Karnataka BJP ಯಡಿಯೂರಪ್ಪ ಇಲ್ಲದೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಸಭೆ: ಮಹತ್ವದ ಸಭೆಗೆ ಬಿಎಸ್​ವೈ ಕಡೆಗಣನೆ

ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಮತ್ತೆ ಯಡಿಯೂರಪ್ಪನವರನ್ನು ಬಿಜೆಪಿಯಲ್ಲಿ ಕಡೆಗಣನೆ ಸದ್ದು ಮಾಡಿದೆ. ಇಂದು ಕರ್ನಾಟಕ ಬಿಜೆಪಿ ಹಿರಿಯ ನಾಯಕರ ಮಹತ್ವದ ಸಭೆಗೆ ಬಿಎಸ್​ವೈಗೆ ಆಹ್ವಾನ ನೀಡಿಲ್ಲದಿರುವುದು ಕಡೆಗಣಿಸುತ್ತಿರುವುದಕ್ಕೆ ಪುಷ್ಟಿ ಕೊಡುವಂತೆಯೇ ಇದೆ. ಈ ಬೆಳವಣಿಗೆ ಚರ್ಚೆಗೆ ಗ್ರಾಸವಾಗಿದೆ.

Karnataka BJP ಯಡಿಯೂರಪ್ಪ ಇಲ್ಲದೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಸಭೆ: ಮಹತ್ವದ ಸಭೆಗೆ ಬಿಎಸ್​ವೈ ಕಡೆಗಣನೆ
ಬಿಎಸ್ ಯಡಿಯೂರಪ್ಪ
Follow us
ರಮೇಶ್ ಬಿ. ಜವಳಗೇರಾ
|

Updated on:Jan 20, 2023 | 6:01 PM

ಬೆಂಗಳೂರು: ಮೊನ್ನೇ ಅಷ್ಟೇ ಅಂದ್ರೆ ಜ 16ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ (BJP National Executive) ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸುಮಾರು 15 ನಿಮಿಷ ಪ್ರತ್ಯೇಕ ಮಾತುಕತೆ ನಡೆಸಿದ್ದರು. ಈ ಬೆಳವಣಿಗೆಯು ಹಲವು ಹೊಸ ನಿರೀಕ್ಷೆಗಳಿಗೆ ಕಾರಣವಾಗಿದ್ದವು. ಆದ್ರೆ. ಇತ್ತ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪನವರ ಕಡೆಗಣನೆ ಸದ್ದು ಮಾಡಿದೆ. ಇದಕ್ಕೆ ಪೂರಕವೆಂಬಂತೆ ಬೆಂಗಳೂರಿನಲ್ಲಿ ಇಂದು(ಜ.20) ರಾಜ್ಯ ಬಿಜೆಪಿ ಹಿರಿಯ ನಾಯಕರ ಸಭೆಗೆ ಯಡಿಯೂರಪ್ಪಗೆ ಆಹ್ವಾನವಿಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: Karnataka Politics: ಯಡಿಯೂರಪ್ಪ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯೇಕ ಮಾತುಕತೆ; ಕರ್ನಾಟಕದ ಬಿಜೆಪಿ ಪ್ಲಾನ್ ಬಗ್ಗೆ ಗರಿಗೆದರಿದ ನಿರೀಕ್ಷೆ

ಹೌದು… ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಸಂತೋಷ್​, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಸೇರಿದಂತೆ ಪದಾಧಿಕಾರಿಗಳು ಭಾಗಿಯಾಗಿದ್ದು, ಚುನಾವಣೆ ತಂತ್ರಗಾರಿಕೆ, ಪ್ರಚಾರ, ಸಂಘಟನೆ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ. ಆದ್ರೆ, ಈ ಮಹತ್ವದ ಸಭೆಯಿಂದ ಯಡಿಯೂರಪ್ಪರನ್ನು ದೂರ ಇಡಲಾಗಿದೆ. ಬಿಎಸ್​ವೈ ಬೆಂಗಳೂರಿನ ಕಾವೇರಿ ನಿವಾದಲ್ಲಿ ಇದ್ದರೂ ಸಹ ರಾಜ್ಯ ಬಿಜೆಪಿ ಇಂದಿನ ಹಿರಿಯರ ಸಭೆಗೆ ಆಹ್ವಾನಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಸಭೆ ಬಗ್ಗೆ ಎರಡು ದಿನಗಳ ಮುಂಚಿತವಾಗಿಯೇ ಎಲ್ಲಾ ನಾಯಕರಿಗೂ ಮಾಹಿತಿ ನೀಡಲಾಗಿದೆ. ಆದ್ರೆ ಯಡಿಯೂರಪ್ಪಗೆ ಯಾವುದೇ ಮಾಹಿತಿ ನೀಡಿಲ್ಲ. ಇದರೊಂದಿಗೆ ಬಿಜೆಪಿ ಯಡಿಯೂರಪ್ಪನವರನ್ನು ಕಡೆಗಣೆ ಮಾಡುತ್ತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಅಲ್ಲದೇ ರಾಜ್ಯ ಬಿಜೆಪಿಯ ಈ ನಡೆ ಯಡಿಯೂರಪ್ಪನವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸುವ ಲಿಂಗಾಯತ ಸಮುದಾಯಕ್ಕೆ ಸೇರಿದ ಯಡಿಯೂರಪ್ಪ ಅವರಿಗೆ ಜಾತಿಯ ಬೆಂಬಲ ಇದೆ. ಆದರೂ ಬಿಜೆಪಿ ಹೈಕಮಾಂಡ್ ಈ ಹಿಂದೆ ಯಡಿಯೂರಪ್ಪ ಅವರನ್ನು ಏಕಾಏಕಿ ಸಿಎಂ ಹುದ್ದೆಯಿಂದ ಕೆಳಗಿಳಿಸಿತ್ತು. ಇದು ವೀರಶೈವ ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಯಡಿಯೂರಪ್ಪ ಬಿಜೆಪಿ ಕಾರ್ಯ ಚಟುವಟಿಕೆಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಚರ್ಚೆ ತೀವ್ರಗೊಂಡ ವೇಳೆ ಬಿಜೆಪಿ‌ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿ ಗೌರವಿಸಲಾಯಿತು. ಈ ಮೂಲಕ ಅವರ ಅಸಮಾಧಾನ ತಣಿಸುವ ಪ್ರಯತ್ನ ನಡೆಸಲಾಯಿತು.

ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹೈಕಮಾಂಡ್​, ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುವ ಪ್ಲಾನ್ ಮಾಡಿದೆ. ಇದಕ್ಕೆ ಪೂರಕವೆಂಬಂತೆ ಸ್ವತಃ ಮೋದಿ ಅವರೇ ಇತ್ತೀಚೆಗೆ ನಡೆದ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಬಿಎಸ್​ವೈ ಜೊತೆ ಪ್ರತ್ಯೇಕ ಚರ್ಚೆ ಮಾಡಿದ್ದರು. ಇದು ಹಲವು ಲೆಕ್ಕಾಚಾರಗಳನ್ನು ಹುಟ್ಟುಹಾಕಿದೆ. ಆದ್ರೆ, ಇದೀಗ ರಾಜ್ಯ ಬಿಜೆಪಿ ಇಂದಿನ ಸಭೆಗೆ ಯಡಿಯೂರಪ್ಪ ಅವರನ್ನು ಆಹ್ವಾನ ನೀಡಿಲ್ಲದಿರುವುದು ಅಚ್ಚರಿ ಜೊತೆಗೆ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:56 pm, Fri, 20 January 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ