Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತ ಡ್ಯಾಂ ಒಡೆಯುವ ನಿಮ್ಮ ಹಗಲುಗನಸು ನನಸಾಗದು; ಡಿಕೆ ಶಿವಕುಮಾರ್​ಗೆ ಸಚಿವ ಸಿಸಿ ಪಾಟೀಲ ತಿರಗೇಟು

ಲಿಂಗಾಯತರ ಚಿಂತೆ ನಿಮಗೆ ಬೇಡ ಎಂದು ಕೆಪಿಸಿಸ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ ಸಚಿವ ಸಿಸಿ ಪಾಟೀಲರ ತಿರುಗೇಟು ನೀಡಿದ್ದಾರೆ. ಲಿಂಗಾಯತರ ವಿಚಾರಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ವಿರೋಧಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ನಮ್ಮ ನಾಡಿನಲ್ಲಿ ಲಿಂಗಾಯತರ ಡ್ಯಾಮ್ ಒಡೆಯುವ ನಿಮ್ಮ ಹಗಲು ಕನಸು ಯಾವತ್ತೂ ನನಸಾಗುವುದಿಲ್ಲ ಎಂದು ಹೇಳಿದ್ದಾರೆ.

ಲಿಂಗಾಯತ ಡ್ಯಾಂ ಒಡೆಯುವ ನಿಮ್ಮ ಹಗಲುಗನಸು ನನಸಾಗದು; ಡಿಕೆ ಶಿವಕುಮಾರ್​ಗೆ ಸಚಿವ ಸಿಸಿ ಪಾಟೀಲ ತಿರಗೇಟು
ಸಿಸಿ ಪಾಟೀಲ
Follow us
Ganapathi Sharma
|

Updated on: Apr 21, 2023 | 7:22 PM

ಬೆಂಗಳೂರು: ಲಿಂಗಾಯತರ ಚಿಂತೆ ನಿಮಗೆ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ (DK Shivakumar) ಸಚಿವ ಸಿಸಿ ಪಾಟೀಲರ ತಿರುಗೇಟು ನೀಡಿದ್ದಾರೆ. ಲಿಂಗಾಯತರ ವಿಚಾರಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ವಿರೋಧಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಡಿಕೆ ಶಿವಕುಮಾರ್ ಅವರೇ, ನಮ್ಮ ನಾಡಿನಲ್ಲಿ ಲಿಂಗಾಯತರ ಡ್ಯಾಮ್ ಒಡೆಯುವ ನಿಮ್ಮ ಹಗಲು ಕನಸು ಯಾವತ್ತೂ ನನಸಾಗುವುದಿಲ್ಲ. ಹಿಂದೆ ನಿಮ್ಮ ಸಿದ್ದರಾಮಯ್ಯನವರ ಸರ್ಕಾರವಿದ್ದಾಗಲೂ ಲಿಂಗಾಯತ ಸಮಾಜವನ್ನು ಒಡೆದು ಆಳುವ ಕುತಂತ್ರಕ್ಕೆ ಕೈ ಹಾಕಿ ಚುನಾವಣೆಯಲ್ಲಿ ಕಾಂಗ್ರೆಸ್ ಅಣೆಕಟ್ಟೆಯೇ ಒಡೆದು ಹೋಗಿ ಒಣಗಿತ್ತು ಎಂಬುದನ್ನು ಜನ ಇನ್ನೂ ಮರೆತಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ಸಿನಿಂದ ಮುಂದೆ ಲಿಂಗಾಯತ ಸಮುದಾಯದವರೇ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳುವ ತಾಕತ್ತು ನಿಮಗಿದೆಯೇ? ಹಿಂದೆ ಹಿರಿಯ ಮುತ್ಸದ್ದಿ ವೀರೇಂದ್ರ ಪಾಟೀಲರನ್ನು ಕಾಂಗ್ರೆಸ್ ಹೇಗೆ ಹೀನಾಯವಾಗಿ ನಡೆಸಿಕೊಂಡಿತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ನೀವು ಏನೇ ಮಾಡಿದರೂ ಲಿಂಗಾಯತರ ಅಣೆಕಟ್ಟೆ ಸದಾ ಬಿಜೆಪಿ ಪರ ಸಮೃದ್ಧ ಅಲೆಗಳಿಂದ ತುಂಬಿರುತ್ತದೆ. ಈ ಅಣೆಕಟ್ಟೆಗೆ ಕೈ ಹಾಕುವ ನಿಮ್ಮ ವ್ಯರ್ಥ ಪ್ರಯತ್ನ ಯಾವತ್ತೂ ಯಶಸ್ವಿಯಾಗುವುದಿಲ್ಲ ಎಂಬುದನ್ನು ನೀವು ಮರೆಯಬೇಡಿ ಎಂದು ಸಿಸಿ ಪಾಟೀಲ ಹೇಳಿದ್ದಾರೆ.

ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್, ಡ್ಯಾಂ ಒಡೆದರೆ ಹರಿದು ಹೋಗುವ ನೀರನ್ನು ತಡೆ ಹಿಡಿಯಲಾಗದು. ಮತ್ತೆ ಹೊಸದಾಗಿ ಡ್ಯಾಂ ಕಟ್ಟಬೇಕಷ್ಟೆ. ಡ್ಯಾಂ ಒಡೆದು ಹರಿದುಹೋಗುವ ನೀರು ಸಮುದ್ರ ಸೇರಲೇಬೇಕು ಎಂದು ಹೇಳಿದ್ದರು. ಬಿಜೆಪಿಯ ಪ್ರಮುಖ ಲಿಂಗಾಯತ ನಾಯಕರಾದ ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಇತ್ತೀಚೆಗಷ್ಟೇ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ದೊರೆಯದ ಕಾರಣ ಉಭಯ ನಾಯಕರು ಈ ಕ್ರಮ ಕೈಗೊಂಡಿದ್ದರು. ಇನ್ನೂ ಕೆಲವು ಮಂದಿ ಬಿಜೆಪಿಯ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಸೆಳೆದಿತ್ತು. ಬಿಜೆಪಿಯನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸಲೂ ಕಾಂಗ್ರೆಸ್ ಹಲವಾರು ಟೀಕೆಗಳನ್ನು ಮಾಡಿದೆ.

ಇದನ್ನೂ ಓದಿ: ಲಿಂಗಾಯತ ಡ್ಯಾಂ ಎಷ್ಟು ಗಟ್ಟಿ ಇದೆ ಎಂಬುದು ನಿಮಗೆ ಗೊತ್ತಿಲ್ಲ; ಡಿಕೆ ಶಿವಕುಮಾರ್​ಗೆ ಸಿಎಂ ಬೊಮ್ಮಾಯಿ ತಿರುಗೇಟು

ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಖಂಡಿಸಿದ್ದು, ಡಿಕೆ ಶಿವಕುಮಾರ್ ಅವರೇ, ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂಬ ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ. 2018ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ? ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13ಕ್ಕೆ ಯಾರಯಾರ ಡ್ಯಾಮ್​ನಲ್ಲಿ ಎಷ್ಟು ನೀರಿದೆ ಅಂತ ಗೊತ್ತಾಗುತ್ತದೆ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ