ಬಿಜೆಪಿಯವರೇ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದಿದ್ದಾರೆ: ಜಗದೀಶ್​ ಶೆಟ್ಟರ್​

|

Updated on: Apr 17, 2023 | 7:39 PM

ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಅವಕಾಶವಿತ್ತು. ಆದರೆ ಕೆಲವೊಬ್ಬರಿಗೆ ಬಿಜೆಪಿ ಅಧಿಕಾರಕ್ಕೆ ಬರೋದು ಬೇಡ ಅನಿಸುತ್ತಿದೆ. ಬಿಜೆಪಿಯವರೇ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿಯವರೇ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದಿದ್ದಾರೆ: ಜಗದೀಶ್​ ಶೆಟ್ಟರ್​
ಜಗದೀಶ್​ ಶೆಟ್ಟರ್​
Follow us on

ಹುಬ್ಬಳ್ಳಿ: ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಅವಕಾಶವಿತ್ತು. ಆದರೆ ಕೆಲವೊಬ್ಬರಿಗೆ ಬಿಜೆಪಿ ಅಧಿಕಾರಕ್ಕೆ ಬರೋದು ಬೇಡ ಅನಿಸುತ್ತಿದೆ. ಬಿಜೆಪಿಯವರೇ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar)​ ವಾಗ್ದಾಳಿ ಮಾಡಿದ್ದಾರೆ. ಹಾಗಾಗಿಯೇ ಪ್ರಮುಖ ನಾಯಕರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ವಿರುದ್ಧ 1 ವರ್ಷದಿಂದ ಷಡ್ಯಂತ್ರ ಮಾಡಿಕೊಂಡು ಬಂದಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ​ ಪಕ್ಷ ತೊರೆದಿದ್ದರಿಂದ ಬಿಜೆಪಿಗೆ ಹಾನಿ ಆಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾರಿಂದ ಪ್ಯಾಚ್​ ಅಪ್ ಮಾಡಲಾಗಲ್ಲ ಎಂದು ಕಿಡಿಕಾರಿದರು.

ಬಿಜೆಪಿಯವರು ನನ್ನನ್ನು ನಡೆಸಿಕೊಂಡ ರೀತಿ ಬೇಸರ ತಂದಿದೆ

ಮೊದಲ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲದಿದ್ದಾಗ ವರಿಷ್ಠರಿಗೆ ಕೇಳಿದ್ದೆ. ನಿಮಗೆ ಟಿಕೆಟ್​ ಕೊಡಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಹೇಳಿದ್ದರು. ನೀವೇ ಚುನಾವಣೆಗೆ ಆಸಕ್ತಿಯಿಲ್ಲವೆಂದು ಹೇಳಿಬಿಡಿ ಸಹ ಎಂದು ಹೇಳಿದ್ದರು. ಒಂದು ಪತ್ರ ಕಳುಹಿಸುತ್ತೇವೆಂದು ಸಹಿ ಮಾಡಿ ಕಳಿಸಿ ಎಂದಿದ್ದರು. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಮಾತು ಕೇಳಿ ಆಘಾತವಾಯ್ತು. ಸೌಹಾರ್ದಯುತವಾಗಿ ಕರೆದು ಮಾತಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದ್ದೆ. ಆದರೆ ಬಿಜೆಪಿಯವರು ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸರ ತಂದಿದೆ. ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿತ್ತು, ಹಾಳುಮಾಡಿಕೊಂಡರು ಎಂದರು.

ಇದನ್ನೂ ಓದಿ: ಚುನಾವಣೆ ಅಖಾಡಕ್ಕಿಳಿದ PSI ಅಕ್ರಮ ಪ್ರಮುಖ ಆರೋಪಿ: ಪೊಲೀಸ್​ ಭದ್ರತೆಯಲ್ಲಿಯೇ ಆಗಮಿಸಿ ನಾಮಪತ್ರ ಸಲ್ಲಿಸಿದ ರುದ್ರಗೌಡ ಪಾಟೀಲ್

ಬಿಜೆಪಿಗೆ ರಾಜೀನಾಮೆ ನೀಡಿರುವ ಜಗದೀಶ್ ಶೆಟ್ಟರ್​ ಕಾಂಗ್ರೆಸ್​​ ಸೇರ್ಪಡೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಏನು ಅಸ್ಪೃಷ್ಯ ಪಕ್ಷವೇ, ಕಡೆಗಣನೆಯೊಂದೇ ಬಿಜೆಪಿ ಬಿಡಲು ಕಾರಣ. ನಾನು ಕಾಂಗ್ರೆಸ್​ಗೆ ಬಂದಿರುವುದರಿಂದ ದೊಡ್ದ ಶಕ್ತಿ ಬಂದಿದೆ ಅಂತ ಅವರೇ ಹೇಳುತ್ತಿದ್ದಾರೆ. ಸದ್ಯದ ವಾತಾವರಣ ನೋಡಿದಾಗ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ.

ಪ್ರತಿ ಚುನಾವಣೆಯಲ್ಲಿಯೂ ಪತ್ನಿಯೇ ಪ್ರಚಾರ

ನಾನು ಯಾರನ್ನೂ ಕಡೆಗಣಿಸಿಲ್ಲ. ಹಿಂದೂ,‌ ಮುಸ್ಲಿಂ, ಕ್ರೈಸ್ತ ಸಮುದಾಯ ಎಲ್ಲರನ್ನೂ ಸಮಾನವಾಗಿ ಕಂಡಿದ್ದೇನೆ. ಪತ್ನಿ ಶಿಲ್ಪಾ ಶೆಟ್ಟರ್ ಭಾವುಕ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಪ್ರತಿ ಚುನಾವಣೆಯಲ್ಲಿಯೂ ಪತ್ನಿಯೇ ಪ್ರಚಾರ ಮಾಡುತ್ತಿದ್ದಳು. ಒಂದೇ ಪಕ್ಷದಲ್ಲಿ ಬೆಳದು ಬಂದವರು ಈ ರೀತಿ ಪಕ್ಷ ಬಿಡುವಂತೆ ಆಯ್ತು ಅಂತ ಖೇದ ಇದೆ. ಕಾರ್ಯಕರ್ತರು ಯಾರಿಗೂ ಫೋರ್ಸ್ ಮಾಡುತ್ತಿಲ್ಲ. ಅವರು ಮಾನಸಿಕವಾಗಿ ನಮ್ಮ ಜೊತೆ ಇದಾರೆ ಎಂದು ತಿಳಿಸಿದರು.

ಇದನ್ನೂ ಓದಿ: BJP Candidates List: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ; ಯಾರಿಗೆಲ್ಲ ಟಿಕೆಟ್? ಇಲ್ಲಿದೆ ನೋಡಿ

ಶೆಟ್ಟರ್​ ಒಬ್ಬರೇ ಲಿಂಗಾಯಿತ ನಾಯಕರಾ?

ಶೆಟ್ಟರ್​ ಒಬ್ಬರೇ ಲಿಂಗಾಯಿತ ನಾಯಕರಾ ಎಂಬ ಬಿಜೆಪಿ ನಾಯಕರಿಗರ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್​ ಮೇ 13ಕ್ಕೆ ಫಲಿತಾಂಶ ಬರುತ್ತೆ. ಆವಾಗ ನಾನು ಏನು ಅಂತ ಗೊತ್ತಾಗುತ್ತೆ. ಬಿಜೆಪಿ ಕ್ಷೇತ್ರ ಅನ್ನೋ ರೀತಿಯಲ್ಲಿ ನಾನು ಸಂಘಟಿಸಿದೆ. ಹಲವಾರು ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದೇನೆ. ಇಡೀ ರಾಜ್ಯ ಸುತ್ತು ಹಾಕಿದ್ದೇನೆ. ಅದೇ ಕಾರಣಕ್ಕೆ ನನ್ನನ್ನ ಲಿಂಗಾಯಿತ ಲೀಡರ್ ಅಂತಾರೆ. ಇವರು ಎಷ್ಟರ ಮಟ್ಟಿಗೆ ಗೆಲ್ಲಿಸಿದ್ದಾರೆ. ತಮಗೆ ತಾವೇ ಲಿಂಗಾಯಿತ ಲೀಡರ್ ಅಂದರೆ ಪ್ರಯೋಜನವಿಲ್ಲ. ಬಿಜೆಪಿಯ ಇಂದಿನ‌ ಬೆಳವಣಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರೋದು ಬೇಡ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಅಂತ ಬಿಜೆಪಿಯವರೇ ನಿರ್ಧರಿಸಿದಂತಿದೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:39 pm, Mon, 17 April 23