AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಶಾ ಬೆನ್ನಲ್ಲೇ ಮತ್ತೆ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಕರ್ನಾಟಕ ಪ್ರವಾಸ: ಈ ಬಾರಿ ಹಾಸನ ಟಾರ್ಗೆಟ್

ಇತ್ತೀಚೆಗೆ ಕೊಪ್ಪಳಕ್ಕೆ ಬಂದು ಹೋಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ಈಗ ಮತ್ತೆ ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.

ಮೋದಿ, ಶಾ ಬೆನ್ನಲ್ಲೇ ಮತ್ತೆ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಕರ್ನಾಟಕ ಪ್ರವಾಸ: ಈ ಬಾರಿ ಹಾಸನ ಟಾರ್ಗೆಟ್
ಜೆಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Feb 14, 2023 | 10:03 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಸಮೀಪಿಸುತ್ತಿದ್ದು, ಅಖಾಡ ಸಜ್ಜಾಗಿದೆ .ಹೀಗಾಗೆ ರಾಜ್ಯದಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಎಲೆಕ್ಷನ್‌ ಘೋಷಣೆಗೂ ಮುನ್ನವೇ ಮೂರು ಪಕ್ಷಗಳು ಮತಬೇಟೆ ಆರಂಭಿಸಿವೆ . ಅದ್ರಲ್ಲೂ ಬಿಜೆಪಿ ಹೈಕಮಾಂಡ್​ ನಾಯಕರು ಅಭಿವೃದ್ಧಿ ಕಾರ್ಯಕ್ರಮಗಳ ಜೊತೆ ಮತಬೇಟೆ ಶುರು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ(Jagat Prakash Nadda) ಹೀಗೆ ಒಬ್ಬರ ಬಳಿಕ ಒಬ್ಬರಂತೆ ರಾಜ್ಯಕ್ಕೆ ಪದೆ ಪದೇ ಭೇಟಿ ನೀಡುತ್ತಲೇ ಇದ್ದಾರೆ. ಇತ್ತೀಚೆಗೆ ಕೊಪ್ಪಳಕ್ಕೆ ಬಂದು ಹೋಗಿದ್ದ ನಡ್ಡಾ ಈಗ ಮತ್ತೆ ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬೇಸರಗೊಂಡಿದ್ದ ಬಾಬುರಾವ್ ಚಿಂಚನಸೂರುಗೆ ಮಹತ್ವದ ಭರವಸೆ ನೀಡಿ ಮನವೊಲಿಸಿದ ಬಿಜೆಪಿ ನಾಯಕರು

ಹೌದು… ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಭೇಟಿ ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಫೆಬ್ರವರಿ 20, 21ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಎರಡು ದಿನದಲ್ಲಿ ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲಾ ಪ್ರವಾಸ ಕೈಗೊಂಡು ಸಭೆ, ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ.

ಫೆ.20ರಂದು ಮಧ್ಯಾಹ್ನ ಉಡುಪಿಯ ಬೈಂದೂರಿನಲ್ಲಿ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅಂದು ಸಂಜೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ಅಡಕೆ ಬೆಳೆಗಾರರ ಜತೆ ಸಂವಾದ ನಡೆಸಲಿದ್ದಾರೆ. ನಂತರ ರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಬಳಿಕ ಫೆ.21ರಂದು ಚಿಕ್ಕಮಗಳೂರಿನಲ್ಲಿ ನಡ್ಡಾ ನೇತೃತ್ವದಲ್ಲಿ ಪ್ರಬುದ್ಧರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಹಾಸನ ಜಿಲ್ಲೆ ಬೇಲೂರಿನಲ್ಲಿ ಸಾರ್ವಜನಿಕ ಸಮಾವೇಶಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಮಧ್ಯಾಹ್ನ ಹಾಸನದಲ್ಲೇ ನಡೆಯಲಿರುವ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಹಾಸನದಲ್ಲಿ ಟಿಕೆಟ್ ವಿಚಾರವಾಗಿ ದಳಪತಿಗಳಲ್ಲಿ ತಳಮಳ ಶುರುವಾಗಿದ್ದು, ಇದರ ಮಧ್ಯೆ ನಡ್ಡಾ ಹಾಸನ ಭೇಟಿ ಕುತೂಹಲ ಮೂಡಿಸಿದೆ. ಜೆಡಿಎಸ್​ನ ಭದ್ರಕೋಟೆಯಾಗಿರುವ ಹಾಸನದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಒಂದು ಸ್ಥಾನದಲ್ಲಿ ಗೆದ್ದು ಬೀಗಿತ್ತು. ಇದೀಗ ಹಾಸನ ಜಿಲ್ಲೆಯ ರಾಜಕೀಯ ಚಿತ್ರಣ ಬದಲಾಗಿದ್ದು, ಅದರ ಲಾಭ ಪಡೆಯಲು ಬಿಜೆಪಿ ಕಸರತ್ತು ನಡೆಸಿದೆ. ಇದರ ಮಧ್ಯೆ ನಡ್ಡಾ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.