ಕರ್ನಾಟಕದಲ್ಲಿ ಅಟಲ್ ಕ್ಯಾಂಟಿನ್ ಜಾರಿಯಾದರೆ ಇಂದಿರಾ ಕ್ಯಾಂಟೀನ್ ಗತಿ ಏನು?

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕರ್ನಾಟಕದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಕ್ಯಾಂಟೀನ್ ಆರಂಭಿಸುವುದಾಗಿ ಹೇಳಿದೆ. ಹೀಗಾದರೆ ಇಂದಿರಾ ಕ್ಯಾಂಟೀನ್ ಭವಿಷ್ಯ ಏನು ಎಂಬುದು ಪ್ರಶ್ನೆಯಾಗಿದೆ.

ಕರ್ನಾಟಕದಲ್ಲಿ ಅಟಲ್ ಕ್ಯಾಂಟಿನ್ ಜಾರಿಯಾದರೆ ಇಂದಿರಾ ಕ್ಯಾಂಟೀನ್ ಗತಿ ಏನು?
ಕರ್ನಾಟಕದಲ್ಲಿ ಅಟಲ್ ಆಹಾರ ಕೇಂದ್ರ ಮತ್ತು ಇಂದಿರಾ ಕ್ಯಾಂಟಿನ್ ಬಗ್ಗೆ ಚರ್ಚೆ
Follow us
|

Updated on:May 02, 2023 | 3:09 PM

ಬೆಂಗಳೂರು: ಕರ್ನಾಟಕದ ಪ್ರತಿ ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‌ನಲ್ಲಿ ಅಟಲ್ ಆಹಾರ ಕೇಂದ್ರ (Atal Food Center) ಸ್ಥಾಪಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ (BJP Manifesto) ಭರವಸೆ ನೀಡಿದ ನಂತರ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್‌ಗಳ ಭವಿಷ್ಯವೇನು ಎಂಬ ಪ್ರಶ್ನೆ ಎದ್ದಿದೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಪೂರ್ವಭಾವಿಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಸೋಮವಾರ ‘ಪ್ರಜಾ ಪ್ರಣಾಳಿಕೆ’ (ನಾಗರಿಕರ ಪ್ರಣಾಳಿಕೆ) ಬಿಡುಗಡೆ ಮಾಡಿದ್ದಾರೆ.

ಬಿಜೆಪಿ ಪ್ರಣಾಳಿಕೆಯಲ್ಲಿ ಇರುವಂತೆ, ಡೆಲಿವರಿ ಬಾಯ್‌ಗಳು, ಕ್ಯಾಬ್‌ಗಳು, ಆಟೋ ಚಾಲಕರು ಮತ್ತು ಅಸಂಘಟಿತ ಕಾರ್ಮಿಕರಿಗೆ ವಿಶೇಷ ಗಮನ ನೀಡುವ ಮೂಲಕ ರಾಜ್ಯದಾದ್ಯಂತ ಕೈಗೆಟುಕುವ, ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ನಾವು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‌ಗಳಲ್ಲಿ ‘ಅಟಲ್ ಆಹಾರ ಕೇಂದ್ರ’ ಸ್ಥಾಪಿಸುವ ಭರವಸೆ ನೀಡಲಾಗಿದೆ.

ಬಿಜೆಪಿ ಪ್ರಣಾಳಿಕೆ ಬಿಡುಗಡೆ ವೇಳೆ ಇಂದಿರಾ ಕ್ಯಾಂಟೀನ್​ನ ಅಳಿವು ಉಳಿವಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೆಪಿ ನಡ್ಡಾ, ಇಂದಿರಾ ಕ್ಯಾಂಟೀನ್ ಯೋಜನೆ ಬಗ್ಗೆ ನನಗೆ ಗೊತ್ತಿಲ್ಲ, ಆದರೆ ಅಟಲ್ ಆಹಾರ ಕೇಂದ್ರ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ನನಗೆ ತಿಳಿದಿದೆ ಎಂದರು.

ಇದನ್ನೂ ಓದಿ: BJP Manifesto: ಉಚಿತ ಗ್ಯಾಸ್, ನಂದಿನಿ ಹಾಲು ಸೇರಿದಂತೆ ಬಿಜೆಪಿ ಪ್ರಜಾ ಪ್ರಣಾಳಿಕೆ ಮುಖ್ಯಾಂಶಗಳು ಇಲ್ಲಿವೆ

ಇತ್ತ, ಅಟಲ್ ಕ್ಯಾಂಟೀನ್ ಬಗ್ಗೆ ಟೀಕಿಸಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಅಧಿಕಾರದ ಅವಧಿಯಲ್ಲಿ ರಾಜ್ಯಾದ್ಯಂತ ಸ್ಥಾಪಿಸಿದ್ದ 600 ಇಂದಿರಾ ಕ್ಯಾಂಟೀನ್‌ಗಳನ್ನು ಸೇಡಿನ ರೀತಿಯಲ್ಲಿ ಸ್ಥಗಿತಗೊಳಿಸಿ ಅಟಲ್‌ ಆಹಾರ ಕೇಂದ್ರ ತೆರೆಯುವುದಾಗಿ ಭರವಸೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಸುಮಾರು 200 ಕಡೆಗಳಲ್ಲಿ 94 ಕೋಟಿ ರೂಪಾಯಿ ಬಂಡವಾಳದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಿತ್ತು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಪ್ರಸ್ತುತ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುತ್ತಿದೆ, ಕ್ಯಾಂಟೀನ್​ ಹೆಸರು ಬದಲಾವಣೆಗೆ ಮುಂದಾಗಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮಾಡಿಕೊಂಡೇ ಬಂದಿದೆ. ಬಡವರ ಹಸಿವಿನ ಬಗ್ಗೆ ಅರಿವಿಲ್ಲದಷ್ಟು ನಿಮ್ಮ ಹೊಟ್ಟೆ ತುಂಬಿದೆಯೇ? ಅಥವಾ ನಿಮ್ಮ ಪಕ್ಷವು ಕೇವಲ ಗಣ್ಯರ ಹಸಿವನ್ನು ಪೂರೈಸುತ್ತದೆಯೇ? ಇಂದಿರಾ ಕ್ಯಾಂಟೀನ್ ಅನ್ನು ನಾಶಪಡಿಸುವ ಯಾವುದೇ ಪ್ರಯತ್ನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದರು.

ತಮಿಳುನಾಡಿನ ‘ಅಮ್ಮ ಕ್ಯಾಂಟೀನ್’ ಮಾದರಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ 2017 ರ ಆಗಸ್ಟ್​ನಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ಪ್ರಾರಂಭಿಸಿತ್ತು. ಇದಕ್ಕಾಗಿ ಸರ್ಕಾರ 94 ಕೋಟಿ ರೂ.ಗಳನ್ನು ಮೀಸಲಿಟ್ಟಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‌ನಲ್ಲಿ ಪ್ರತಿ ಕ್ಯಾಂಟೀನ್ ನಿರ್ಮಿಸಲು ನಾವು 30 ಲಕ್ಷ ರೂ. ಮತ್ತು ಪ್ರತಿ ಅಡುಗೆಮನೆಗೆ 60 ಲಕ್ಷ ರೂ. ವೆಚ್ಚ ಮಾಡಿದ್ದೇವೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದೆ.

ಮಾಹಿತಿಗಳ ಪ್ರಕಾರ, ಅಟಲ್ ಆಹಾರ ಕೇಂದ್ರದ ಪರಿಕಲ್ಪನೆಯೂ ಇಂದಿರಾ ಕ್ಯಾಂಟೀನ್​ನಂತೆಯೇ ಇರಲಿದೆ. ಪ್ರಸ್ತುತ ಇಂದಿರಾ ಕ್ಯಾಂಟೀನ್​ನಲ್ಲಿ 5 ರೂ.ಗೆ ಉಪಾಹಾರ ಮತ್ತು ಎರಡು ಹೊತ್ತು ಊಟಕ್ಕೆ ತಲಾ 10 ರೂ. ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Tue, 2 May 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್