‘ನಾನೊಬ್ಬ ಬಜರಂಗಿ’; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರಿಂದ ಪ್ರೊಫೈಲ್ ಪಿಕ್ಚರ್ ಅಭಿಯಾನ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

‘ನಾನೊಬ್ಬ ಬಜರಂಗಿ’; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರಿಂದ ಪ್ರೊಫೈಲ್ ಪಿಕ್ಚರ್ ಅಭಿಯಾನ
ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರಿಂದ ಪ್ರೊಫೈಲ್ ಪಿಕ್ಚರ್ ಅಭಿಯಾನ
Follow us
Ganapathi Sharma
|

Updated on: May 02, 2023 | 5:59 PM

ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ (Bajrang Dal) ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ (BJP) ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಡಾ. ಅಶ್ವಥ್ಥನಾರಾಯಣ, ಸಂಸದ ಪ್ರತಾಪಸಿಂಹ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಇನ್ನಿತರರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾವಣೆ ಮಾಡಿ ‘ನಾನೊಬ್ಬ ಬಜರಂಗಿ’ ಎಂಬ ಚಿತ್ರ ಅಳವಡಿಸಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕೂಡ ಪೋಸ್ಟ್ ಮಾಡಿದ್ದಾರೆ.

ಬಜರಂಗದಳ ನಿಷೇಧಿಸುವ ಪ್ರಶ್ನೆಯೇ ಇಲ್ಲ; ಸಿಎಂ ಬೊಮ್ಮಾಯಿ

ಈ ಮಧ್ಯೆ, ಕಾಂಗ್ರೆಸ್ ಪ್ರಣಾಳಿಕೆ ವಿಚಾರವಾಗಿ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಬಜರಂಗದಳ ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವಂಥ ಸಂಘಟನೆ ಬಜರಂಗದಳ. ಆದರೆ, ಪಿಎಫ್​​ಐ ದೇಶವಿರೋಧಿ ಕೃತ್ಯಗಳನ್ನು ಎಸಗಿದೆ. ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಸಾಕಷ್ಟು ಕೇಸ್​ಗಳು ಅದರ ಮೇಲಿವೆ, ಪುರಾವೆಗಳೂ ಇವೆ. ಅದಕ್ಕೆ ಭಜರಂಗದಳವನ್ನು ಹೊಲಿಸುವುದು ಸರಿಯಲ್ಲ. ಪಿಎಫ್​ಐಯನ್ನು ನಾವು ನಿಷೇಧಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: PM Modi: ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಬಜರಂಗದಳ ನಿಷೇಧ ಪ್ರಸ್ತಾವಕ್ಕೆ ಮೋದಿ ಟಾಂಗ್

ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಟಾಂಗ್ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಕಾಂಗ್ರೆಸ್​​ನ ಈ​ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಿಬರುವುದಿಲ್ಲ ಎಂದು ಹೇಳಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ