ಬಿಜೆಪಿ ನಾಯಕರು ಬೋಗಸ್ ಭರವಸೆಗಳನ್ನು ಕೊಡುತ್ತಾರೆ: ಬಿಜೆಪಿ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ
ಬಿಜೆಪಿ ನಾಯಕರು ಬೋಗಸ್ ಭರವಸೆಗಳನ್ನು ಕೊಡುತ್ತಾರೆ ಎಂದು ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಗದಗ: ಬಿಜೆಪಿ ನಾಯಕರು ಬೋಗಸ್ ಭರವಸೆಗಳನ್ನು ಕೊಡುತ್ತಾರೆ ಎಂದು ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಡಿದರು. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, 2018ರಲ್ಲಿ ಬಿಜೆಪಿಯವರು 600 ಭರವಸೆಗಳನ್ನು ಕೊಟ್ಟಿದ್ದರು. ಕೇವಲ 55 ಭರವಸೆ ಮಾತ್ರ ಈಡೇರಿಸಿದ್ದಾರೆ. ನಾಳೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ನಾವು ಬಿಡುಗಡೆ ಮಾಡುವ ಪ್ರಣಾಳಿಕೆ ಅನುಷ್ಠಾನಕ್ಕೆ ಬರುತ್ತೆ. ಈ ಹಿಂದೆ ನಾವು 165ರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇದೇ ಕಾಂಗ್ರೆಸ್, ಬಿಜೆಪಿ ನಡುವಿನ ವ್ಯತ್ಯಾಸ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.
ಖರ್ಗೆ ಅವರು ಆರೆಸ್ಸೆಸ್ ಹಿನ್ನೆಲೆಯಲ್ಲಿ ಹಾಗೆ ಹೇಳಿದ್ದಾರೆ
ಪ್ರಧಾನಿ ನರೇಂದ್ರ ಮೋದಿಗೆ ಪ್ರಿಯಾಂಕ ಖರ್ಗೆ ನಾಲಾಯಕ ಎಂಬ ಶಬ್ದ ಬಳಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಖರ್ಗೆ ಅವರು ಆರೆಸ್ಸೆಸ್ ಹಿನ್ನೆಲೆಯಲ್ಲಿ ಆ ರೀತಿ ಹೇಳಿದ್ದಾರೆ. ಅದಕ್ಕೆ ವಿಷಾದ ಸಹ ವ್ಯಕ್ತಪಡಿಸಿದ್ದಾರೆ. ಯತ್ನಾಳ ಸಹ ಸೋನಿಯಾ ಗಾಂಧಿಗೆ ವಿಷಕನ್ಯೆ ಎಂದಿದ್ದಾರೆ. ಇದಕ್ಕೇನು ಹೇಳಬೇಕು. ನರೇಂದ್ರ ಮೋದಿ ಇದನ್ನ ಖಂಡಿಸಿದಾರಾ ಎಂದು ಪ್ರಶ್ನಿಸಿದರು. ಬಿಜೆಪಿಯವರಿಗೆ ಯಾವ ಸಂಸ್ಕೃತಿಯೂ ಇಲ್ಲ. ದ್ವೇಷವನ್ನ ಹುಟ್ಟು ಹಾಕೋದಷ್ಟೇ ಅವರು ಕಲಿತಿದ್ದಾರೆ ಎಂದು ಹೇಳಿದರು.
ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದ ಸಿದ್ಧರಾಮಯ್ಯ
ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯವನ್ನು ಹಾಳು ಮಾಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿರುವುದು 40% ಕಮಿಷನ್ ಸರ್ಕಾರ. 40% ಕಮಿಷನ್ ಬಗ್ಗೆ ಮೋದಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ. ಆದರೆ ಈವರೆಗೂ ಪ್ರಧಾನಿ ಮೋದಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಹರಿಹಾಯ್ದರು.
ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ನನ್ನ ಹೆಸರು ಬಳಸಿಕೊಳ್ಳುತ್ತಿದ್ದಾರೆ. ಸುಜಾತಾ ದೊಡ್ಡಮನಿ ಪರವಗಿ ಸರ್ವೆರಿಪೋರ್ಟ್ ಇತ್ತು. ಸಾಮಾಜಿಕ ನ್ಯಾಯದ ಆಧಾರದಲ್ಲಿ ಸುಜಾತಾ ದೊಡ್ಡಮನಿ ಅವರಿಗೆ ಟಿಕೆಟ್ ಸಿಕ್ಕಿದೆ. ಶಿರಹಟ್ಟಿ ಮತಕ್ಷೇತ್ರಕ್ಕೆ ಸಾಕಷ್ಟು ಅನುದಾನ ಕೊಟ್ಟರೂ ಜನರ ವಿಶ್ವಾಸ ಗಳಿಸಲಿಲ್ಲ. ಯಾರೇ ರೆಬೆಲ್ ನಿಂತರೂ ಖಂಡಿಸುತ್ತೇನೆ. ಬೆಂಬಲ ಕೊಡಲ್ಲ ಎಂದರು.
ಇದನ್ನೂ ಓದಿ: Karnataka Assembly Election 2023: ತಾರಿಹಾಳ ಗ್ರಾಮದಲ್ಲಿ ಯುವಕನ ಕೊಲೆ: ನಟ ಕಿಚ್ಚ ಸುದೀಪ್ ರೋಡ್ ಶೋ ರದ್ದು
ಹೆಣ್ಣು ಮಗಳಿಗೆ ಟಿಕೆಟ್ ಕೊಟ್ಟಿದ್ದು ಅಪರಾಧನಾ ಸಿದ್ಧು ಪ್ರಶ್ನೆ
ರಾಮಕೃಷ್ಣ ದೊಡ್ಡಮನಿಯವರನ್ನ ಪಕ್ಷದಿಂದ ಉಚ್ಛಾಟನೆ ಮಾಡಲು ಸೂಚಿಸಿದ್ದೇನೆ. ನೀನು ಸೋಲುತ್ತೀಯಾ ಅಂತಾ ಹೇಳಿದ್ದರೂ ನಿಂತಿದ್ದಾರೆ. ರಾಮಕೃಷ್ಣ ದೊಡ್ಡಮನಿ ಸೋಲಿಸಿ ಅವರ ಡೆಪಾಸಿಟ್ ಜಪ್ತ ಆಗುವಂತೆ ಮಾಡಬೇಕು. ಸುಜಾತಾ ಅವರಿಗೆ ಕೊಡುವ ಪ್ರತಿ ವೋಟ್ ಸಿದ್ದರಾಮಯ್ಯ ಅವರಿಗೆ ಕೊಟ್ಟಂತೆ. ರಾಮಕೃಷ್ಣ ದೊಡ್ಡಮನಿ ಬಿಜೆಪಿ ಏಜೆಂಟ್ ಇದ್ದಂತೆ. ಹೆಣ್ಣು ಮಗಳಿಗೆ ಟಿಕೆಟ್ ಕೊಟ್ಟಿದ್ದು ಅಪರಾಧನಾ ಎಂದು ಪ್ರಶ್ನಿಸಿದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:21 pm, Mon, 1 May 23