾಡುವಂತೆ ನಿಯೋಜನೆ ಮಾಡಲಾಗಿದೆ.

ಹೊರರಾಜ್ಯದ ಚುನಾವಣಾ ಪ್ರಮುಖರ ಸಭೆ ಬಳಿಕ ಪ್ರತ್ಯೇಕ ಸಭೆ ನಡೆಸಿದ ಅಮಿತ್ ಷಾ

ವಿಧಾನಸಭಾ ಚುನಾವಣಾ ಕಾರ್ಯತಂತ್ರ ಹಿನ್ನೆಲೆ ನಿನ್ನೆ(ಏ.21) ತಡರಾತ್ರಿ 2 ಗಂಟೆಯವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಭೆ ನಡೆಸಿದ್ದಾರೆ. ಅಮಿತ್ ಷಾ ವಾಸ್ತವ್ಯ ಹೂಡಿದ್ದ ಖಾಸಗಿ ಹೋಟೆಲ್  ಕೊಠಡಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ., ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮತ್ತು ಸಿಎಂ ಬಸವರಾಜ ಬೊಮ್ಮಾಯಿ‌ ಜೊತೆ ಸಭೆ ನಡೆಸಲಾಗಿದೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:41 am, Sat, 22 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ