ಬೆಂಗಳೂರು: ಕರ್ನಾಟಕ ವಿಧಾನಸಭೆ ಚುಣಾವಣೆಗೆ (Karnataka Assembly Elections 2023) ಈ ಬಾರಿ ಬಿಜೆಪಿ ಜನರ ಹೆಸರಿನಲ್ಲಿ ‘ಪ್ರಜಾ ಪ್ರಣಾಳಿಕೆ’(BJP Manifesto) ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರು ಇಂದು(ಮೇ 01 ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಹೆಸರಿನಲ್ಲಿ ನೀಡಿರುವ ಭರವಸೆಗಳ ಬಗ್ಗೆ ಸಾಕಷ್ಟು ಟೀಕೆಗಳನ್ನು ಮಾಡಿರುವ ಬಿಜೆಪಿಯು ಇದೀಗ ಮತದಾರರನ್ನು ಓಲೈಸಲು ಭರಪೂರ ಯೋಜನೆಗಳನ್ನು ಘೋಷಿಸಿದೆ.
#WATCH | BJP national president JP Nadda releases party’s vision document/manifesto for Karnataka elections in Bengaluru. pic.twitter.com/qm2wyGdppZ
— ANI (@ANI) May 1, 2023
ಬಿಜೆಪಿ ಈ ಬಾರಿ ತನ್ನ ಪ್ರಣಾಳಿಕೆಯನ್ನು ರಾಜ್ಯದ ಜನತೆಗೆ ಹೊಸ ಭರವಸೆಗಳನ್ನು ನೀಡಿದೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಬಿಪಿಎಲ್ ಕಾರ್ಡ್‌ದಾರರಿಗೆ ಮೂರು ಅಡುಗೆ ಸಿಲಿಂಡರ್ ಗಳು ಹಾಗೂ ಪ್ರತಿನಿತ್ಯ ಅರ್ಧ ಲೀಟರ್ ಹಾಲು ಉಚಿವಾಗಿ ಕೊಡುವ ಘೋಷಣೆ ಮಾಡಿದೆ. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.
ಪ್ರಣಾಳಿಕೆ ಬಿಡುಗಡೆಗೂ ಮುನ್ನ ಮಾತನಾಡಿದ ಸಚಿವ ಡಾ. ಸುಧಾಕರ್ , 179 ಕ್ಷೇತ್ರದಿಂದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. 6 ಲಕ್ಷ ಸಲಹೆ ಬಂದಿದೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧತಾ ಸಭೆಯಲ್ಲಿ ಭಾಗಿಯಾಗಿದ್ದರು. 900 ಸಲಹೆಗಳು ತಜ್ಞರಿಂದ ಬಂದಿದೆ. ಬೇರೆಯವರ ರೀತಿ ನಾವು ಸುಳ್ಳು ಭರವಸೆ ನೀಡೋದಿಲ್ಲ. ನಮ್ಮ ಭರವಸೆ ಮೇಲೆ ಜನರಿಗೆ ನಂಬಿಕೆ ಇದೆ. ಕಾಂಗ್ರೆಸ್ 13 ರಾಜ್ಯಗಳಲ್ಲಿ ಇದೇ ರೀತಿ ಭರವಸೆ ನೀಡಿದ್ರು ಅವರ ಭರವಸೆ ಜನ ನಂಬೋದಿಲ್ಲ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಕೆಲ ದಿನ ಮಹಾರಾಷ್ಟ್ರ ಇಲ್ಲಿ ಯಾವುದೇ ಭರವಸೆ ಈಡೇರಿಸಿಲ್ಲ ಎಂದು ಹೇಳಿದರು.
ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ಸಚಿವ ಡಾ. ಸುಧಾಕರ್ ಸೇರಿದಂತೆ ಪ್ರಮುಖ ನಾಯಕರು ಈ ವೇಳೆ ಉಪಸ್ಥಿತರಿದ್ದರು.
Published On - 11:04 am, Mon, 1 May 23