AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​​ಗೆ ಬಿಜೆಪಿ ಲೀಗಲ್ ನೋಟಿಸ್, ಕ್ಷಮೆಯಾಚಿಸಲು ಸೂಚನೆ

ಸೋಮವಾರದೊಳಗೆ ಜಾಹೀರಾತು ಹಿಂಪಡೆದು ಕ್ಷಮೆಯಾಚಿಸಬೇಕು. ಇಲ್ಲವಾದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್​ಗೆ ಬಿಜೆಪಿಯಿಂದ ನೋಟಿಸ್ ಜಾರಿ.

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​​ಗೆ ಬಿಜೆಪಿ ಲೀಗಲ್ ನೋಟಿಸ್, ಕ್ಷಮೆಯಾಚಿಸಲು ಸೂಚನೆ
ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​​
ಆಯೇಷಾ ಬಾನು
ಆಯೇಷಾ ಬಾನು|

Updated on: May 08, 2023 | 10:20 AM

Share

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿರುವ ಜಾಹಿರಾತು ಸಂಬಂಧ ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ(Election Commission) ಈಗಾಗಲೇ ಡಿಕೆ ಶಿವಕುಮಾರ್(DK Shivakumar) ಅವರಿಗೆ ನೋಟಿಸ್ ಜಾರಿ ಮಾಡಿದೆ. ಇನ್ನು ಮತ್ತೊಂದೆಡೆ ಒಂದು ಹೆಜ್ಜೆ ಮುಂದಿಟ್ಟ ಬಿಜೆಪಿ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ಕ್ರಿಮಿನಲ್ ಡಿಫಾಮೇಷನ್ ಲೀಗಲ್ ನೋಟಿಸ್ ನೀಡಿದೆ. ಸೋಮವಾರದೊಳಗೆ ಜಾಹೀರಾತು ಹಿಂಪಡೆದು ಕ್ಷಮೆಯಾಚಿಸಬೇಕು. ಇಲ್ಲವಾದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್ ನಾಯಕರಿಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೇಶವಪ್ರಸಾದ್​ರಿಂದ ಲೀಗಲ್​ ನೋಟಿಸ್ ನೀಡಲಾಗಿದೆ.

ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿರುವ ಜಾಹಿರಾತನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿತ್ತು. ಕಾಂಗ್ರೆಸ್ ಮಾಡಿರುವ ನಿರ್ದಿಷ್ಟ ಆರೋಪಗಳ ಕುರಿತಾಗಿ ಸಾಕ್ಷ್ಯಾಧಾರ ಹಾಜರುಪಡಿಸುವಂತೆ ತಾಕೀತು ಮಾಡಿತ್ತು. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದರು. ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ. ರೇಟ್​ ಕಾರ್ಡ್ ನೀಡಿದ್ದು ಯತ್ನಾಳ್​, ಗೂಳಿಹಟ್ಟಿ ಶೇಖರ್, ​ಹೆಚ್​.ವಿಶ್ವನಾಥ್ ಎಂದು ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದರು. ಸಿಎಂ ಸ್ಥಾನಕ್ಕೆ ರೇಟ್​ ಎಷ್ಟು ಎಂಬುವುದನ್ನು ಬಿಜೆಪಿಯವರೇ ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಎಷ್ಟು ರೇಟ್​​, ಮಠಗಳ ಸ್ವಾಮೀಜಿಗಳಿಂದ ಎಷ್ಟು ರೇಟ್​. ಈ ರೇಟ್​ ಕಾರ್ಡ್​ ನೀಡಿದ್ದು ಬಿಜೆಪಿಯವರೇ. ಬಿಜೆಪಿಯವರೇ ನೀಡಿದ ರೇಟ್​​​ ಕಾರ್ಡ್​ನ್ನು ನಾವು ನೀಡಿದ್ದೇವೆ ಅಷ್ಟೇ ಎಂದಿದ್ದರು. ಸದ್ಯ ಈಗ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದ್ದು ಕ್ರಿಮಿನಲ್ ಡಿಫಾಮೇಷನ್ ಲೀಗಲ್ ನೋಟಿಸ್ ನೀಡಿದೆ. ಸೋಮವಾರದೊಳಗೆ ಜಾಹೀರಾತು ಹಿಂಪಡೆದು ಕ್ಷಮೆಯಾಚಿಸಬೇಕು. ಇಲ್ಲವಾದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್ ನಾಯಕರಿಗೆ ಲೀಗಲ್​ ನೋಟಿಸ್ ಕಳಿಸಲಾಗಿದೆ.

ಇದನ್ನೂ ಓದಿ: ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ; ಚುನಾವಣಾ ಆಯೋಗದ ನೋಟಿಸ್​ಗೆ ಡಿಕೆ ಶಿವಕುಮಾರ್‌ ಉತ್ತರ

ಕಾಂಗ್ರೆಸ್ ಪಕ್ಷ ದಿನ ಪತ್ರಿಕೆಗಳಲ್ಲಿ ಮೇ.5 ರಂದು ಭ್ರಷ್ಟಾಚಾರ ಆರೋಪಗಳಿರುವ ಆಧಾರರಹಿತ ಜಾಹಿರಾತು ನೀಡಿತ್ತು. ಈ ಸಂಬಂಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ದೂರು ಪರಿಶೀಲಿಸಿದ ಚುನಾವಣಾ ಆಯೋಗ ಆರೋಪಗಳ ಬಗ್ಗೆ ನೈಜ ಸಾಕ್ಷ್ಯ ಒದಗಿಸಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಸೂಚನೆ ನೀಡಿತ್ತು. ಮೇ .7 ರ ಸಂಜೆ 7 ಗಂಟೆಯೊಳಗೆ ವಿವರಣೆ ಒದಗಿಸಲು ತಾಕೀತು ಮಾಡಿತ್ತು. ಸರ್ಕಾರದ ನೀತಿಯ ಬಗ್ಗೆ ಟೀಕಿಸುವ ಹಕ್ಕಿದೆ. ಆದರೆ ಜಾಹಿರಾತಿನಲ್ಲಿರುವುದು ಸಾಧಾರಣ ಆರೋಪಗಳಲ್ಲ. ಸರ್ಕಾರದ ಆಡಳಿತ ಯಂತ್ರದ ಮೇಲೆ ನಿರ್ದಿಷ್ಟವಾಗಿ ಭ್ರಷ್ಟಾಚಾರದ ಆರೋಪಿಸಲಾಗಿದೆ. ಇದು ಚುನಾವಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರುವಂತದ್ದಾಗಿದೆ. ಜಾಹಿರಾತು ಗಮನಿಸಿದರೆ ಕಾಂಗ್ರೆಸ್ ಪಕ್ಷದ ಬಳಿ ಪುರಾವೆಗಳಿರಬೇಕು. ಹೀಗಾಗಿ ಸಂಜೆ 7 ಗಂಟೆಯೊಳಗೆ ಪುರಾವೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ್ದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್