ಬಿಜೆಪಿ ಮಣೆ ಹಾಕಿದ್ದು 75 ಹೊಸ ಮುಖಗಳಿಗೆ, ಗೆದ್ದಿದ್ದು ಮಾತ್ರ 19 ಮಂದಿಯಷ್ಟೇ! ಪಕ್ಷದ ಸೋಲಿಗೆ ಇದೂ ಕಾರಣವಾ?

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ 2023 ಪ್ರಕಟಗೊಂಡಿದ್ದು, ಬಿಜೆಪಿಯಿಂದ ಕಣಕ್ಕಿಳಿಸಿದ್ದ 75 ಹೊಸ ಅಭ್ಯರ್ಥಿಗಳಲ್ಲಿ 19 ಮಂದಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್​ನಿಂದ ಕಣಕ್ಕಿಳಿದಿದ್ದ 42 ಹೊಸಮುಖಗಳಲ್ಲಿ 35 ಮಂದಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಮಣೆ ಹಾಕಿದ್ದು 75 ಹೊಸ ಮುಖಗಳಿಗೆ, ಗೆದ್ದಿದ್ದು ಮಾತ್ರ 19 ಮಂದಿಯಷ್ಟೇ! ಪಕ್ಷದ ಸೋಲಿಗೆ ಇದೂ ಕಾರಣವಾ?
ಬಿಜೆಪಿಯ 75 ಹೊಸ ಅಭ್ಯರ್ಥಿಗಳಲ್ಲಿ 19 ಮಂದಿಗೆ ಗೆಲುವು, ಕಾಂಗ್ರೆಸ್​ನ 42 ಹೊಸ ಮುಖಗಳಲ್ಲಿ 35 ಮಂದಿಗೆ ಗೆಲುವು.
Follow us
Rakesh Nayak Manchi
|

Updated on: May 13, 2023 | 7:22 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ 2023 (Karnataka Assembly Election Results 2023) ಪ್ರಕಟಗೊಂಡಿದ್ದು, ನಾಲ್ಕು ವರ್ಷಗಳ ಕಾಲ ಅಧಿಕಾರ ನಡೆಸಿದ ಬಿಜೆಪಿ (BJP) ಹೀನಾಯ ಸೋಲು ಕಂಡಿದೆ. ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಪಕ್ಷದ ಸೋಲಿಗೆ ಕಾರಣವಾಯ್ತಾ? ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಕಣಕ್ಕಿಳಿಸಿದ ಒಟ್ಟು 75 ಹೊಸ ಅಭ್ಯರ್ಥಿಗಳ ಪೈಕಿ 19 ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದಾರೆ. ಇತ್ತ ಕಾಂಗ್ರೆಸ್ (Congress) ಹೈಕಮಾಂಡ್ ಕಣಕ್ಕಿಳಿಸಿದ್ದ 42 ಹೊಸ ಮುಖಗಳ ಪೈಕಿ 35 ಮಂದಿ ಗೆಲುವು ಸಾಧಿಸಿದ್ದಾರೆ.

224 ವಿಧಾನಸಭೆ ಕ್ಷೇತ್ರಗಳ ಪೈಕಿ 75 ಕ್ಷೇತ್ರಗಳಲ್ಲಿ ಬಿಜೆಪಿ ಹೊಸಬರಿಗೆ ಟಿಕೆಟ್​ ನೀಡಿತ್ತು. ಈ ಪೈಕಿ ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮಂಜುಳಾ ಲಿಂಬಾವಳಿ ಗೆಲುವು ಸಾಧಿಸಿದರೆ, ಹುಬ್ಬಳ್ಳಿ ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಮಹೇಶ್ ಟೆಂಗಿನಕಾಯಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದಲ್ಲಿ ನಿಖಿಲ್ ಕತ್ತಿ, ಖಾನಾಪುರ ಕ್ಷೇತ್ರದಲ್ಲಿ ವಿಠ್ಠಲ್ ಹಲಗೇಕರ್, ಬೈಂದೂರು ಕ್ಷೇತ್ರದಲ್ಲಿ ಗುರುರಾಜ್ ಗಂಟಿಹೊಳೆ, ಉಡುಪಿ ಜಿಲ್ಲೆ ಕಾಪು ಗುರ್ಮೆ ಸುರೇಶ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: Karnataka Election Results: ಬಿಜೆಪಿ ಸೋಲು, ಕಾಂಗ್ರೆಸ್​​ ಗೆಲುವಿಗೆ ನಾಯಕರು ಹೇಳಿದ್ದಲ್ಲ, ನಿಜವಾದ ಕಾರಣ ಇಲ್ಲಿದೆ

ಕುಂದಾಪುರ ಕ್ಷೇತ್ರದಲ್ಲಿ ಕಿರಣ್ ಕುಮಾರ್​ ಕೊಡ್ಗಿ ಅವರು ಗೆಲುವು ಸಾಧಿಸಿದರೆ, ಉಡುಪಿ ಕ್ಷೇತ್ರದಲ್ಲಿ ಯಶ್ಪಾಲ್ ಸುವರ್ಣ, ಬೇಲೂರು ಕ್ಷೇತ್ರದಲ್ಲಿ ಹುಲ್ಲಳ್ಳಿ ಸುರೇಶ್​, ಸಕಲೇಶಪುರ ಕ್ಷೇತ್ರದಲ್ಲಿ ಸಿಮೆಂಟ್ ಮಂಜು, ಸುಳ್ಯ ಕ್ಷೇತ್ರದಲ್ಲಿ ಭಾಗೀರಥಿ ಮುರುಳ್ಯ, ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಟಿ.ಎ.ಶ್ರೀವತ್ಸ, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಧೀರಜ್ ಮುನಿರಾಜು, ಜಮಖಂಡಿ ಕ್ಷೇತ್ರದಲ್ಲಿ ಜಗದೀಶ್ ಗುಡಗಂಟಿ ಗೆಲುವು ಸಾಧಿಸಿದರೆ, ಶಿರಹಟ್ಟಿ ಕ್ಷೇತ್ರದಲ್ಲಿ ಡಾ.ಚಂದ್ರು ಲಮಾಣಿ, ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಚನ್ನಬಸಪ್ಪ, ಹುಮ್ನಾಬಾದ್ ಕ್ಷೇತ್ರದಲ್ಲಿ ಸಿದ್ದು ಪಾಟೀಲ್ ಗೆದ್ದಿದ್ದಾರೆ.

ಕಾಂಗ್ರೆಸ್​ನಲ್ಲಿ ಹೊಸಮುಖಗಳಲ್ಲಿ ಗೆದ್ದ ಬಹುಪಾಲು ಅಭ್ಯರ್ಥಿಗಳು

ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಿದ್ದರೆ, ಕಾಂಗ್ರೆಸ್ ಕೆಲವೊಂದು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಟ್ಟಿತ್ತು. ಅದರಂತೆ ಕಾಂಗ್ರೆಸ್​ನಿಂದ ಮೊದಲಬಾರಿ ಸ್ಪರ್ಧಿಸಿದ ಅಭ್ಯರ್ಥಿಗಳ ಪೈಕಿ ಬಹುಪಾಲು ಮಂದಿ ವಿಧಾನಸಭೆ ಪ್ರವೇಶಿಸಿದ್ದಾರೆ. ಕಾಂಗ್ರೆಸ್ ಈ ಬಾರಿ 42 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಈ ಪೈಕಿ 35 ಮಂದಿ ಗೆಲುವು ಸಾಧಿಸಿದ್ದಾರೆ. 7 ಮಂದಿ ಸೋಲು ಅನುಭವಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ