Karnataka Assembly Election 2023 ಕೋಲಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಬಗ್ಗೆ ಶ್ರೀರಾಮುಲು ಮೊದಲ ಪ್ರತಿಕ್ರಿಯೆ

2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿದಿಂದ ಸ್ಪರ್ಧಿಸಿ ಸಿದ್ದರಾಮಯ್ಯ ವಿರುದ್ಧ ಶ್ರಿರಾಮುಲು ಕೇವಲ 1696 ಮತಗಳಿಂದ ಪರಾಭವಗೊಂಡಿದ್ದರು. ಇನ್ನು ಮುಂದಿನ ಚುನಾವಣೆಯಲ್ಲಿ ಸಿದ್ದು ವಿರುದ್ಧ ಕೋಲಾರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಶ್ರೀರಾಮುಲು ಹೇಳಿದ್ದಿಷ್ಟು

Karnataka Assembly Election 2023 ಕೋಲಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಬಗ್ಗೆ  ಶ್ರೀರಾಮುಲು ಮೊದಲ ಪ್ರತಿಕ್ರಿಯೆ
ಶ್ರೀರಾಮುಲು, ಸಿದ್ದರಾಮಯ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 10, 2023 | 5:26 PM

ಬಳ್ಳಾರಿ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಇನ್ನು ಕೋಲಾರದಲ್ಲಿ(Kolar) ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆಗೆ ಸಚಿವ ಶ್ರೀರಾಮುಲು (Sriramulu) ಪರೋಕ್ಷವಾಗಿ ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: Siddaramaiah: ನಾನು ಕೋಲಾರದಿಂದ ಸ್ಪರ್ಧಿಸಲು ಸಿದ್ಧ, ಆದರೆ ಹೈಕಮಾಂಡ್ ತೀರ್ಮಾನಿಸಬೇಕು: ಸಿದ್ಧರಾಮಯ್ಯ

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾರು ವೇಳೆ 2023ರಲ್ಲಿ ನಡೆಯುವ ಚುನಾವಣೆಯಲ್ಲೂ ಸಹ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋಲಾರದಲ್ಲಿ ಸ್ಪರ್ಧೆ ಮಾಡುತ್ತೀರಾ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು, ಸಿದ್ದರಾಮಯ್ಯರಂತೆ ದೊಡ್ಡ ಲೀಡರ್ ನಾನಲ್ಲ. ನಾನು ನನ್ನ ಇತಿಮಿತಿಯಲ್ಲಿ ನಾನು ಯೋಚನೆ ಮಾಡುತ್ತೇನೆ. ನನ್ನ ಇತಿಮಿತಿಯಲ್ಲಿ ಎಲ್ಲಿ ನಿಲ್ಲಬೇಕೋ ಅಲ್ಲಿ ನಿಲ್ಲುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿದ್ದು ವಿರುದ್ಧ ಸ್ಪರ್ಧಿಸಲು ಹಿಂದೇಟು ಹಾಕಿದರು.

ಸಿದ್ದರಾಮಯ್ಯರಂತೆ ದೊಡ್ಡ ಲೀಡರ್ ನಾನಲ್ಲ. ಅವರು ಮಾಸ್​ ಲೀಡರ್. . ಮೊಳಕಾಲ್ಮೂರಿನ ಜನತೆ ನನ್ನನ್ನು 5 ವರ್ಷಕ್ಕೆ ಆಯ್ಕೆ ಮಾಡಿದ್ದಾರೆ. ಬಳ್ಳಾರಿ ಗ್ರಾಮಾಂತರ, ಸಂಡೂರಿನಲ್ಲೂ ನಿಲ್ಲುವಂತೆ ಒತ್ತಾಯ ಇದೆ. ಈ ಬಗ್ಗೆ ಮುಂದೆ ನೋಡೋಣ ಎಂದು ಸಿದ್ದರಾಮಯ್ಯ ಬಗ್ಗೆ ಸಾಫ್ಟ್ ಆಗಿ ಮಾತನಾಡಿದರು.

ರೆಡ್ಡಿ ಪಕ್ಷಕ್ಕೆ ಬಳ್ಳಾರಿ ಕಾರ್ಯಕರ್ತರು ವಲಸೆ ಹೋಗ್ತಿದ್ದಾರೆ ಎನ್ನುವುದಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಗಟ್ಟಿ ಇದ್ದವರು ನಮ್ಮ ಜೊತೆಗೆ ಇರುತ್ತಾರೆ. ಜೋಳ್ಳು ಇದ್ದವರು ಹೋಗುತ್ತಾರೆ. ರೆಡ್ಡಿ ಪಕ್ಷಕ್ಕೆ ಹೋಗುವವರನ್ನು ತಡೆಯೋಕೆ ಅಗುತ್ತಾ?ನಮ್ಮಿಬ್ಬರ ಫಾಲೋವರ್ ಒಬ್ಬರೇ ಇರಬಹುದು. ಅದ್ರೇ ಹೋಗುವವರನ್ನು ತಡೆಯಲು ಆಗುತ್ತಾ? ಯಾರಿಗೂ ಒತ್ತಡ ಮಾಡಲ್ಲ ಇರುವವರು ಇರಲಿ ಹೋಗುವವರು ಹೋಗಲಿ ಎಂದು ಸ್ಪಷ್ಟಪಡಿಸಿದರು.

ಕಳೆದ ಬಾರಿ ಅಂದರೆ 2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಶ್ರೀರಾಮುಲು ಅವರು ಅಖಾಡಕ್ಕಿಳಿದಿದ್ದರು. ಸಿದ್ದರಾಮಯ್ಯ ವಿರುದ್ಧ ಕೇವಲ 1696 ಮತಗಳ ಅಂತರದಿಂದ ಸೋಲು ಕಂಡಿದ್ದರು.

Published On - 4:52 pm, Tue, 10 January 23

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ