AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Candidates List: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ; ಯಾರಿಗೆಲ್ಲ ಟಿಕೆಟ್? ಇಲ್ಲಿದೆ ನೋಡಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಳೆದ ವಾರ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.

BJP Candidates List: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ; ಯಾರಿಗೆಲ್ಲ ಟಿಕೆಟ್? ಇಲ್ಲಿದೆ ನೋಡಿ
ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ
Ganapathi Sharma
|

Updated on:Apr 17, 2023 | 6:52 PM

Share

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಳೆದ ವಾರ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಈ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ.

ಮೂರನೇ ಪಟ್ಟಿಯಲ್ಲಿ ಯಾರಿಗೆಲ್ಲ ಬಿಜೆಪಿ ಟಿಕೆಟ್?

ಕ್ಷೇತ್ರ – ಅಭ್ಯರ್ಥಿ

  1. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
  2. ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ – ಉಮೇಶ್ ಶೆಟ್ಟಿ
  3. ಬೆಂಗಳೂರಿನ ಹೆಬ್ಬಾಳ ಕ್ಷೇತ್ರ – ಕಟ್ಟಾ ಜಗದೀಶ್​
  4. ಮೈಸೂರಿನ ಕೃಷ್ಣರಾಜ ಕ್ಷೇತ್ರ – ಶ್ರೀವತ್ಸ
  5. ಹಗರಿಬೊಮ್ಮನಹಳ್ಳಿ ಕ್ಷೇತ್ರ – ಬಿ.ರಾಮಣ್ಣ
  6. ನಾಗಠಾಣ ಕ್ಷೇತ್ರ – ಸಂಜಯ್ ಐಹೊಳೆ
  7. ಸೇಡಂ ಕ್ಷೇತ್ರ – ರಾಜಕುಮಾರ ಪಾಟೀಲ್ಕೊ
  8. ಕೊಪ್ಪಳ ಕ್ಷೇತ್ರ – ಮಂಜುಳಾ ಅಮರೇಶ್
  9. ರೋಣ ಕ್ಷೇತ್ರ – ಕಳಕಪ್ಪ ಬಂಡಿ
  10. ಮಹದೇವಪುರ – ಮಂಜುಳಾ ಲಿಂಬಾಳಿ

ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿತ್ತು. 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆರು ಮಂದಿ ಹಾಲಿ ಶಾಸಕರಿಗೆ ಎರಡನೇ ಪಟ್ಟಿಯಲ್ಲಿ ಅವಕಾಶ ನೀಡಿರಲಿಲ್ಲ. ಇದೀಗ ಮೂರನೇ ಪಟ್ಟಿಯಲ್ಲಿ 10 ಮಂದಿಗೆ ಟಿಕೆಟ್ ನೀಡುವುದರೊಂದಿಗೆ ಒಟ್ಟು 222 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದಂತಾಗಿದೆ. 2 ಕ್ಷೇತ್ರಗಳ ಟಿಕೆಟ್​ ಅನ್ನು (ಶಿವಮೊಗ್ಗ ನಗರ ಹಾಗೂ ಮಾನ್ವಿ) ಬಿಜೆಪಿ ಬಾಕಿ ಉಳಿಸಿಕೊಂಡಿದೆ.

ಈಶ್ವರಪ್ಪ ಪುತ್ರನಿಗೆ ಇನ್ನೂ ಸಿಕ್ಕಿಲ್ಲ ಟಿಕೆಟ್

ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಜತೆಗೆ ಮಾನ್ವಿ ಕ್ಷೇತ್ರದ ಟಿಕೆಟ್​ ಅನ್ನೂ ಬಾಕಿ ಇರಿಸಿಕೊಂಡಿದೆ. ಶಿವಮೊಗ್ಗ ನಗರ ಕ್ಷೇತ್ರವನ್ನು ಈವರೆಗೆ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಪ್ರತಿನಿಧಿಸುತ್ತಿದ್ದರು. ಇತ್ತೀಚೆಗಷ್ಟೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ, ತಮ್ಮ ಮಗ ಕಾಂತೇಶ್​ಗೆ ಟಿಕೆಟ್ ನೀಡಬೇಕೆಂಬ ಬೇಡಿಕೆಯನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Shivamogga: ಶಿವಮೊಗ್ಗ ನಗರ ಕ್ಷೇತ್ರ; ಯಾರಿದು ಬಿಜೆಪಿ ವರಿಷ್ಠರ ಗಮನ ಸೆಳೆದ ಡಾ. ಧನಂಜಯ ಸರ್ಜಿ? ಆಕಾಂಕ್ಷಿಗಳ ವಿವರ ಇಲ್ಲಿದೆ ನೋಡಿ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಹಲವು ಮಂದಿ ಆಕಾಂಕ್ಷಿಗಳಿದ್ದು, ತೀವ್ರ ಪೈಪೋಟಿ ಇದೆ. ಹೀಗಾಗಿ ಅಭ್ಯರ್ಥಿ ಘೋಷಣೆ ವಿಳಂಬವಾಗುತ್ತಿದೆ. ಸಂಘ ಪರಿವಾರದ ಗಮನ ಸೆಳೆದಿರುವ ಹೊಸ ಮುಖ ಡಾ. ಧನಂಜಯ ಸರ್ಜಿ ಹೆಸರು ಕೂಡ ಪ್ರಬಲವಾಗಿ ಕೇಳಿ ಬರುತ್ತಿದೆ. ಬಿಎಸ್ ಯಡಿಯೂರಪ್ಪ ಆಪ್ತ ಲಿಂಗಾಯತ ಗಾಣಿಗ ಸಮಾಜದ ಜ್ಯೋತಿ ಪ್ರಕಾಶ್ ಕೂಡಾ ರೇಸ್​​ನಲ್ಲಿದ್ದಾರೆ.

ಎಸ್.ಎ.ರಾಮದಾಸ್, ಸೋಮಣ್ಣ ಪುತ್ರನಿಗಿಲ್ಲ ಟಿಕೆಟ್

ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕ ಎಸ್.ಎ.ರಾಮದಾಸ್​ಗೆ ಟಿಕೆಟ್ ಕೈತಪ್ಪಿದೆ. ಅಂತೆಯೇ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣಗೆ ಕೂಡ ಟಿಕೆಟ್ ನಿರಾಕರಿಸಲಾಗಿದೆ. ಇವರು ಗೋವಿಂದರಾಜನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಹದೇವಪುರ ಕ್ಷೇತ್ರದ ಟಿಕೆಟ್ ಅರವಿಂದ ಲಿಂಬಾವಳಿ ಕೈತಪ್ಪಿದ್ದು, ಅವರ ಪತ್ನಿ ಮಂಜುಳಾಗೆ ದೊರೆತಿದೆ.

ಬಿಜೆಪಿ ಮೊದಲ ಪಟ್ಟಿಯ ವಿವರ; BJP’s First Candidate List: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 189 ಮಂದಿಗೆ ಟಿಕೆಟ್, 52 ಮಂದಿ ಹೊಸಬರಿಗೆ ಮಣೆ

ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ಅಚ್ಚರಿಯ ಆಯ್ಕೆ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅಚ್ಚರಿಯ ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಲ್ಲಾಹುಣ್ಸಿ ರಾಮಣ್ಣಗೆ ಟಿಕೇಟ್ ಘೋಷಣೆ ಮಾಡಲಾಗಿದೆ. ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ ಪ್ರಬಲ ಆಕಾಂಕ್ಷಿಗಳಾಗಿದ್ದರು. ಜೆತೆಗೆ ಕೆಎಸ್ಎಸ್ ಅಧಿಕಾರಿ ಭೀಮಾನಾಯ್ಕ್ ಕೂಡ ಆಕಾಂಕ್ಷಿ ಆಗಿದ್ದರು. ಇವರಿಗೂ ಟಿಕೇಟ್ ಕೈತಪ್ಪಿದೆ. ಹೀಗಾಗಿ ಈ ಕ್ಷೇತ್ರದಲ್ಲೂ ಬಿಜೆಪಿ ಬಂಡಾಯದ ಬಿಸಿ ಎದುರಿಸಬೇಕಾದ ಸಾಧ್ಯತೆ ಇದೆ.

ಬಿಜೆಪಿ ಎರಡನೇ ಪಟ್ಟಿಯ ವಿವರ; BJP Candidates Second List: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಇಲ್ಲಿದೆ ವಿವರ

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:22 pm, Mon, 17 April 23

ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್