ಚುನಾವಣೆ ಮೂಡ್​ನಲ್ಲಿ ಬಿಜೆಪಿ: ಡಿ 18ಕ್ಕೆ ಬೆಂಗಳೂರಿನಲ್ಲಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ, ಬಿಎಲ್ ಸಂತೋಷ್ ಭಾಗಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (BL Santosh) ಸಮಾರೋಪ ಭಾಷಣ ಮಾಡಲಿದ್ದಾರೆ.

ಚುನಾವಣೆ ಮೂಡ್​ನಲ್ಲಿ ಬಿಜೆಪಿ: ಡಿ 18ಕ್ಕೆ ಬೆಂಗಳೂರಿನಲ್ಲಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ, ಬಿಎಲ್ ಸಂತೋಷ್ ಭಾಗಿ
ಬಿಜೆಪಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 10, 2022 | 1:14 PM

ಬೆಂಗಳೂರು: ಗುಜರಾತ್ ಗೆಲುವಿನಿಂದ ಹುಮ್ಮಸ್ಸು ಹೆಚ್ಚಿಸಿಕೊಂಡಿರುವ ಬಿಜೆಪಿ, ಕರ್ನಾಟಕದಲ್ಲಿಯೂ ವಿಧಾನಸಭೆ ಚುನಾವಣೆಗೆ (Karnataka Assembly Elections 2022) ಭರದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಡಿ 18ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಶಕ್ತಿ ಸಂಗಮ’ ಹೆಸರಿನಲ್ಲಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ  (BJP Workders Meeting) ಆಯೋಜಿಸಲಾಗಿದೆ ಎಂದು ನಗರದಲ್ಲಿ ಶನಿವಾರ (ಡಿ 10) ನಡೆದ ಮಾಧ್ಯಮಗೋಷ್ಠಿಯಲ್ಲಿ ಬಿಜೆಪಿಯ ವಿವಿಧ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಂ.ಬಿ.ಭಾನುಪ್ರಕಾಶ್ ತಿಳಿಸಿದರು. ಸಮಾವೇಶವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಲಿದ್ದಾರೆ. ಸಮಾವೇಶದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮತ್ತು ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (BL Santosh) ಸಮಾರೋಪ ಭಾಷಣ ಮಾಡಲಿದ್ದಾರೆ. ಸಮಾವೇಶದಲ್ಲಿ ಪ್ರಕೋಷ್ಠಗಳ ಸದಸ್ಯರು ತಮ್ಮ ತಮ್ಮ ಪ್ರಕೋಷ್ಠಗಳ ದಿರಿಸಿನಲ್ಲಿ ಪಾಲ್ಗೊಳ್ಳಲು ಸೂಚಿಸಲಾಗಿದೆ ಎಂದು ಭಾನುಪ್ರಕಾಶ್ ತಿಳಿಸಿದರು.

ಬೆತ್ತನಗೆರೆ ಶಂಕರ ಸೇರ್ಪಡೆ: ತಪ್ಪು ಎಂದ ಹಿರಿಯ ನಾಯಕ

ರೌಡಿ ಚಟುವಟಿಕೆಗಳ ಆರೋಪ ಕೇಳಿ ಬಂದಿದ್ದ ಬೆತ್ತನಗೆರೆ ಶಂಕರ ಬಿಜೆಪಿ ಸೇರ್ಪಡೆ ವಿವಾದದ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧರಾಜು ಪ್ರತಿಕ್ರಿಯಿಸಿದರು. ‘ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದು ನಮ್ಮಿಂದ ತಪ್ಪಾಗಿದೆ. ಅವರು ಈಗ ನಮ್ಮಲ್ಲಿ ಆಕ್ಟಿವ್ ಆಗಿಲ್ಲ. ಅವರನ್ನು ಪಕ್ಷದಿಂದ ಹೊರಗೆ ಹಾಕುವ ಬಗ್ಗೆ ಪಕ್ಷದ ಅಧ್ಯಕ್ಷರಿಗೆ ಅಧಿಕಾರ ಇರುತ್ತದೆ. ಆತ ಯಾರು ಅನ್ನೋದು ನನಗೆ ಗೊತ್ತಿರಲಿಲ್ಲ. ಎಚ್.ಡಿ.ಕೋಟೆಯಲ್ಲಿ ಕೃಷಿ ಮಾಡಿಕೊಂಡಿರುವುದಾಗಿ ಹೇಳಿ ನಲ್ಲೂರು ಶಂಕರ ಎಂಬ ಹೆಸರಿನಲ್ಲಿ ಸೇರ್ಪಡೆಯಾಗಿದ್ದ. ಆದರೆ ಈಗ ಆತ ಪಾರ್ಟಿಯಲ್ಲಿ ಆಕ್ಟಿವ್ ಆಗಿಲ್ಲ’ ಎಂದು ಸ್ಪಷ್ಟಪಡಿಸಿದರು.

ವರಿಷ್ಠ ನಾಯಕರ ಸಾಲುಸಾಲು ಪ್ರವಾಸ

ಬಿಜೆಪಿಯು ಕರ್ನಾಟಕದಲ್ಲಿ ಚುನಾವಣಾ ಸಿದ್ಧತೆ ಚುರುಕುಗೊಳಿಸಿದೆ. ಬಿಜೆಪಿ ವರಿಷ್ಠ ನಾಯಕರ ಸಾಲುಸಾಲು ರಾಜ್ಯ ಪ್ರವಾಸ ನಿಗದಿಯಾಗಿದೆ. ಡಿ 15ರಂದು ಬಾಗಲಕೋಟೆಗೆ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ‌.ನಡ್ಡಾ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಕಚೇರಿಗಳನ್ನು ಉದ್ಘಾಟನೆ ಮಾಡಲಿರುವ ನಡ್ಡಾ, ಸಾರ್ವಜನಿಕ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಡಿ 18ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಪ್ರಕೋಷ್ಠಗಳ ಸಮಾವೇಶದಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಾಲ್ಗೊಳ್ಳಲಿದ್ದಾರೆ.

ಡಿ 21 ಮತ್ತು 22ರಂದು ಮುರ್ಡೇಶ್ವರದಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಜ 12ರಂದು ಉಡುಪಿಯಲ್ಲಿ ಬಿಜೆಪಿ ಯುವ ಮೋರ್ಛಾ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌. ನಡ್ಡಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ. ಜನವರಿ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಬಿಜೆಪಿ ರೈತ ಮೋರ್ಛಾ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಆಯುಷ್ಮಾನ್, ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆಗೆ ಮೋದಿ ಚಾಲನೆ ನೀಡಲಿದ್ದಾರೆ.

ಜನವರಿ ತಿಂಗಳಲ್ಲಿಯೇ ಚಿತ್ರದುರ್ಗದಲ್ಲಿ ಬಿಜೆಪಿ ಎಸ್​ಸಿ ಮೋರ್ಛಾ ಸಮಾವೇಶ ನಡೆಯಲಿದೆ. ಎಸ್​ಸಿ ಮೋರ್ಛಾ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಾಲ್ಗೊಳ್ಳುವ ಸಾಧ್ಯತೆಯಿದೆ. ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಏರೊ ಇಂಡಿಯಾ ಏರ್ ಶೋ ಉದ್ಘಾಟನೆಗೆಂದು ಮತ್ತೊಮ್ಮೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

Published On - 1:14 pm, Sat, 10 December 22

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ