V Somanna: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುವಂತೆ ಸಚಿವ ವಿ ಸೋಮಣ್ಣಗೆ ಬಿಜೆಪಿ ಹೈಕಮಾಂಡ್ ಸೂಚನೆ
ಗುಜರಾತ್ ರಾಜ್ಯ ಸಾರ್ವತ್ರಿಕ ಚುನಾವಣೆಗೆ ಪ್ರಯೋಗಿಸಿದ್ದ ಯುವ ಅಸ್ತ್ರ ಯಶಸ್ವಿಯಾದ ಹಿನ್ನೆಲೆ ಕರ್ನಾಟಕದಲ್ಲೂ ಅದೇ ಅಸ್ತ್ರವನ್ನು ಪ್ರಯೋಗಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದಂತಿದೆ. ಹಿರಿಯರಿಗೆ ಚುನಾವಣೆಗೆ ಸ್ಪರ್ಧಿಸದಂತೆ ಸೂಚಿಸಿ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದೆ.
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Elections 2023) ಸಮೀಪಿದಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ಹಿರಿಯ ನಾಯಕರು ಚುನಾವಣಾ ರಾಜಕೀಯಕ್ಕೆ ಗುಡ್ಬೈ ಹೇಳುತ್ತಿದ್ದಾರೆ. ಇತ್ತೀಚೆಗಷ್ಟೇ ಸಚಿವ ಸ್ಥಾನಕ್ಕಾಗಿ ಪಟ್ಟುಹಿಡಿದಿದ್ದ ಕೆಎಸ್ ಈಶ್ವರಪ್ಪ (KS Eshwarappa) ಅವರು ಅಚ್ಚರಿ ಎಂಬಂತೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೊಷಿಸಿದ್ದಾರೆ. ಇದರ ಬೆನ್ನಲ್ಲೇ ಸಚಿವ ವಿ ಸೋಮಣ್ಣ (V Somanna) ಅವರಿಗೆ ಹೈಕಮಾಂಡ್ ಶಾಕ್ ನೀಡಿದೆ. ತನ್ನ ಪುತ್ರ ಅರುಣ್ಗೆ (Arun Somanna) ಟಿಕೆಟ್ ನೀಡಬೇಕು ಎನ್ನುತ್ತಿರುವ ಸೋಮಣ್ಣ ಅವರಿಗೆ ಹೈಕಮಾಂಡ್ ಚುನಾವಣಾ ನಿವೃತ್ತಿ ಘೊಷಿಸುವಂತೆ ಖಡಕ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ.
ವಸತಿ ಸಚಿವರಾಗಿರುವ ವಿ.ಸೋಮಣ್ಣ ಅವರು ತನಗೆ ಹಾಗೂ ತನ್ನ ಮಗ ಅರುಣ್ಗೂ ಟಿಕೆಟ್ ನೀಡುವಂತೆ ಪಟ್ಟುಹಿಡಿದಿದ್ದರು. ಆದರೆ ಇತ್ತೀಚೆಗೆ ಅವರು ದೆಹಲಿಗೆ ಭೇಟಿ ನೀಡಿ ಉನ್ನತ ನಾಯಕರನ್ನು ಭೇಟಿಯಾಗಿದ್ದರು. ಈ ವೇಳೆ ಚುನಾವಣೆಯಲ್ಲಿ ನೀವೇ ಸ್ಪರ್ಧಿಸಿದರೆ ಯಾವುದೇ ತೊಂದರೆ ಇಲ್ಲ. ಪುತ್ರನಿಗೆ ಟಿಕೆಟ್ ಬೇಕಾದರೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಬೇಕು. ಒಂದೇ ಕುಟುಂಬಕ್ಕೆ ಎರಡು ಟಿಕೆಟ್ ಇಲ್ಲ ಎಂದು ಹೈಕಮಾಂಡ್ ಖಡಕ್ ಆಗಿ ಹೇಳಿದೆ ಎನ್ನಲಾಗುತ್ತಿದೆ. ಆದರೆ ಸೋಮಣ್ಣ ಅವರು ಪುತ್ರನಿಗಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದಾರಾ ಅಥವಾ ಅವರೇ ಚುನಾವಣಾಗೆ ಕಣಕ್ಕಿಳಿಯುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.
ಗುಜರಾತ್ ರಾಜ್ಯ ಸಾರ್ವತ್ರಿಕ ಚುನಾವಣೆಗೆ ಪ್ರಯೋಗಿಸಿದ್ದ ಯುವ ಅಸ್ತ್ರ ಯಶಸ್ವಿಯಾದ ಹಿನ್ನೆಲೆ ಕರ್ನಾಟಕದಲ್ಲೂ ಅದೇ ಅಸ್ತ್ರವನ್ನು ಪ್ರಯೋಗಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದಂತಿದೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ ಸೂಚಿಸಿ ಅವರ ಸ್ಥಾನಗಳಿಗೆ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದೆ. ಆದರೆ ಹೊಸ ಮುಖಗಳನ್ನು ಕಣಕ್ಕಿಳಿಸುವ ಪ್ರಯತ್ನ ಎಷ್ಟರ ಮಟ್ಟಿಗೆ ಯಶ್ವಿಯಾಗುತ್ತದೆ ಎಂಬುದನ್ನು ಮೇ 13ರ ವರೆಗೆ ಕಾದುನೋಡಬೇಕಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ