ಹುಬ್ಬಳ್ಳಿ: ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದೆ. ಇಂದು ರಾತ್ರಿಯೇ ಬಿಜೆಪಿ ಪಟ್ಟಿ ಬಿಡುಗಡೆಯಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಹೇಳಿದರು. ಜೆಸಿ ನಗರದಲ್ಲಿ ಮಾಧ್ಯಮ ಕೇಂದ್ರ ಉದ್ಘಾಟನೆ ಬಳಿಕ ಮಾತನಾಡಿದ ಅವರು, ರಾತ್ರಿಯೇ ಮೊದಲ ಪಟ್ಟಿ ಬಿಡುಗಡೆ ಆಗುವ ಮಾಹಿತಿ ಇದೆ. ಈ ಬಾರಿ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕೆಲವೆಡೆ ಶಾಸಕರ ವಿರೋಧಿ ಅಲೆ, ಆರೋಗ್ಯ ಸಮಸ್ಯೆ ಇರುತ್ತೆ. ಹಾಗಾಗಿ ಟಿಕೆಟ್ ಕೈತಪ್ಪುತ್ತೆ ಎಂಬ ಚರ್ಚೆಯಲ್ಲಿರುತ್ತೆ. ಧಾರವಾಡದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ವಿಚಾರವಾಗಿ ಮಾತನಾಡಿ, ಈ ಕುರಿತು ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ. ಈ ಬಾರಿ ನಾನು ಸ್ಪರ್ಧೆ ಮಾಡುತ್ತೇನೆ. ಎಲ್ಲದಕ್ಕೂ ಇಂದು ರಾತ್ರಿ ಉತ್ತರ ಸಿಗಲಿದೆ ಎಂದು ಹೇಳಿದರು.
ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ನಮ್ಮ ಲಿಸ್ಟ್ ಬಿಡುಗಡೆ ಆಗಿದೆ. ಹಿಂದಿನ ಚುನಾವಣೆಯಲ್ಲೂ ಇದೇ ತರಹ ಆಗಿದೆ. ಹೀಗಾಗಿ ವಿಳಂಬ ಅನ್ನೋ ಪ್ರಶ್ನೆ ಬರಲ್ಲ. ಕಾಂಗ್ರೆಸ್ ಒಂದು ತಿಂಗಳ ಮುಂಚೆ 224 ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡುತ್ತೇವೆ ಅಂದಿದ್ದರು. ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ ಎಲ್ಲವೂ ಫೈನಲ್ ಆಗಿ, ಇಂದು ರಾತ್ರಿ ಬಿಡುಗಡೆ ಆಗಬಹುದು ಎಂದು ತಿಳಿಸಿದರು.
ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಸಿಎಂ ಆದ್ರೆ ಕೆಲಸ ಮಾಡಲು ಸಿದ್ಧ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದಿಷ್ಟು
ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಮಾತನಾಡಿ, ಡಬಲ್ ಇಂಜಿನ್ ಸರ್ಕಾರದಿಂದಾಗಿ ಕರ್ನಾಟಕ ಅಭಿವೃದ್ಧಿಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ಗುರಿ ಹೊಂದಿದ್ದಾರೆ. ಹೀಗಾಗಿ ಜನರಿಗೆ ಡಬಲ್ ಇಂಜಿನ್ ಸರ್ಕಾರದ ಮೇಲೆ ವಿಶ್ವಾಸವಿದೆ. ಆದರೆ ಕಾಂಗ್ರೆಸ್ನಲ್ಲಿ ಅಧಿಕಾರಕ್ಕೆ ಬರುವ ಮುನ್ನವೇ ಕಿತ್ತಾಟ ನಡೀತಿದೆ ಎಂದು ಹರಿಹಾಯ್ದರು.
ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ದತ್ತಾ, ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ
ಕಾಂಗ್ರೆಸ್ ಪಕ್ಷದಲ್ಲಿ ಎಡಕ್ಕೆ, ಮತ್ತೊಬ್ಬರು ಬಲಕ್ಕೆ ಎಳೆಯುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಟ್ರಬಲ್ ಇಂಜಿನ್ ಪಕ್ಷವಾಗಿದೆ ಅಂತಾ ವ್ಯಂಗ್ಯವಾಡಿದರು. ಕರ್ನಾಟಕದಲ್ಲಿ ಅನೇಕ ಯೋಜನೆಗಳಿಗೆ ಮೋದಿ ಚಾಲನೆ ನೀಡಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:03 pm, Sun, 9 April 23