ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮತ್ತೆ ಬದಲಾವಣೆ: ಇಲ್ಲಿದೆ ಹೊಸ ರೂಟ್ ಮ್ಯಾಪ್​

ನೀಟ್ ಪರೀಕ್ಷೆ ಕಾರಣ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಪ್ಲ್ಯಾನ್‌ನಲ್ಲಿ ಸ್ವಲ್ಪ ಬದಲಾವಣೆಯಾಗಿದೆ. ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಶನಿವಾರಕ್ಕೆ ನಿಗದಿ ಮಾಡಲಾಗಿದೆ. ಹಾಗಾದ್ರೆ ಮೋದಿ ರೋಡ್ ಶೋ ಎಲ್ಲೆಲ್ಲಿ ಸಾಗಲಿದೆ ಎನ್ನುವ ಹೊಸ ರೂಟ್ ಮ್ಯಾಪ್ ಇಲ್ಲಿದೆ ನೋಡಿ.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮತ್ತೆ ಬದಲಾವಣೆ: ಇಲ್ಲಿದೆ ಹೊಸ ರೂಟ್ ಮ್ಯಾಪ್​
ನರೇಂದ್ರ ಮೋದಿ
Follow us
ರಮೇಶ್ ಬಿ. ಜವಳಗೇರಾ
| Updated By: ಆಯೇಷಾ ಬಾನು

Updated on:May 06, 2023 | 8:05 AM

ಬೆಂಗಳೂರು: ಕರ್ನಾಟಕದಲ್ಲಿ ಪೂರ್ಣಬಹುಮತದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಧಾನಿ ನರೇಂದ್ರ ಮೋದಿ(PM Nagendra Modi) ಶಪಥ ಮಾಡಿದ್ದಾರೆ. ಚುನಾವಣೆಗೆ ಇನ್ನೇನು ಬೆರಳೆಣಿಕೆ ದಿನಗಳು ಬಾಕಿ ಉಳಿದಿರುವಂತೆ ರಾಜ್ಯದ ಉದ್ದಗಲಕ್ಕೂ ದಂಡಯಾತ್ರೆ ಕೈಗೊಂಡಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಲ್ಲಿ ಮೇ 6ರಂದು(ಶನಿವಾರ) ಮಾತ್ರವಲ್ಲದೇ ಭಾನುವಾರವೂ (ಮೇ7) ಸಹ ರಾಜಧಾನಿ ಬೆಂಗಳೂರು(Bengaluru) ನಗರದಲ್ಲಿ ಬೃಹತ್‌ ರೋಡ್‌ ಶೋ(Modi Roadshow) ನಡೆಸಲಿದ್ದಾರೆ. ಆದ್ರೆ, ರೋಡ್ ಶೋ ಮಾರ್ಗದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಶನಿವಾರಕ್ಕೆ ನಿಗದಿ ಮಾಡಲಾಗಿದೆ. ಭಾನುವಾರ ನೀಟ್ ಪರೀಕ್ಷೆ ಹಿನ್ನೆಲೆ ಪ್ರಧಾನಿ ಕಚೇರಿ ನಿರ್ದೇಶನದಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ. ಹಾಗಾದ್ರೆ, ಮೋದಿ ರೋಡ್ ಶೋ ಎಲ್ಲೆಲ್ಲಿ ಸಾಗಲಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ: ಇಂದು ಸಂಜೆ ಬೆಂಗಳೂರಿಗೆ ಮೋದಿ, ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ನೀಟ್ ಪರೀಕ್ಷೆ ಹಿನ್ನೆಲೆ ರೋಡ್​ ಶೋನಲ್ಲಿ ಬದಲಾವಣೆ

ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಶನಿವಾರಕ್ಕೆ ಫಿಕ್ಸ್ ಮಾಡಲಾಗಿದ್ದು, ಶನಿವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಭಾನುವಾರಕ್ಕೆ ನಿಗದಿ ಮಾಡಲಾಗಿದೆ.  ಭಾನುವಾರ ನೀಟ್ ಪರೀಕ್ಷೆ ಹಿನ್ನೆಲೆ ಪ್ರಧಾನಿ ಕಚೇರಿ ನಿರ್ದೇಶನದಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೋದಿ ರೋಡ್ ಶೋ ಮತ್ತೆ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಶನಿವಾರಕ್ಕೆ ನಿಗದಿಯಾಗಿದೆ. ಶನಿವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಭಾನುವಾರಕ್ಕೆ ಫಿಕ್ಸ್ ಮಾಡಲಾಗಿದೆ. ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ರೋಡ್ ಶೋ ನಡೆಯಲಿದ್ದು, ಜೆ.ಪಿ.ನಗರದ ಬ್ರಿಗೇಡ್ ಮಿಲೇನಿಯಂನಿಂದ ರೋಡ್ ಶೋ ಆರಂಭವಾಗಲಿದೆ. ಮಲ್ಲೇಶ್ವರಂನ ಸರ್ಕಲ್ ಮಾರಮ್ಮ ಟೆಂಪಲ್‌ವರೆಗೆ ರೋಡ್ ಶೋ ಮಾಡಲಿದ್ದಾರೆ.

ಶನಿವಾರ ಮೋದಿ ರೋಡ್ ಶೋ ಮಾರ್ಗ

ಜೆ.ಪಿ. ನಗರ ಬ್ರಿಗೇಡ್ ಮಿಲೇನಿಯಂ->ಸಾರಕ್ಕಿ ಜಂಕ್ಷನ್-> ಸೌತ್ ಎಂಡ್ ಸರ್ಕಲ್->ಕೃಷ್ಣರಾವ್ ಪಾರ್ಕ್->ರಾಮಕೃಷ್ಣ ಆಶ್ರಮ-> ಮಕ್ಕಳ ಕೂಟ->ಟೌನ್ ಹಾಲ್->ಕಾವೇರಿ ಭವನ->ಮೆಜೆಸ್ಟಿಕ್-> ಮಾಗಡಿ ರೋಡ್->GT ವರ್ಲ್ಡ್ ಮಾಲ್->ಹೌಸಿಂಗ್ ಬೋರ್ಡ್->ಬಸವೇಶ್ವರ ನಗರ->ಶಂಕರ ಮಠ ಸರ್ಕಲ್-> ಮೋದಿ ಆಸ್ಪತ್ರೆ ರಸ್ತೆ->ನವರಂಗ್ ಸರ್ಕಲ್->ಮಹಾಕವಿ ಕುವೆಂಪು ರಸ್ತೆ->ಮಲ್ಲೇಶ್ವರಂ ಸರ್ಕಲ್ ->ಸಂಪಿಗೆ ರಸ್ತೆ-> ಸರ್ಕಲ್ ಮಾರಮ್ಮ ದೇವಸ್ಥಾನ.

ರೋಡ್ ಶೋನಲ್ಲಿ 4 ಕಿ.ಮೀ ಕಡಿತ!

ಭಾನುವಾರ ಬೆಳಗ್ಗೆ 10 ಗಂಟೆಯಿಂದ 11.30ರವರೆಗೆ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಸುರಂಜನ್‌ದಾಸ್ ಸರ್ಕಲ್‌ನಿಂದ ಟ್ರಿನಿಟಿ ಸರ್ಕಲ್‌ವರೆಗೆ ರೋಡ್ ಶೋ ನಡೆಯಲಿದೆ. ಭಾನುವಾರ ನಡೆಯುವ ಪ್ರಧಾನಿ ರೋಡ್ ಶೋ 4 ಕಿ.ಮೀ‌. ಕಡಿತ ಮಾಡಲಾಗಿದೆ. ನೀಟ್ ಪರೀಕ್ಷೆ ಹಿನ್ನೆಲೆ ರೋಡ್‌ ಶೋ ರೂಟ್‌ನಲ್ಲಿ ಬದಲಾವಣೆ ಮಾಡಲಾಗಿದ್ದು, ಟ್ರಾಫಿಕ್ ಸಮಸ್ಯೆ ಆಗಬಹುದು ಅನ್ನೋ ಕಾರಣಕ್ಕೆ ಪ್ರಧಾನಿ ಕಚೇರಿ ನಿರ್ದೇಶನದಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ.

ಭಾನುವಾರದ ರೋಡ್ ಶೋ ರೂಟ್ ಮ್ಯಾಪ್

ಬೆಮೆಲ್ ಸರ್ಕಲ್->ತಿಪ್ಪಸಂದ್ರ ಮುಖ್ಯರಸ್ತೆ->ಇಎಸ್ಐ ಆಸ್ಪತ್ರೆ, CMH ರೋಡ್->ಇಂದಿರಾನಗರ->ಹಲಸೂರು ಪೊಲೀಸ್ ಸ್ಟೇಷನ್- ಎಂ.ಜಿ ರಸ್ತೆ->ಬ್ರಿಗೇಡ್ ರೋಡ್

ಸಕಲ ಸಿದ್ಧತೆ

ಮೋದಿ ರೋಡ್​ ಶೋಗೆ ಈಗಾಗಲೇ ಪೊಲೀಸರು, ಬಿಬಿಎಂಪಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ರಸ್ತೆಯ ಎರಡು ಬದಿಯಲ್ಲಿ ಬ್ಯಾರಿಕೇಡ್​ ಹಾಕಲಾಗಿದ್ದು, ರೋಡ್ ಶೋ ನಡೆಯುವ ರಸ್ತೆಯಲ್ಲಿರುವ ಮರದ ಕೊಂಬೆಗಳನ್ನು ಕತ್ತರಿಸುವ ಕೆಲಸ ನಡೆಯುತ್ತಿದೆ. ಅಲ್ಲದೇ ರೋಡ್ ಶೋ ಸಾಗುವ ರಸ್ತೆಗಳಲ್ಲಿ ಸ್ಚಚ್ಛತೆ ಕಾರ್ಯವೂ ಸಹ ನಡೆಯುತ್ತಿದೆ. ಅಲ್ಲದೇ ಹೆಜ್ಜೆ-ಹೆಜ್ಜೆಗೂ ಪೊಲೀಸರ ಬಿಗಿ ಭದ್ರತೆ ಇರಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:28 am, Fri, 5 May 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ