Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics ಅಮಿತ್ ಶಾ ಬೆನ್ನಲ್ಲೇ ಮತ್ತೆ ಜೆಪಿ ನಡ್ಡಾ ಕರ್ನಾಟಕ ಪ್ರವಾಸ: ಇಲ್ಲಿದೆ ವೇಳಾಪಟ್ಟಿ

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಕೇಂದ್ರ ನಾಯರು ಒಬ್ಬರಿಂದ ಹಿಂದೆ ಒಬ್ಬರಂತೆ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.

Karnataka Politics ಅಮಿತ್ ಶಾ ಬೆನ್ನಲ್ಲೇ ಮತ್ತೆ ಜೆಪಿ ನಡ್ಡಾ ಕರ್ನಾಟಕ ಪ್ರವಾಸ: ಇಲ್ಲಿದೆ ವೇಳಾಪಟ್ಟಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾImage Credit source: PTI
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 03, 2023 | 11:09 PM

ಬೆಂಗಳೂರು: ಗುಜರಾತ್ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023)  ಮೇಲೆ ಕಣ್ಣಿಟ್ಟಿರುವ ಬಿಜೆಪಿ (BJP) ಕೇಂದ್ರ ನಾಯಕರು, ಒಬ್ಬರಿಂದ ಹಿಂದೆ ಒಬ್ಬರಂತೆ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮೊನ್ನೇ ಅಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನ ಕರ್ನಾಟಕ ಪ್ರವಾಸ ಮಾಡಿ ಹಳೇ ಮೈಸೂರು ಭಾಗದ ನಾಯಕರಲ್ಲಿ ಹುಮ್ಮಸ್ಸು ಹೆಚ್ಚಿಸಿ ವಾಪಸ್ ಆಗಿದ್ದರು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda)  ಸರದಿ.

ಇದನ್ನೂ ಓದಿ: BJP National Executive Meeting: ಜ.16, 17ರಂದು BJP ರಾಷ್ಟ್ರೀಯ ಕಾರ್ಯಕಾರಿಣಿ ಸಭೆ, ನಿರ್ಧಾರವಾಗಲಿದೆ ಪಕ್ಷದ ಅಧ್ಯಕ್ಷರ ಭವಿಷ್ಯ

ಹೌದು..ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜನವರಿ 5 ಮತ್ತು 6ರಂದು ಎರಡು ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.5 ರಂದು ಮಧ್ಯಾಹ್ನ ತುಮಕೂರಿನಲ್ಲಿ, ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ.

ಅಂದು ಸಂಜೆ ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಬಳಿಕ ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಶ್ರೀ ಮಾದಾರ ಚೆನ್ನಯ್ಯ ಮಠ, ಸಿರಿಗೆರೆ ಶ್ರೀ ತರಳಬಾಳು ಮಠಕ್ಕೆ ಭೇಟಿಯ ನಂತರ ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್‍ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಹಳೇ ಮೈಸೂರು ಭಾಗದ ಬಿಜೆಪಿ ಮುಖಂಡರ ಸಭೆ ಅಂತ್ಯ: ಜಿಲ್ಲಾವಾರು ಕ್ಷೇತ್ರ ಗೆಲ್ಲಲು ಟಾರ್ಗೆಟ್, JDS ಜೊತೆ ಸಂಪರ್ಕ ಇಟ್ಟುಕೊಳ್ಳಲೇಬೇಡಿ ಎಂದ ಶಾ

ಇನ್ನು ಜ.6ರಂದು ಬೆಳಗ್ಗೆ ಹರಿಹರದ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ಅವರು ತುಮಕೂರು ಜಿಲ್ಲೆಯ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಡ್ಡಾ ಜೊತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಹ ರಾಜ್ಯ ಪ್ರವಾಸ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಒಂದು ದಿನ ಮುಂಚೆ ಅಂದರೆ ನಾಳೆ(ಜನವರಿ 04) ಬೆಂಗಳೂರಿಗೆ ಆಗಮಿಸಲಿದ್ದಾರೆ.

ಕಳೆದ ಡಿಸೆಂಬರ್ 15ರಂದು ಕರ್ನಾಟಕಕ್ಕೆ ಆಗಮಿಸಿದ್ದ ನಡ್ಡಾ, ಕೊಪ್ಪಳದಲ್ಲಿ ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:04 pm, Tue, 3 January 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !