ಕರ್ನಾಟಕದ ನಾಲ್ಕು ದಿಕ್ಕಿನಿಂದ ಬಿಜೆಪಿ ರಥಯಾತ್ರೆ: ರಾಜ್ಯ ಬಿಜೆಪಿ ಹಿರಿಯರ ಸಭೆಯಲ್ಲಿ ತೀರ್ಮಾನ

ಇಂದು (ಜನವರಿ 20) ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ಹಿರಿಯ ಬಿಜೆಪಿ ನಾಯಕರ ಸಭೆ ಅಂತ್ಯವಾಗಿದ್ದು, ಮುಂದಿನ ಚುನಾವಣೆಗೆ ಕಾರ್ಯತಂತ್ರಗಳ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ. ಅಲ್ಲದೇ ರಾಜ್ಯದ ನಾಲ್ಕು ದಿಕ್ಕಿನಿಂದ ಬಿಜೆಪಿ ಯಾತ್ರೆ ಮಾಡಲು ತೀರ್ಮಾನಿಸಲಾಗಿದೆ.

ಕರ್ನಾಟಕದ ನಾಲ್ಕು ದಿಕ್ಕಿನಿಂದ ಬಿಜೆಪಿ ರಥಯಾತ್ರೆ: ರಾಜ್ಯ ಬಿಜೆಪಿ ಹಿರಿಯರ ಸಭೆಯಲ್ಲಿ ತೀರ್ಮಾನ
BJPImage Credit source: mathrubhumi.com
Follow us
ರಮೇಶ್ ಬಿ. ಜವಳಗೇರಾ
|

Updated on: Jan 20, 2023 | 6:49 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ (Karnataka BJP) ಮಹತ್ವದ ಸಭೆ ಅಂತ್ಯವಾಗಿದೆ. ಇಂದು (ಜನವರಿ 20) ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ರಾಜ್ಯ ಹಿರಿಯ ಬಿಜೆಪಿ ನಾಯಕರ ಪ್ರಾಥಮಿಕ ಸಭೆಯಲ್ಲಿ  ಮಹತ್ವದ ಚರ್ಚೆಗಳು ನಡೆದಿವೆ. ಸಭೆಯಲ್ಲಿ ರಾಜ್ಯದ ನಾಲ್ಕು ದಿಕ್ಕಿನಿಂದ ರಥಯಾತ್ರೆ (bjp rath yatra ) ಮಾಡುವ ಬಗ್ಗೆ ಚರ್ಚೆಯಾಗಿದೆ. ಇನ್ನು ಜನಸಂಕಲ್ಪ ಯಾತ್ರೆ ಮುಂದುವರಿಸಲು ಸತೀರ್ಮಾನವಾಗಿದೆ.

ಇದನ್ನೂ ಓದಿ: Karnataka BJP ಯಡಿಯೂರಪ್ಪ ಇಲ್ಲದೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಸಭೆ: ಮಹತ್ವದ ಸಭೆಗೆ ಬಿಎಸ್​ವೈ ಕಡೆಗಣನೆ

ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಸಾಧನೆಗಳನ್ನು ತಿಳಿಸಲು, ಚುನಾವಣೆಗೆ ಪೂರಕವಾಗಿ ರಾಜ್ಯದ ನಾಲ್ಕು ದಿಕ್ಕಿನಿಂದ ರಥಯಾತ್ರೆ ಕೈಗೆತ್ತಿಕೊಳ್ಳಲು ಪ್ರಮುಖರ ಪ್ರಾಥಮಿಕ ಸಭೆಯಲ್ಲಿ ತೀರ್ಮಾನಿಸಿಲಾಗಿದ್ದು, ಮುಂದಿನ ದಿನಗಳಲ್ಲಿ ದಿನಾಂಕ ಅಂತಿಮವಾಗಲಿದೆ ಎಂದು ಮಾಹಿರಿ ನೀಡಿದರು.

ಅಧಿವೇಶನ, ಪಕ್ಷದ ಸಂಘಟನೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ದೆಹಲಿ ನಾಯಕರ ಕಾರ್ಯಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದೆ. ಯಾರೆಲ್ಲ ಯಾವತ್ತು ಮಾಡಬೇಕು ಅಂತ ಚರ್ಚೆಯಾಗಿದೆ. ಒಂದಿಲ್ಲ ಒಂದು ರೀತಿಯಲ್ಲಿ ಜನಸಂಪರ್ಕ ಮಾಡಬೇಕು ಮಂಡಲ, ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ಮಾಡಬೇಕು. ಎಲ್ಲ ಮೋರ್ಚಾಗಳ ಸಮಾವೇಶಗಳು ಜಿಲ್ಲಾ ಮಟ್ಟದಲ್ಲಿ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ವಿಜಯಸಂಕಲ್ಪ ಅಭಿಯಾ‌ನ ಶನಿವಾರದಿಂದ ಶುರುವಾಗಲಿದೆ. ವಿಜಯಪುರ ಜಿಲ್ಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ. ನಾನು ಒಂದು ಕಡೆ, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ, ಕೇಂದ್ರ, ರಾಜ್ಯದ ಸಚಿವರು ಬೇರೆ-ಬೇರೆ ಸ್ಥಳಗಳಲ್ಲಿ ಚಾಲನೆ ನೀಡಲಿದ್ದು, ಕೇಂದ್ರ-ರಾಜ್ಯ ಸರ್ಕಾರದ ಕೊಡುಗೆಗಳು, ಯೋಜನೆಗಳ ಕುರಿತು ಕರಪತ್ರ ಹಂಚಿಕೆ ಸೇರಿ ವಿವಿಧ ಪ್ರಚಾರ ತಂತ್ರಗಳು ಅನುಷ್ಠಾನಕ್ಕೆ ಬರಲಿವೆ ಎಂದು ಹೇಳಿದರು.

ಮುಂದಿನ ಎರಡು ತಿಂಗಳು ವಿಧಾನಮಂಡಲ ಅಧಿವೇಶನ ಜತೆಗೆ ರಾಜಕೀಯ, ಸಂಘಟನಾತ್ಮಕ ಚಟುವಟಿಕೆಗಳ ರೂಪುರೇಷೆ ಬಗ್ಗೆ ಚರ್ಚಿಸಿದ್ದು, ಹಿರಿಯರ ಸಮಕ್ಷಮ ಮತ್ತೊಂದು ಸುತ್ತಿನ ಸಭೆಯಲ್ಲಿ ಫೈನಲ್ ಆಗಲಿದೆ ಎಂದರು.

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಲ್ ಸಂತೋಷ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಿರಿಯ ಪದಾಧಿರಿಗಳು ಇದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್