ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಮರಳಿ ತರಲು ಬಿಜೆಪಿ ಬಿಡುವುದಿಲ್ಲ -ಕೇಂದ್ರ ಸಚಿವ ಅಮಿತ್ ಶಾ

|

Updated on: Apr 29, 2023 | 11:00 AM

ಧಾರವಾಡದಲ್ಲಿ ಶುಕ್ರವಾರ ನಡೆದ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಮರಳಿ ತರಲು ಬಿಜೆಪಿ ಬಿಡುವುದಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಮರಳಿ ತರಲು ಬಿಜೆಪಿ ಬಿಡುವುದಿಲ್ಲ -ಕೇಂದ್ರ ಸಚಿವ ಅಮಿತ್ ಶಾ
ಅಮಿತ್ ಶಾ
Follow us on

ಧಾರವಾಡ: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಹಿನ್ನೆಲೆ ಬಿಜೆಪಿ ರಾಷ್ಟ್ರ ನಾಯಕರು ರಾಜ್ಯದೆಲ್ಲೆಡೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಧಾರವಾಡದಲ್ಲಿ ಶುಕ್ರವಾರ(ಏಪ್ರಿಲ್ 28) ನಡೆದ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸುವ ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು ಮತ್ತು ಬಿಜೆಪಿ ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಯಾವುದೇ ಅವಕಾಶವಿಲ್ಲ, ಆದರೆ ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ, ಕಾಂಗ್ರೆಸ್ ಮುಸ್ಲಿಂ ಮೀಸಲಾತಿಯನ್ನು ಮರಳಿ ತರುವುದಾಗಿ ಹೇಳಿಕೊಂಡಿದೆ. ನಾನು ಕಾಂಗ್ರೆಸ್ ನಾಯಕರಿಗೆ ಒಂದು ಪ್ರಶ್ನೆಯನ್ನು ಕೇಳಲು ಬಯಸುತ್ತೇನೆ, ಮುಸ್ಲಿಮರಿಗೆ ಮೀಸಲಾತಿ ನೀಡಲು ನೀವು ಯಾರ ಕೋಟಾವನ್ನು ಕಡಿತಗೊಳಿಸುತ್ತೀರಿ? ಲಿಂಗಾಯತರು, ಒಕ್ಕಲಿಗರು ಅಥವಾ ಎಸ್‌ಸಿ, ಎಸ್‌ಟಿಗಳು. ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿ ಮರಳಲು ಬಿಜೆಪಿ ಬಿಡುವುದಿಲ್ಲ ಎಂದು ನಾನು ಕರ್ನಾಟಕದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದು ಶಾ ಹೇಳಿದರು.

ಇದನ್ನೂ ಓದಿ: Amit Shah: ಧಾರವಾಡ, ಗದಗ, ಹಾವೇರಿಯಲ್ಲಿ ಅಮಿತ್ ಶಾ ಅಬ್ಬರದ ಪ್ರಚಾರ; ಮತಬೇಟೆಯೊಂದಿಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೆಚ್ಚಿನ ಸಮುದಾಯಗಳನ್ನು ಸೇರಿಸಲು ಒಟ್ಟಾರೆ ಮೀಸಲಾತಿ ಮಿತಿಯನ್ನು ಶೇಕಡಾ 50 ರಿಂದ 75 ಕ್ಕೆ ಏರಿಸುವುದಾಗಿ ಇತ್ತೀಚೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದರು.

ಇನ್ನು ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ವಿರುದ್ಧ ವಿಷದ ಹಾವು ಎಂದು ಖರ್ಗೆ ಅವರು ನೀಡಿದ್ದ ಹೇಳಿಕೆಗೆ ಅಮಿತ್ ಶಾ ಕೆಂಡಾಮಂಡಲರಾದರು.

“ಮೋದಿ ವಿದೇಶ ಪ್ರವಾಸಕ್ಕೆ ಹೋದಾಗಲೆಲ್ಲಾ ಜನರು ಮೋದಿ, ಮೋದಿ ಎಂದು ಜಪಿಸುತ್ತಾರೆ, ಆದರೆ, ಇಲ್ಲಿ ಖರ್ಗೆ ಅವರನ್ನು ‘ವಿಷಪೂರಿತ ಹಾವು’ ಎಂದು ಕರೆದಿದ್ದಾರೆ. ಮೋದಿಯವರನ್ನು ದೂಷಿಸಿದಷ್ಟೂ ಕಮಲ ಅರಳುತ್ತದೆ ಎಂದು ಅಮಿತ್ ಶಾ ಹೇಳಿದರು. ಇನ್ನು ಮತ್ತೊಂದೆಡೆ ‘ಪ್ರಚೋದನಕಾರಿ’ ಭಾಷಣಗಳಿಗಾಗಿ ಶಾ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ನಿಷೇಧಿಸುವಂತೆ ಕೋರಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ವಿಧಾನಸಭಾ ಚುನಾವಣೆ ಸಂಬಂಧದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:00 am, Sat, 29 April 23